ಉಷ್ಣ ವಿದ್ಯುತ್‌ ಸ್ಥಾವರಗಳಲ್ಲಿ ತಲೆದೋರಿದೆ ಕಲ್ಲಿದ್ದಲು ಕ್ಷಾಮ


Team Udayavani, Oct 18, 2018, 7:39 AM IST

12.jpg

ಬೆಂಗಳೂರು: ರಾಜ್ಯದ ಉಷ್ಣ ವಿದ್ಯುತ್‌ ಸ್ಥಾವರಗಳಲ್ಲಿ ತೀವ್ರ ಕಲ್ಲಿದ್ದಲು ಅಭಾವ ತಲೆ ದೋರಿದೆ. ರಾಯಚೂರಿನ ಆರ್‌ಟಿಪಿಎಸ್‌ ಘಟಕಗಳಲ್ಲಿ ಕಲ್ಲಿದ್ದಲು ದಾಸ್ತಾನು ಶೂನ್ಯಕ್ಕಿಳಿದಿದ್ದರೆ, ಉಳಿದೆಡೆ ಅಲ್ಪಸ್ವಲ್ಪ ದಾಸ್ತಾನು ಸಂಗ್ರಹವಷ್ಟೇ ಇದ್ದು, ಸೂಪರ್‌ ಕ್ರಿಟಿಕಲ್‌ ಸ್ಥಿತಿಗೆ ತಲುಪಿವೆ.

ರಾಜ್ಯದ ಉಷ್ಣ ಸ್ಥಾವರಗಳಿಗೆ ಪ್ರಧಾನವಾಗಿ ಕಲ್ಲಿದ್ದಲು ಪೂರೈಸುತ್ತಿರುವ ಮಹಾರಾಷ್ಟ್ರದ ವೆಸ್ಟ್ರನ್‌ ಕೋಲ್‌ ಫೀಲ್ಡ್ಸ್ ಲಿಮಿಟೆಡ್‌ (ಡಬ್ಲೂಸಿಎಲ್‌) ನಿಗದಿತ ಪ್ರಮಾಣಕ್ಕಿಂತ ಶೇ.55ರಷ್ಟು ಕಡಿಮೆ ಕಲ್ಲಿದ್ದಲು ಪೂರೈಸುತ್ತಿರುವುದರಿಂದ ತೀವ್ರ ಅಭಾವ ತಲೆದೋರಿದೆ. ಜತೆಗೆ ತೆಲಂಗಾಣದ ಸಿಂಗರೇಣಿ ಕೊಲಿರೀಸ್‌ ಕಂಪನಿ ಲಿಮಿಟೆಡ್‌ (ಎಸ್‌ಸಿಸಿಎಲ್‌) ಕೂಡ ನಿಗದಿಗಿಂತ ಶೇ.20ರಷ್ಟು ಕಡಿಮೆ ಪ್ರಮಾಣದಲ್ಲಿ ಕಲ್ಲಿದ್ದಲು ವಿತರಿಸುತ್ತಿರುವುದು ಸಮಸ್ಯೆಗೆ ಕಾರಣವಾಗಿದೆ. ರಾಜ್ಯದಲ್ಲಿ ಮುಂಗಾರು ಮುಗಿದು ಮಳೆ ಪ್ರಮಾಣ ತಗ್ಗುತ್ತಿದ್ದಂತೆ ವಿದ್ಯುತ್‌ ಬೇಡಿಕೆ ಏರುಮುಖವಾಗಿದೆ.  ಸದ್ಯ ಸರಾಸರಿ 10,000ದಿಂದ 10,500 ಮೆಗಾವ್ಯಾಟ್‌ ವಿದ್ಯುತ್‌ ಬೇಡಿಕೆಯಿದ್ದು, ಉಷ್ಣ ವಿದ್ಯುತ್‌ ಉತ್ಪಾದನೆ ಮೇಲೆ ಹೆಚ್ಚಿನ ಒತ್ತಡವಿದೆ. ಆದರೆ ಕಲ್ಲಿದ್ದಲು ಕೊರತೆಯಿಂದಾಗಿ ವಿದ್ಯುತ್‌ ಉತ್ಪಾದನೆಯಲ್ಲಿ ಕೊರೆಯಾಗಿ ಕ್ಷಾಮ ತಲೆದೋರುವ ಆತಂಕವಿದೆ.

