ಕಾಲಮಿತಿ ಮೀರಿದರೆ ಜೈಲು; ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ


Team Udayavani, Sep 29, 2018, 6:00 AM IST

hd-kumarswamy-700.jpg

ಬೆಂಗಳೂರು: “ರಾಜ್ಯದ ಪರಿಶಿಷ್ಟ ಜಾತಿ, ಪಂಗಡದವರ ಕಲ್ಯಾಣಕ್ಕಾಗಿ ಪ್ರಸಕ್ತ ವರ್ಷದಲ್ಲಿ 29,000 ಕೋಟಿ ರೂ. ಅನುದಾನ ಕಾಯ್ದಿರಿಸಲಾಗಿದ್ದು, ಆಯಾ ಇಲಾಖಾ ಅಧಿಕಾರಿಗಳು ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಿ ಕಾಲಮಿತಿಯಲ್ಲಿ ಅನುದಾನ ಬಳಸಬೇಕು. ನಿರ್ಲಕ್ಷ್ಯ ತೋರುವ ಅಧಿಕಾರಿಗಳು ಜೈಲಿಗೆ ಹೋಗಬೇಕಾಗುತ್ತದೆ’ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.

ರಾಜ್ಯ ಅನುಸೂಚಿತ ಜಾತಿಗಳು/ ಅನುಸೂಚಿತ ಪಂಗಡಗಳ ಅಭಿವೃದ್ಧಿ (ಎಸ್‌ಸಿಪಿ-ಟಿಎಸ್‌ಪಿ)  ಕುರಿತಂತೆ ವಿಧಾನಸೌಧದಲ್ಲಿ ಶುಕ್ರವಾರ ನಡೆದ ರಾಜ್ಯ ಪರಿಷತ್‌ ಸಭೆಯ ಅಧ್ಯಕ್ಷತೆ ವಹಿಸಿದ ಪಾಲ್ಗೊಂಡ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ, ಪಂಗಡದವರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ನ ಯೋಜನಾ ಗಾತ್ರದಲ್ಲಿ ಅನುದಾಯ ಕಾಯ್ದಿರಿಸುವ ಕಾಯ್ದೆಯನ್ನು ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಜಾರಿಗೊಳಿಸಿತ್ತು. ಅದರಂತೆ ಅನುದಾನ ಬಳಸದ ಸಂಬಂಧಪಟ್ಟ ಅಧಿಕಾರಿಗಳನ್ನು ಶಿಕ್ಷೆಗೆ ಗುರಿಪಡಿಸುವ ಪ್ರಕ್ರಿಯೆಗೆ ಇದೀಗ ಚಾಲನೆ ನೀಡಲಾಗಿದೆ ಎಂದು ಹೇಳಿದರು.

2013ಕ್ಕೂ ಮೊದಲು ಪರಿಶಿಷ್ಟ ಜಾತಿ, ಪಂಗಡದವರ ಕಲ್ಯಾಣಕ್ಕಾಗಿ ವಾರ್ಷಿಕ ಸುಮಾರು 8000 ಕೋಟಿ ರೂ. ಅನುದಾನ ನೀಡಲಾಗುತ್ತಿತ್ತು. ಹಂತ ಹಂತವಾಗಿ ಇಲಾಖಾವಾರು ಕಾರ್ಯಕ್ರಮಗಳನ್ನು ರೂಪಿಸಿ ಕಳೆದ ವರ್ಷ 22,000 ಕೋಟಿ ರೂ. ಅನುದಾನ ಕಾಯ್ದಿರಿಸಲಾಗಿತ್ತು. ಪ್ರಸಕ್ತ ವರ್ಷ 29,000 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಈ ಅನುದಾನ ಕಾಲಮಿತಿಯೊಳಗೆ ಶೇ.100ರಷ್ಟು ಸದ್ಬಳಕೆಯಾಗಬೇಕೆಂಬ ಉದ್ದೇಶದಿಂದ ಅಧಿಕಾರಿಗಳ ಸಭೆ ನಡೆಸಿ ಕೆಲ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

