ರಸ್ತೆ ಅಭಿವೃದ್ಧಿ ಅವ್ಯವಹಾರದಲ್ಲಿ ಸಿಎಂ ಕಿಕ್ ಬ್ಯಾಕ್
Team Udayavani, Oct 31, 2017, 12:09 PM IST
ಬೆಂಗಳೂರು: “ನಗರದಲ್ಲಿ ರಸ್ತೆ ಅಭಿವೃದ್ಧಿ ಹೆಸರಿನಲ್ಲಿ 2 ಸಾವಿರ ಕೋಟಿ ರೂ. ಅವ್ಯವಹಾರ ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಕೆ.ಜೆ.ಜಾರ್ಜ್ ಸುಮಾರು 400 ಕೋಟಿ ಕಿಕ್ ಬ್ಯಾಕ್ ಪಡೆದಿದ್ದಾರೆ,’ ಎಂದು ಬಿಜೆಪಿ ನಗರ ವಕ್ತಾರ ಎನ್.ಆರ್.ರಮೇಶ್ ಆರೋಪಿಸಿದ್ದಾರೆ.
ನಗರದ ರಸ್ತೆ ಅಭಿವೃದ್ಧಿ ಅವ್ಯವಹಾರಗಳಿಗೆ ಸಂಬಂಧಿಸಿದಂತೆ 3097 ಪುಟಗಳ ದಾಖಲೆಗಳೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಲ್ಲಿ ಬೆಂಗಳೂರಿನ 27 ವಿಧಾನಸಭೆ ಕ್ಷೇತ್ರಗಳಲ್ಲಿನ ರಸ್ತೆ ಅಭಿವೃದ್ಧಿ ಹಾಗೂ ಕಲ್ಯಾಣ ಕಾರ್ಯಕ್ರಮಗಳಿಗೆ 13,608 ಕೋಟಿ ರೂ. ವ್ಯಯಿಸಲಾಗಿದೆ.
ಆದರೆ, ಯಾವುದೇ ಕ್ಷೇತ್ರದಲ್ಲೂ ಗುಣಮಟ್ಟ ಕೆಲಸ ಮಾಡದೆ ಕೋಟ್ಯಂತರ ರೂ. ಅವ್ಯವಹಾರ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಜಾರ್ಜ್ ವಿರುದ್ಧ ಎಸಿಬಿಯಲ್ಲಿ ದೂರು ದಾಖಲಿಸಲಾಗಿದೆ ಎಂದರು.
ಮೂರುವರೆ ವರ್ಷಗಳಲ್ಲಿ ಸರ್ಕಾರ 4878 ಕೋಟಿ ರೂ.ಬಿಡುಗಡೆಗೊಳಿಸಿದೆ. ಇದರೊಂದಿಗೆ ನಗರದ ಪ್ರಮುಖ ರಸ್ತೆಗಳ ಅಭಿವೃದ್ಧಿ ಹಾಗೂ ರಸ್ತೆ ಅಭಿವೃದ್ಧಿಗಾಗಿ 4784 ಕೋಟಿ ರೂ. ಸೇರಿ ಒಟ್ಟು 9661 ಕೋಟಿ ರೂ. ವೆಚ್ಚ ಮಾಡಲಾಗಿದೆ. ಸರ್ಕಾರದಿಂದ ಬಿಡುಗಡೆಯಾಗಿರುವ ಅನುದಾನದಲ್ಲಿ 2 ಸಾವಿರ ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಹೇಳಿದರು.
ಇದರೊಂದಿಗೆ ದೀರ್ಘಕಾಲ ಬಾಳಿಕೆ ಬರುವ ವೈಟ್‌ಟಾಪಿಂಗ್ ರಸ್ತೆ ಮಾಡಲು ಸರ್ಕಾರ ಮುಂದಾಗಿದೆ. ಇಲ್ಲಿ 4 ಕೋಟಿ ರೂ. ವೆಚ್ಚದಲ್ಲಿ ಒಂದು ಕಿ.ಮೀ ರಸ್ತೆ ನಿರ್ಮಿಸಬಹುದು. ಆದರೆ, ಪ್ರಸ್ತುತ ಕಾಮಗಾರಿಗೆ ಹೆಚ್ಚುವರಿಯಾಗಿ 600 ಕೋಟಿ ರೂ. ನಿಗದಿ ಮಾಡಿದ್ದು, ಇದರಲ್ಲೂ 200 ಕೋಟಿ ರೂ. ಕಮಿಷನ್ ಪಡೆಯಲಾಗಿದೆ ಎಂದು ದೂರಿದರು.
