14500 ಕೋಟಿ ರೂಪಾಯಿ ಮೌಲ್ಯದ ತೆಂಗು, ಅಡಿಕೆ ನಷ್ಟ
Team Udayavani, Sep 16, 2017, 7:00 AM IST
ಬೆಂಗಳೂರು:ರಾಜ್ಯದಲ್ಲಿ ಬರ ಹಾಗೂ ಮಳೆ ಕೊರತೆಯಿಂದ ಅಡಿಕೆ ಮತ್ತು ತೆಂಗು ಐದೂವಾರೆ ಸಾವಿರ ಹೆಕ್ಟೇರ್‌ನಷ್ಟು ನಷ್ಟವಾಗಿದ್ದು, ಕೇಂದ್ರದ ನೆರವಿಗಾಗಿ ಕಾಯುತ್ತಿದ್ದೇವೆ. ಒಂದೊಮ್ಮೆ ಕೇಂದ್ರ ಸರ್ಕಾರ ಕೊಡದಿದ್ದರೆ ರಾಜ್ಯ ಸರ್ಕಾರದಿಂದಲೇ ಪರಿಹಾರ ನೀಡುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ.
ವಿಧಾನಸೌದದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರು ಸಾವಿರ ಹೆಕ್ಟೇರ್ ತೆಂದು, ಎರಡೂವರೆ ಸಾವಿರ ಹೆಕ್ಟೇರ್ ಅಡಿಕೆ ಬೆಳೆ ನಷ್ಟವಾಗಿದ್ದು, ಇದರ ಮೌಲ್ಯ 14500 ಕೋಟಿ ರೂ.ಗಳು. ನಿಯಮಾನುಸಾರ ಕೇಂದ್ರಕ್ಕೆ 4500 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ಎರಡು ಸಾವಿರ ಕೋಟಿ ರೂ. ಕೊಡುವುದಾಗಿ ಭರವಸೆ ದೊರೆತಿದೆ. ಆದರೆ, ಇನ್ನೂ ಹಣ ಬಿಡುಗಡೆಯಾಗಿಲ್ಲ ಎಂದು ಹೇಳಿದರು.
ಕೇಂದ್ರ ಸರ್ಕಾರದಿಂದ ನೆರವು ಬರದಿದ್ದರೆ ತಕ್ಷಣಕ್ಕೆ ರಾಜ್ಯ ಸರ್ಕಾರವೇ ಪರಿಹಾರ ನೀಡುವ ಬಗ್ಗೆಯೂ ಚರ್ಚೆ ನಡೆದಿದೆ. ಆದರೆ, ಎಕರೆ ಅಥವಾ ಹೆಕ್ಟೇರ್‌ಗೆ ಎಷ್ಟು ಪರಿಹಾರ ಎಂಬುದು ಇನ್ನೂ ನಿಗದಿ ಮಾಡಿಲ್ಲ ಎಂದು ತಿಳಿಸಿದರು.
ಈ ತಿಂಗಳ ಅಂತ್ಯದವರೆಗೂ ಹವಾಮಾನ ಪರಿಸ್ಥಿತಿ ನೋಡಿ ಬರಪೀಡಿತ ತಾಲೂಕುಗಳ ಪಟ್ಟಿ ಮಾಡಲಾಗುವುದು. ರಾಜ್ಯದಲ್ಲಿ ಕೆಲವೆಡೆ ಉತ್ತಮ ಮಳೆಯಾಗಿದ್ದರೂ ಮಲೆನಾಡು, ಕರಾವಳಿ ಭಾಗ ಸೇರಿ ಜೂನ್‌ನಿಂದ ಸೆಪ್ಟೆಂಬರ್‌ವರೆಗೆ ಒಟ್ಟಾರೆ ಶೇ.30 ರಷ್ಟು ಮಳೆ ಕೊರತೆಯಿದೆ ಎಂದರು.
ಶಿವಮೊಗ್ಗದಲ್ಲಿ ಶೇ.30, ಮಂಗಳೂರಿನಲ್ಲಿ ಶೇ.20 ರಷ್ಟು ಮಳೆ ಕೊರತೆಯಾಗಿದೆ. ಚಿತ್ರದುರ್ಗ, ಹಾಸನ, ತುಮಕೂರು ಭಾಗಗಳಲ್ಲಿ ಕುಡಿಯುವ ನೀರಿಗೆ ತೊಂದರೆ ಇದ್ದು ಟ್ಯಾಂಕರ್‌ಗಳಲ್ಲಿ ಪೂರೈಕೆ ಮಾಡಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಹೊಸ ತಾಲೂಕುಗಳ ರಚನೆ ಕಾರ್ಯ ಭರದಿಂದ ಸಾಗಿದೆ. 43 ಕಡೆ ಯಾವುದೇ ಸಮಸ್ಯೆ ಇಲ್ಲ. ಕೆಲವೆಡೆ ಮಾತ್ರ ಹೋಬಳಿ ಸೇರಿಸುವ ಹಾಗೂ ತೆಗೆಯುವ ವಿಚಾರದಲ್ಲಿ ಸ್ವಲ್ಪ ಗೊಂದಲ ಇದ್ದು ಸರಿಪಡಿಸಲಾಗುವುದು ಎಂದು ತಿಳಿಸಿದರು.