1.4 ಕೋಟಿ ಫ‌ಲಾನುಭವಿಗಳಿಗೆ ಸೌಲಭ್ಯ
ಎಸ್‌ಸಿಪಿಟಿಎಸ್‌ಪಿ ಕಾಯ್ದೆಯನುಸಾರ ಅನುದಾನ ಹಂಚಿಕೆಯಾದರೂ ಬಳಕೆಗೆ ಸ್ಪಷ್ಟ ಮಾರ್ಗಸೂಚಿ ಇರಲಿಲ್ಲ. ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್‌ ಖರ್ಗೆ ಎರಡೂವರೆ ತಿಂಗಳು ಸಭೆ, ಪರಿಶೀಲನೆ ನಡೆಸಿ ಸರ್ಕಾರದ ಆಶಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಪೂರಕ ಮಾರ್ಗಸೂಚಿಗಳನ್ನು ರೂಪಿಸಿದ್ದಾರೆ. ಅದರಂತೆ ಇಲಾಖೆಗಳು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಿವೆ. ಇಲಾಖೆಯು ಈಗಾಗಲೇ 1.40 ಕೋಟಿ ಫ‌ಲಾನುಭವಿಗಳನ್ನು ಗುರುತಿಸಲು ಕ್ರಮ ಕೈಗೊಂಡಿದೆ ಎಂದು ಹೇಳಿದರು.

ಹಣ ಪೂರ್ಣ ಬಳಕೆಯಾಗುತ್ತಿರಲಿಲ್ಲ
ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಾಯ್ದೆ ಜಾರಿಗೊಳಿದ್ದರೂ ಅನುದಾನ ಪೂರ್ಣ ಪ್ರಮಾಣದಲ್ಲಿ ಬಳಕೆಯಾಗುತ್ತಿರಲಿಲ್ಲ. ಕೆಲ ಇಲಾಖೆ ಅಧಿಕಾರಿಗಳು ಹಣವನ್ನು ಬ್ಯಾಂಕ್‌ನಲ್ಲಿ ಠೇವಣಿ ಮಾಡುವುದು ಸೇರಿ ಇತರೆ ಕ್ರಮಗಳಿಂದ ಶೇ.100ರಷ್ಟು ಅನುದಾನ ಬಳಸುತ್ತಿರಲಿಲ್ಲ. ಇದೀಗ ಹಣ ವೆಚ್ಚ ಮಾಡಿ ಕಾರ್ಯಕ್ರಮ ಅನುಷ್ಠಾನಗೊಳಿಸದೆ ನಿರ್ಲಕ್ಷ್ಯ ತೋರುವವರು ಶಿಕ್ಷೆಗೆ ಗುರಿಯಾಗಲಿದ್ದಾರೆ ಎಂದು ಹೇಳಿದರು.

ಹಿಂದೆ ಕಾಯ್ದೆಯಿದ್ದರೂ ನಿಯಮಾವಳಿಗಳನ್ನು ರೂಪಿಸಿರಲಿಲ್ಲ. ಇದೀಗ ನಿಯಮಾವಳಿ ರಚನೆಯಾಗಿದ್ದು, ಶಿಕ್ಷೆಗೆ ಅವಕಾಶವಿದೆ. ಹಾಗಾಗಿ ಸೂಕ್ತ ಯೋಜನೆ, ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಬೇಕು. ದುರ್ಬಳಕೆಯಾಗದಂತೆ ಎಚ್ಚರ ವಹಿಸಬೇಕು. ಕಾಲಮಿತಿಯಲ್ಲಿ ಅನುದಾನ ಬಳಸಬೇಕು ಎಂದು ಸೂಚಿಸಲಾಗಿದೆ. ಅನುದಾನ ಬಳಸಲೇಬೇಕು. ನಿರ್ಲಕ್ಷಿಸಿದರೆ ಜೈಲಿಗೆ ಹೋಗಬೇಕಾಗುತ್ತದೆ.  ಸಮರ್ಪಕವಾಗಿ ಸಕಾಲದಲ್ಲಿ ಬಳಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

6-mandya

Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ  87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ

5-dinesh

Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

16-onion

Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

15-

Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.