ಸಿಎಂ ವಿರುದ್ಧ ಸಿ.ಟಿ. ರವಿ ವಾಗ್ಧಾಳಿ
Team Udayavani, Mar 23, 2018, 6:35 AM IST
ಬೆಂಗಳೂರು:ಚಿಕ್ಕಮಗಳೂರಿನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ನನ್ನನ್ನು ಲೂಟಿ ರವಿ ಎಂದು ಕರೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಚಾಮುಂಡಿ ಬೆಟ್ಟಕ್ಕೆ ಬಂದು ಪ್ರಮಾಣ ಮಾಡಿ ನಾನು ಮಾಡಿದ ಲೂಟಿ ಸಾಬೀತುಪಡಿಸಬೇಕು ಇಲ್ಲದಿದ್ದರೆ ಅವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗುತ್ತೇನೆ ಎಂದು ಶಾಸಕ ಸಿ.ಟಿ. ರವಿ ಎಚ್ಚರಿಕೆ ನೀಡಿದ್ದಾರೆ.
ಗುರುವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನನ್ನು “ಸಿ.ಟಿ.ರವಿ ಅಲ್ಲ, ಲೂಟಿ ರವಿ’ ಎಂದು ಹೇಳುವ ಮೂಲಕ ಮುಖ್ಯಮಂತ್ರಿಯವರು ಚಿಕ್ಕಮಗಳೂರು ಕ್ಷೇತ್ರದ ಜನರಿಗೆ ಅಪಮಾನ ಮಾಡಿದ್ದಾರೆ. ಈ ಆರೋಪ ಸಾಬೀತುಪಡಿಸಲಿ ಇಲ್ಲದಿದ್ದರೆ, ಸಾರ್ವಜನಿಕವಾಗಿ ಕ್ಷಮೆ ಕೇಳಲಿ. ಎರಡೂ ಮಾಡದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗಿ. ಈ ಬಗ್ಗೆ ಈಗಾಗಲೇ ವಕೀಲರೊಂದಿಗೆ ಚರ್ಚಿಸಿದ್ದೇನೆ ಎಂದು ಹೇಳಿದರು.
ಚಿಕ್ಕಮಗಳೂರು ಒಂದು ಸಣ್ಣ ಕ್ಷೇತ್ರ ನಾನು ಅಲ್ಲಿನ ಶಾಸಕ. ಕ್ಷೇತ್ರದ ಶಾಸಕನಾಗಿ ನಾನು ಯಾವುದೇ ವರ್ಗಾವಣೆ ದಂಧೆ ಅಥವಾ ಪರ್ಸಂಟೇಜ್ ವ್ಯವಹಾರದಲ್ಲಿ ತೊಡಗಿಸಿಕೊಂಡಿಲ್ಲ ಎಂದರು.
ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿಯವರ ಚಿಕ್ಕಮಗಳೂರು ಪ್ರವಾಸವನ್ನು ಟೀಕಿಸಿದ ಸಿ.ಟಿ. ರವಿ, ಕಾಂಗ್ರೆಸ್ ಯುವರಾಜ ಚಿಕ್ಕಮಗಳೂರಿಗೆ ಬಂದು ತಮ್ಮ ಅಜ್ಜಿ ಇಂದಿರಾಗಾಂಧಿಯವರನ್ನು ನೆನಪಿಸಿಕೊಂಡಿದ್ದಾರೆ. ಆದರೆ, ಅಜ್ಜಿಗೆ ರಾಜಕೀಯ ಪುನರ್ಜಜನ್ಮ ಕೊಟ್ಟ ಕ್ಷೇತ್ರದ ಜನತೆಗೆ ಕಾಂಗ್ರೆಸ್ ಪಕ್ಷ ಕೊಟ್ಟಿದ್ದೇನು? ಅಜ್ಜಿ ಹೇಳಿದ ರೈಲು ಬರಲು 40 ವರ್ಷ ಬೇಕಾಯಿತು. ಅಧಿಕಾರ ಇದ್ದಾಗ ಇಟಲಿ ನೆನಪಾಗುವ ರಾಹುಲ್‌ಗಾಂಧಿಗೆ ಅಧಿಕಾರ ಇಲ್ಲದಾಗ ಚಿಕ್ಕಮಗಳೂರು ನೆನಪಾಗಿದೆ. ಹಿಂದೂ ಧರ್ಮ ಒಡೆಯುವ ಕೆಲಸ ಮಾಡಬೇಡಿ ಎಂದು ಶೃಂಗೇರಿ ಜಗದ್ಗುರುಗಳು ಕೊಟ್ಟಿರುವ ಎಚ್ಚರಿಕೆಯ ಆಶಿರ್ವಾದ ಅಲ್ಲೇ ಬಿಟ್ಟು ಹೋಗಬೇಡಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ
ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು
87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ :ಹಿಂದಿ ಹೇರಿಕೆಯ ವಿರುದ್ಧ ಕಹಳೆ
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.