ದಾಸ್ತಾನು ಶೂನ್ಯ: ರಾಯಚೂರಿನ ಆರ್‌ಟಿಪಿಎಸ್‌ ಸದ್ಯ ಕಲ್ಲಿದ್ದಲು ದಾಸ್ತಾನು ಪ್ರಮಾಣ ಶೂನ್ಯ ತಲುಪಿದೆ. ಆಯಾ ದಿನ ಪೂರೈಕೆಯಾಗುವ ಕಲ್ಲಿದ್ದಲು ದಹಿಸಿ ವಿದ್ಯುತ್‌ ಉತ್ಪಾದಿಸುವ ಸಂಕಷ್ಟದ ಸ್ಥಿತಿಗೆ ತಲುಪಿದೆ. ಸಾಮಾನ್ಯವಾಗಿ ಉಷ್ಣ ಸ್ಥಾವರಗಳಲ್ಲಿ ತಿಂಗಳಿಗೆ ಸಾಕಾಗುವಷ್ಟು ಕಲ್ಲಿದ್ದಲು ದಾಸ್ತಾನು ಇರಬೇಕು. 10 ದಿನಕ್ಕೆ ಅಗತ್ಯವಾದಷ್ಟು ಕಲ್ಲಿದ್ದಲು ದಾಸ್ತಾನು ಇದ್ದರೆ ಕ್ರಿಟಿಕಲ್‌ ಸ್ಥಿತಿ ಎಂದು ಪರಿಗಣಿಸಲಾಗುತ್ತಿದೆ. ಸದ್ಯ ದಾಸ್ತಾನು ಸಂಪೂರ್ಣ ಖಾಲಿಯಾಗಿರುವುದರಿಂದ ಸೂಪರ್‌ ಕ್ರಿಟಿಕಲ್‌ ಸ್ಥಿತಿಗೆ ತಲುಪಿದೆ. ಹಾಗಾಗಿ ಎಂಟು ಘಟಕಗಳ ಪೈಕಿ ಒಂದು ಘಟಕ ವಾರ್ಷಿಕ ನಿರ್ವಹಣೆಯಡಿ ಸ್ಥಗಿತವಾಗಿದ್ದರೆ ಇನ್ನು ಮೂರು ಘಟಕಗಳು ಕಲ್ಲಿದ್ದಲು ಕೊರತೆ ಕಾರಣಕ್ಕೆ ಉತ್ಪಾದನೆ ಸ್ಥಗಿತಗೊಂಡಿದೆ. ಹಾಗಾಗಿ ನಾಲ್ಕು ಘಟಕಗಳಷ್ಟೇ ಕಾರ್ಯ ನಿರ್ವಹಿಸುತ್ತಿವೆ.

