ಕೋವಿಡ್ ನಿಯಂತ್ರಣ ಕುರಿತು ಸಚಿವರ ಜೊತೆ ಸಿಎಂ ಚರ್ಚೆ
Team Udayavani, Jun 2, 2021, 7:30 PM IST
ಬೆಂಗಳೂರು: ರಾಜ್ಯದಲ್ಲಿ ವ್ಯಾಪಿಸಿರುವ ಕೋವಿಡ್-19 ಸೋಂಕು ನಿಯಂತ್ರಣದ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಸಚಿವರು ಹಾಗೂ ಅಧಿಕಾರಿಗಳ ಜೊತೆ ಚರ್ಚಿಸಿದರು.
ಮುಖ್ಯಮಂತ್ರಿಗಳು ಇಂದು ( ಜೂನ್ 2) ತಮ್ಮ ನಿವಾಸದಲ್ಲಿ ಸಚಿವರು ಹಾಗೂ ಅಧಿಕಾರಿಗಳ ಜೊತೆ ಕೋವಿಡ್ 19 ರ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ ಪ್ರಸ್ತುತ ಇರುವ ಪರಿಸ್ಥಿತಿ ಯ ಬಗ್ಗೆ ಪರಾಮರ್ಶೆ ನಡೆಸಿದರು.
ಆಕ್ಸಿಜನ್ ಎಲ್ಲಿ ಹೆಚ್ಚಾಗಿದೆ ಎಲ್ಲಿ ಕಡಿಮೆ ಬೇಡಿಕೆ ಇದೆ ಅನ್ನೋದರ ಬಗ್ಗೆ ನಿಗಾ ಇಟ್ಟು ಆಕ್ಸಿಜನ್ ಜಿಲ್ಲಾವಾರು ಹಂಚಿಕೆ ಬಗ್ಗೆ ನಿಗಾ ವಹಿಸಲು ಸೂಚಿಸಲಾಯಿತು.
ಹಳ್ಳಿಗಳಲ್ಲಿ ಕರೋನ ನಿಯಂತ್ರಣ ಬಗ್ಗೆ ಹೆಚ್ಚು ಗಮನ ಹರಿಸುವಂತೆ ಸೂಚನೆ ನೀಡಲಾಯಿತು. ಬ್ಲಾಕ್ ಫಂಗಸ್ ಪೆಟಾಲಿಟಿ ಹೆಚ್ಚಾಗಿದ್ದು ಅದನ್ನು ನಿಯಂತ್ರಿಸಲು ಕ್ರಮ ವಹಿಸುವಂತೆ ಸೂಚಿಸಲಾಯಿತು. ಕೇಂದ್ರ ಸರ್ಕಾರ ಮಾರ್ಗಸೂಚಿಯಂತೆ ಕರೋನ ಸೋಂಕನ್ನು ನಿಯಂತ್ರಿಸಲು ಸೂಕ್ತ ಕ್ರಮ ವಹಿಸಲು ಸೂಚಿಸಲಾಯಿತು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.