ಸಿಎಂ, ಶಾ ರಾಜೀನಾಮೆಗೆ ಮಹಿಳಾ ಕಾಂಗ್ರೆಸ್ ಆಗ್ರಹ
Team Udayavani, Dec 21, 2019, 10:46 AM IST
ಬೆಂಗಳೂರು: ದೇಶದಲ್ಲಿ ಅಸಂವಿಧಾನಿಕ ಪೌರತ್ವ ಕಾಯ್ದೆ ತಿದ್ದುಪಡಿ ಹಾಗೂ ಎನ್ ಆರ್‌ಸಿ ಜಾರಿಗೊಳಿಸಲು ತೀರ್ಮಾನಿಸಿ ದೇಶದ ಜನತೆಯ ಮೇಲೆ ದೌರ್ಜನ್ಯ ನಡೆಸುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಅಮಾಯಕರ ಮೇಲೆ ಗೋಲಿ ಬಾರ್ ಮಾಡಿ ಸಾವಿಗೆ ಕಾರಣವಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಕ್ಷಣ ರಾಜೀನಾಮೆ ನೀಡಬೇಕು ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಆಗ್ರಹಿಸಿದೆ.
ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ. ಪುಷ್ಪಾ ಅಮರನಾಥ್ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದ ಕಾರ್ಯಕರ್ತೆ ಯರು, ದೇಶದಲ್ಲಿ ಎನ್ ಆರ್‌ಸಿ ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಕಾನೂನು ಬಾಹಿರವಾಗಿದ್ದು, ಕೇಂದ್ರ ಸರ್ಕಾರದ ಸಂವಿಧಾನ ಬಾಹಿರ ನಡೆಯ ವಿರುದ್ಧ ಪ್ರಜಾಸತ್ತಾತ್ಮಕ ದಾರಿಯಲ್ಲಿ ಪ್ರತಿಭಟನೆ ನಡೆಸುತ್ತಿರುವವರನ್ನು ಹತ್ತಿಕ್ಕುವ ಪ್ರಯತ್ನವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಡುತ್ತಿದ್ದಾರೆ.
ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಪೊಲೀಸರ ದಾಳಿ, ಮಹಿಳೆಯರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ಇತಿಹಾಸಕಾರ ರಾಮಚಂದ್ರ ಗುಹಾ ಅವರನ್ನು ಕೊರಳ ಪಟ್ಟಿ ಹಿಡಿದು ಅವಮಾನ ಮಾಡಲಾಗಿದೆ. ಇದೆಲ್ಲದಕ್ಕೂ ಕಾರಣರಾಗಿರುವ ಅಮಿತ್ ಶಾ, ನೈತಿಕ ಹೊಣೆ ಹೊತ್ತು ತಕ್ಷಣ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು. ಅಲ್ಲದೆ ಮಂಗಳೂರಿ ನಲ್ಲಿ ಪ್ರತಿಭಟನಾ ನಿರತರ ಮೇಲೆ ಗೋಲಿಬಾರ್ ಮಾಡಿಸಿ, ಇಬ್ಬರು ಅಮಾಯಕರ ಸಾವಿಗೆ ಕಾರಣವಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿ ಯೂರಪ್ಪ ಅವರೂ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮಾಜಿ ಕಾರ್ಪೋರೇಟರ್ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ
Gold Fraud Case: ಐಶ್ವರ್ಯ ಗೌಡ ದಂಪತಿಗೆ ಹೈಕೋರ್ಟ್ನಿಂದ ಜಾಮೀನು
Aishwarya Gowda Case: ಇನ್ನೊಂದು ಚಿನ್ನದಂಗಡಿಗೆ ವಂಚಿಸಿದ್ದ ಐಶ್ವರ್ಯ ಗ್ಯಾಂಗ್
Arrested: ಟ್ಯಾಟೂ ಆರ್ಟಿಸ್ಟ್ ಬಂಧನ: 2.50 ಕೋಟಿ ರೂ. ಡ್ರಗ್ಸ್ ಜಪ್ತಿ
Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.