ಬಳ್ಳಾರಿಯ ಬಿಟಿಪಿಎಸ್‌ನಲ್ಲಿ 37,000 ಟನ್‌ ಕಲ್ಲಿದ್ದಲು ದಾಸ್ತಾನು ಇದೆ. ಸದ್ಯ ಒಂದು ಘಟಕವನ್ನಷ್ಟೇ ಕಾರ್ಯಾಚರಣೆಯಲ್ಲಿಟ್ಟುಕೊಂಡು ಕಲ್ಲಿದ್ದಲು ದಾಸ್ತಾನಿಗೆ ಪ್ರಯತ್ನ ನಡೆದಿದೆ. ಯರಮರಸ್‌ನ ವೈಟಿಪಿಎಸ್‌ ಸ್ಥಾವರದಲ್ಲಿ ಒಂದು ಘಟಕವಷ್ಟೇ ವಿದ್ಯುತ್‌ ಉತ್ಪಾದಿಸುತ್ತಿದ್ದು, ಸದ್ಯ 75,000 ಟನ್‌ ಕಲ್ಲಿದ್ದಲು ದಾಸ್ತಾನು ಇದೆ. ಆರ್‌ಟಿಪಿಎಸ್‌ಗೆ ಸಮರ್ಪಕವಾಗಿ ಕಲ್ಲಿದ್ದಲು ಪೂರೈಕೆಯಾಗದಿದ್ದಾಗ ಉಳಿದ ಸ್ಥಾವರಗಳಲ್ಲಿನ ದಾಸ್ತಾನು ಬಳಸಬೇಕಾದ ಸ್ಥಿತಿ ಇದೆ. ಕಲ್ಲಿದ್ದಲು ಕೊರತೆಗೆ ಕಾರಣ: ಮಹಾರಾಷ್ಟ್ರದ ಡಬ್ಲೂಸಿಎಲ್‌ ಸಂಸ್ಥೆಯು ರಾಜ್ಯಕ್ಕೆ ಪೂರೈಸಬೇಕಾದ ಕಲ್ಲಿದ್ದಲು ಪ್ರಮಾಣದಲ್ಲಿ ಶೇ.45ರಷ್ಟು ಮಾತ್ರ ಪೂರೈಸುತ್ತಿದೆ. ಕಳೆದ ಏಪ್ರಿಲ್‌ನಿಂದ ಸೆಪ್ಟೆಂಬರ್‌ವರೆಗೆ ನಿಗದಿತ ಪ್ರಮಾಣಕ್ಕಿಂತ ಶೇ.55ರಷ್ಟು ಕಲ್ಲಿದ್ದಲು ಕಡಿಮೆ ಪೂರೈಸಿರುವುದರಿಂದ ತೀವ್ರ ಅಭಾವ ಸೃಷ್ಟಿಯಾಗಿದೆ. ಎಸ್‌ಸಿಸಿಎಲ್‌ ಸಂಸ್ಥೆಯು ಶೇ.80ರಷ್ಟು ಕಲ್ಲಿದ್ದಲು ಪೂರೈಸುತ್ತಿರುವುದರಿಂದ ಶೇ.20ರಷ್ಟು ಕಲ್ಲಿದ್ದಲು ಕೊರತೆ ತಲೆದೋರಿದೆ.

ನಿಗದಿತ ಕಲ್ಲಿದ್ದಲು ಪೂರೈಕೆಗೆ ಮನವಿ
ಡಬ್ಲೂಸಿಎಲ್‌ ಸಂಸ್ಥೆ ನಿತ್ಯ ಗಣಿಗಾರಿಕೆಯಿಂದ ಹೊರತೆಗೆಯುವ ಕಲ್ಲಿದ್ದಲು ಪ್ರಮಾಣದಲ್ಲಿ ಸಿಂಹಪಾಲು ಮಹಾರಾಷ್ಟ್ರ,, ಗುಜರಾತ್‌ ರಾಜ್ಯಗಳಿಗೆ ಪೂರೈಕೆಯಾಗುತ್ತಿದೆ. ಆದರೆ ಕರ್ನಾಟಕಕ್ಕೆ ಹಂಚಿಕೆಯಾದಷ್ಟು ಕಲ್ಲಿದ್ದಲು ಪೂರೈಸದೆ ತಾರತಮ್ಯ ತೋರುತ್ತಿದೆ. ಇದರಿಂದಾಗಿ ಕಲ್ಲಿದ್ದಲು ಅಭಾವ ಸೃಷ್ಟಿಯಾಗಿದೆ. ಆಯಾ ದಿನ ಪೂರೈಕೆಯಾಗುವ ಕಲ್ಲಿದ್ದಲು ಬಳಸಿ ವಿದ್ಯುತ್‌ ಉತ್ಪಾದಿಸುವ ಸ್ಥಿತಿ ಗಂಭೀರವಾದುದು. ಹಾಗಾಗಿ ಗಣಿ ಸಂಸ್ಥೆಗಳು ಒಪ್ಪಂದದನ್ವಯ ನಿಗದಿತ ಪ್ರಮಾಣದಲ್ಲಿ ಕಲ್ಲಿದ್ದಲು ಪೂರೈಸುವಂತೆ ಮನವಿ ಮಾಡಲಾಗುತ್ತಿದೆ ಎಂದು ಇಂಧನ ಇಲಾಖೆ ಮೂಲಗಳು ತಿಳಿಸಿವೆ.