ಕಾಯ್ದೆ
ಇನಾಮಿ¤ ರದ್ದು ಆದ ನಂತರ 9 ಕಾಯ್ದೆ ಬಂದರೂ ಗೇಣಿದಾರರಿಗೆ ಜಮೀನು ಹಕ್ಕು ಸಿಕ್ಕಿಲ್ಲ. ಹೀಗಾಗಿ, ಹೊಸ ಕಾಯ್ದೆ ತರುವ ಬಗ್ಗೆಯೂ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಮುಂದಿನ ಅಧಿವೇಶನದಲ್ಲಿ ಇದರ ಬಗ್ಗೆ ಚರ್ಚಿಸಿ ಕಾಯ್ದೆ ತರಲಾಗುವುದು ಎಂದು ಹೇಳಿದರು.
ಅಕ್ರಮ-ಸಕ್ರಮ ವಿಚಾರದಲ್ಲಿ ಗ್ರಾಮಿಣ ಭಾಗದಲ್ಲಿ 2.78 ಲಕ್ಷ ಅರ್ಜಿ ವಿಲೇವಾರಿ ಮಾಡಿದ್ದು, ಇನ್ನೂ 2.60 ಲಕ್ಷ ಅರ್ಜಿ ಬಾಕಿಯಿದೆ. ಅದೇ ರೀತಿ ನಗರ ಭಾಗದಲ್ಲಿ 1.18 ಲಕ್ಷ ಅರ್ಜಿ ವಿಲೇವಾರಿಯಾಗಿದ್ದು 49,178 ಅರ್ಜಿ ಬಾಕಿಯಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಅಕ್ರಮ-ಸಕ್ರಮ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ
*ರಾಜ್ಯದಲ್ಲಿ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಸರ್ಕಾರಿ ಭೂಮಿಯಲ್ಲಿ ವಾಸಕ್ಕಾಗಿ ಕಟ್ಟಿಕೊಂಡ ಮನೆಗಳ ಅಕ್ರಮ-ಸಕ್ರಮ ಸಂಬಂಧ ಅರ್ಜಿ ಸಲ್ಲಿಕೆಗೆ ಮತ್ತೆ ಕಾಲಾವಕಾಶ ಕೊಡುವ ಬಗ್ಗೆ ಚರ್ಚಿಸಲಾಗುತ್ತಿದೆ. ನಗರ ಭಾಗದಲ್ಲಿ ಸರ್ವೆ ಕಾರ್ಯ ನಡೆಯದ ಕಾರಣ ಇನ್ನೂ ಹಲವಾರು ಜನ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ ಎಂಬ ಮಾಹಿತಿ ಇದೆ. ಹೀಗಾಗಿ, ಸಂಪುಟದಲ್ಲಿ ಚರ್ಚಿಸಿ ಸೆಪ್ಟೆಂಬರ್ 12 ಕ್ಕೆ ಮುಗಿದಿರುವ ಗುಡುವು ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು.
– ಕಾಗೋಡು ತಿಮ್ಮಪ್ಪ, ಕಂದಾಯ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
Report: ಐಸಿಯು ಗಲೀಜು, ಟ್ಯಾಂಕ್‌ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
Contracter Case: ಗುತ್ತಿಗೆದಾರ ಆತ್ಮಹತ್ಯೆ: ಸಚಿವ ಪ್ರಿಯಾಂಕ್ ರಾಜೀನಾಮೆಗೆ ಬಿಜೆಪಿ ಆಗ್ರಹ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
Manipal ಪಾಯ್ಸನ್ ಇನ್‌ಫಾರ್ಮೇಶನ್ ಸೆಂಟರ್; ಸಮುದಾಯಕ್ಕೊಂದು ಉಪಕಾರಿ ಸೇವೆ
UV Fusion: ಆತ್ಮಹತ್ಯೆಗೂ ಆಯಸ್ಸು ಮುಗಿದಿರಬೇಕು
Vavar Mosque: ಶಬರಿಮಲೆ ಯಾತ್ರಿಗಳು ವಾವರ ಮಸೀದಿಗೆ ಹೋಗಬಾರದು: ಬಿಜೆಪಿ ಶಾಸಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.