ರಾಜ್ಯದಲ್ಲಿರುವ 14 ರಾಷ್ಟ್ರೀಯ ಹೆದ್ದಾರಿಗಳು ಮತ್ತು 114 ರಾಜ್ಯ ಹೆದ್ದಾರಿಗಳ ಒಟ್ಟು ಉದ್ದ 28,311 ಕಿ.ಮೀ. ಇದ್ದು, ಇವುಗಳ ಅಭಿವೃದ್ಧಿಗೆ ವೆಚ್ಚವಾಗುವ ಮೊತ್ತ 7500 ಕೋಟಿ ರೂ.ಗಿಂತ ಕಡಿಮೆ. ಆದರೆ, ಪಾಲಿಕೆ ವ್ಯಾಪ್ತಿಯಲ್ಲಿನ ರಸ್ತೆಗಳ ಅಭಿವೃದ್ಧಿಗೆ 9661 ಕೋಟಿ ರೂ. ವೆಚ್ಚವಾಗಿದೆ. ಆದರೂ ಶೇ.80ರಷ್ಟು ರಸ್ತೆಗಳು ಗುಂಡಿಗಳಿಂದ ಕೂಡಿವೆ ಎಂದು ಆರೋಪಿಸಿದರು.
ವೈಟ್ ಟಾಪಿಂಗ್ ಮಾಡಿದರೆ ಅಂತರ್ಜಲ ಕುಸಿಯುತ್ತೆ!
“ಸರ್ಕಾರ ನಗರದಲ್ಲಿ ನಿರ್ಮಿಸಲು ಮುಂದಾಗಿರುವ ವೈಟ್‌ಟಾಪಿಂಗ್ ರಸ್ತೆಗಳಿಂದ ಅಂತರ್ಜಲ ಮಟ್ಟ ಕುಸಿಯಲಿದೆ. ನಗರದಲ್ಲಿ 2011-12ರಲ್ಲಿ 512 ಅಡಿಗಳಲ್ಲಿದ್ದ ಅಂತರ್ಜಲ ಮಟ್ಟ 2017ಕ್ಕೆ 978 ಅಡಿಗಳಿಗೆ ಇಳಿದಿದೆ. ವೈಟ್‌ಟಾಪಿಂಗ್ ರಸ್ತೆಗಳಿಂದ ಮಳೆ ನೀರು ಭೂಮಿಯಲ್ಲಿ ಇಂಗಲು ಸಾಧ್ಯವಾಗುವುದಿಲ್ಲ. ಆ ಮೂಲಕ ವೈಟ್‌ಟಾಪಿಂಗ್ ರಸ್ತೆಗಳಿರುವ ಕಡೆ ಅಂತರ್ಜಲ ಮಟ್ಟ ಇನ್ನಷ್ಟು ಆಳಕ್ಕೆ ಇಳಿಯಲಿದ್ದು, ಅದನ್ನು ತಡೆಯಲು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದಲ್ಲಿ ದೂರು ದಾಖಲಿಸಲಾಗುವುದು ಎಂದು ರಮೇಶ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್
Fraud Case: ಟೆಕಿಗೆ ವಂಚನೆ ಕೇಸ್; ಆರೋಪಿ ಪತ್ತೆಗೆ ತಂಡ ರಚನೆ
New Year: ಹೊಸ ವರ್ಷಾಚರಣೆಗೆ 7ಲಕ್ಷ ಜನ ಭಾಗಿ ನಿರೀಕ್ಷೆ; ಪರಂ
Fraud case: ಚಿನ್ನಾಭರಣ ವಂಚನೆ ಕೇಸ್; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.