ಕಲ್ಲಿದ್ದಲು ಪೂರೈಕೆಗೆ ಕೇಂದ್ರಕ್ಕೆ ಸಿಎಂ ಮನವಿ
ಬೆಂಗಳೂರು: ರಾಜ್ಯದ ಉಷ್ಣ ವಿದ್ಯುತ್‌ ಸ್ಥಾವರಗಳಲ್ಲಿ ತೀವ್ರ ಕಲ್ಲಿದ್ದಲು ಕೊರತೆ ತಲೆದೋರಿದ್ದು, ಕೇಂದ್ರ ಸರ್ಕಾರಿ ಸ್ವಾಮ್ಯದ ಡಬ್ಲೂಸಿಎಲ್‌ ಸಂಸ್ಥೆಯು ಒಪ್ಪಂದದ ಪ್ರಕಾರ ಕಲ್ಲಿದ್ದಲು ಪೂರೈಸದಿರುವುದೇ ಇದಕ್ಕೆ ಕಾರಣ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ದೂರಿದ್ದಾರೆ. ನಿತ್ಯ 1,720 ಮೆ.ವ್ಯಾ.ವಿದ್ಯುತ್‌ ಉತ್ಪಾದನೆ ಸಾಮರ್ಥಯವಿರುವ ರಾಯಚೂರಿನ ಆರ್‌ಟಿಪಿಎಸ್‌ ಘಟಕದಲ್ಲಿ ಕಲ್ಲಿದ್ದಲು ದಾಸ್ತಾನು ಶೂನ್ಯಕ್ಕೆ ತಲುಪಿದೆ. 

ಡಬ್ಲೂಸಿಎಲ್‌ ಸಂಸ್ಥೆಯು ಈವರೆಗೆ ಪೂರೈಸಬೇಕಾದ ಕಲ್ಲಿದ್ದಲು ಪ್ರಮಾಣದಲ್ಲಿ 6 ಲಕ್ಷ ಟನ್‌ ಕಲ್ಲಿದ್ದಲು ಪೂರೈಸಿಲ್ಲ. ಈ ಕೊರತೆ ನೀಗಿಸಲು ಎಂಸಿಎಲ್‌ ಸಂಸ್ಥೆ ಮೂಲಕ ಕಲ್ಲಿದ್ದಲು ಪೂರೈಸುವಂತೆ ಕೇಂದ್ರ ಕಲ್ಲಿದ್ದಲು ಸಚಿವರಾದ ಪಿಯೂಷ್‌ ಗೋಯೆಲ್‌ ಅವರಿಗೆ ಪತ್ರದ ಮುಖೇನ ಮನವಿ ಮಾಡಲಾಗಿದೆ. ಹಾಗೆಯೇ ಡಬ್ಲೂಸಿಎಲ್‌ ಸಂಸ್ಥೆಗೆ ಒಪ್ಪಂದದ ಪ್ರಕಾರ ಪೂರ್ಣ ಪ್ರಮಾಣದಲ್ಲಿ ಕಲ್ಲಿದ್ದಲು ಪೂರೈಕೆ ವ್ಯವಸ್ಥೆ ಕಲ್ಪಿಸುವ ಮೂಲಕ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಗೆ ಸಹಕರಿಸು ವಂತೆಯೂ ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ.

ಎಂ. ಕೀರ್ತಿಪ್ರಸಾದ್ 

ಟಾಪ್ ನ್ಯೂಸ್

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

7-r-ashok

Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್‌. ಅಶೋಕ್‌

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

3

Kundapura: ಅಕಾಲಿಕ ಮಳೆ; ಭತ್ತ ಕಟಾವಿಗೆ ಅಡ್ಡಿ; ಬೆಳೆ ನಾಶದ ಭೀತಿಯಲ್ಲಿ ರೈತರು

2

Ullal: ತೊಕ್ಕೊಟ್ಟು-ಮುಡಿಪು ರಸ್ತೆಗೆ ತೇಪೆ ಕಾಮಗಾರಿ

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

1

Sullia: ಬಿಎಸ್ಸೆನ್ನೆಲ್‌ ಟವರ್‌ಗೆ ಸೋಲಾರ್‌ ಪವರ್‌!

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.