ಅಕ್ರಮ ವಲಸಿಗರ ಪತ್ತೆಗೆ ನಾಗರಿಕರ ಸಹಕಾರ ಅಗತ್ಯ
Team Udayavani, Aug 16, 2018, 12:57 PM IST
ಮಹದೇವಪುರ: ನಗರದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ಮತ್ತು ಆಫ್ರಿಕಾರನ್ನು ಪತ್ತೆಹಚ್ಚಲು ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದು ಶಾಸಕ ಅರವಿಂದ ಲಿಂಬಾವಳಿ ಹೇಳಿದರು.
72ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಹದೇವಪುರದ ಕಾಡುಗುಡಿ ಸರ್ಕಾರಿ ಶಾಲೆಯಲ್ಲಿ ಧ್ವಜಾರೋಹಣದ ಬಳಿಕ ಮಾತನಾಡಿ, ಸಿಲಿಕಾನ್ ಸಿಟಿಯಲ್ಲಿ ಅನ್ಯ ರಾಜ್ಯಗಳ ಹೆಸರಿನಲ್ಲಿ ಬಾಂಗ್ಲ ಮತ್ತು ಆಫ್ರಿಕಾ ದೇಶಿಗರು ಅಕ್ರಮವಾಗಿ ನೆಲೆಸಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಇದು ರಾಜ್ಯ ಜನತೆಗೂ ತೊಂದರೆ, ರಾಜ್ಯಕ್ಕೂ ಅಪಖ್ಯಾತಿ ಎಂದರು.
ವಿಸಾ ಮುಗಿದರೂ ಅಕ್ರಮವಾಗಿ ನಗರದಲ್ಲಿ ನೆಲೆಸಿರುವ ವಿದೇಶಿಗರನ್ನು ವಾಪಸ್ ಕಳುಹಿಸಲು ಬೆಂಗಳೂರಿನಲ್ಲಿ ಗಡಿಪಾರು ಕೇಂದ್ರ ಸ್ಥಾಪನೆ ಮಾಡಲು ಕೇಂದ್ರ ಗƒಹಸಚಿವ ರಾಜನಾಥ್‌ಸಿಂಗ್ ರವರಿಗೆ ಮನವಿ ಮಾಡಲಾಗಿದೆ. ಗಡಿಪಾರು ಕೇಂದ್ರ ಸ್ಥಾಪನೆ ಭರವಸೆ ನೀಡಿದ್ದಾರೆ ಎಂದು ಹೇಳಿದರು.
ಈ ವೇಳೆ ಅರಣ್ಯ ಇಲಾಖೆ ವತಿಯಿಂದ ಸಸಿಗಳನ್ನು ವಿತರಣೆ ಮಾಡಲಾಯಿತು. ಹಸಿರು ಕರ್ನಾಟಕ ನಿರ್ಮಾಣ ಮಾಡುವುದಾಗಿ ನೆರೆದಿದ್ದ ಶಾಲಾ ಮಕ್ಕಳು ಗಣ್ಯರು ಪ್ರತಿಜ್ಞೆ ಮಾಡಿದರು. ನಗರದ 15 ಕ್ಕೂ ಹೆಚ್ಚು ಶಾಲೆಗಳ ಮಕ್ಕಳು ಕಾಡುಗೋಡಿಯ ಪ್ರಮುಖ ರಸ್ತೆಗಳಲ್ಲಿ ಪಧ ಸಂಚಲನ ಮಾಡಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು.
ಪಾಲಿಕೆ ಸದಸ್ಯ ಎಸ್. ಮುನಿಸ್ವಾಮಿ, ಮಾಜಿ ನಗರಸಬೆ ಸದಸ್ಯ ಆಶ್ವಥ್‌ನಾರಾಯಣ ರೆಡ್ಡಿ, ಏಕಲವ್ಯ ಪ್ರಶಸ್ತಿ ಪುರಸ್ಕೃತ ಕಬ್ಬಡಿ ಪಿಳ್ಳಪ್ಪ, ಯುವಮೋರ್ಚ ಅಧ್ಯಕ್ಷ ರಾಜೇಶ್, ಮುಖಂಡರಾದ ವೀರಸ್ವಾಮಿರೆಡ್ಡಿ ಮತ್ತಿತರರು ಹಾಜರಿದ್ದರು.
ಗಡೀಪಾರು ಕೇಂದ್ರ ಆರಂಭಿಸಲು ಕೇಂದ್ರಕ್ಕೆ ಮನವಿ: ನಗರದಲ್ಲಿ ನೆಲೆಸಿರುವ ಅಕ್ರಮ ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ ವಿದೇಶಿ ಪ್ರಜೆಗಳನ್ನು ಗಡೀಪಾರು ಮಾಡುವ ಸಂಬಂಧ ಬೆಂಗಳೂರಿನಲ್ಲಿ ಗಡೀಪಾರು ಕೇಂದ್ರ ಆರಂಭಿಸುವಂತೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಶಾಸಕ ಅರವಿಂದ ಲಿಂಬಾವಳಿ ಮತ್ತು ಸಂಸದ ಪಿ.ಸಿ.ಮೋಹನ್ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.
ದೆಹಲಿಯಲ್ಲಿ ಭಾನುವಾರ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಮತ್ತು ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜುಜು ಅವರನ್ನು ಭೇಟಿ ಮಾಡಿದ ಅರಂವಿಂದ ಲಿಂಬಾವಳಿ ಮತ್ತು ಪಿ.ಸಿ.ಮೋಹನ್, ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಅಕ್ರಮ ವಿದೇಶಿಯರನ್ನು ಅವರ ದೇಶಕ್ಕೆ ವಾಪಸ್ ಕಳುಹಿಸಲು ಗಡೀಪಾರು ಕೇಂದ್ರ ಸ್ಥಾಪಿಸುವ ಸಂಬಂಧ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಕೋರಿದರು.
ವಿದೇಶಾಂಗ ಕಾಯ್ದೆಯನ್ವಯ ಈ ರೀತಿ ಅಕ್ರಮವಾಗಿ ನೆಲೆಸಿರುವ ವಿದೇಶಿಗರನ್ನು ಪತ್ತೆಹಚ್ಚಿ ಅವರನ್ನು ಗಡೀಪಾರು ಮಾಡಲು ಕೇಂದ್ರ ಸರ್ಕಾರಕ್ಕೆ ಅಧಿಕಾರವಿದೆ ಹೀಗಾಗಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.