ಇನ್ಮುಂದೆ ಸರ್ಕಾರಿ ಜಾಹೀರಾತುಗಳಲ್ಲಿ ರಾಜಕಾರಣಿಗಳ ಫೋಟೋಗೆ ಕೊಕ್!
Team Udayavani, Nov 21, 2018, 11:49 AM IST
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಸರ್ಕಾರಿ ಯೋಜನೆಗಳು ಹಾಗೂ ಕಾಮಗಾರಿಗಳ ಕುರಿತ ಜಾಹೀರಾತುಗಳಲ್ಲಿ ರಾಜಕಾರಣಿಗಳು ಹಾಗೂ ರಾಜಕೀಯ ಪಕ್ಷಗಳ ಮುಖಂಡರ ಭಾವಚಿತ್ರಗಳನ್ನು ಬಳಸಲು ನಿರ್ಬಂಧ ಹೇರಿ ಬಿಬಿಎಂಪಿ ಮಹತ್ವದ ಆದೇಶ ಹೊರಡಿಸಿದೆ. ಸುಪ್ರೀಂಕೋರ್ಟ್ ತೀರ್ಪಿನ ಅನ್ವಯ ಪಾಲಿಕೆ ಆಯುಕ್ತ ಮಂಜುನಾಥ್ ಪ್ರಸಾದ್ ಈ ಕುರಿತು ಮಂಗಳವಾರ ಆದೇಶ ಹೊರಡಿಸಿದ್ದಾರೆ.
ಕೇಂದ್ರ, ರಾಜ್ಯ ಹಾಗೂ ಪಾಲಿಕೆ ವತಿಯಿಂದ ನಡೆಸಲಾಗುವ ಜಾರಿಯಾಗುವ ಯೋಜನೆಗಳು ಹಾಗೂ ಕಾಮಗಾರಿಗಳನ್ನು ಪ್ರಚುರ ಪಡಿಸುವ ಸಲುವಾಗಿ ಹೊರಡಿಸಲಾಗುವ ಜಾಹೀರಾತುಗಳಲ್ಲಿ ರಾಷ್ಟ್ರಪತಿ, ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು, ಪ್ರಧಾನ ಮಂತ್ರಿ, ಮುಖ್ಯಮಂತ್ರಿ, ಕೇಂದ್ರ ಹಾಗೂ ರಾಜ್ಯಸರ್ಕಾರದ ಮಂತ್ರಿಗಳು ಹಾಗೂ ರಾಷ್ಟ್ರದ ಮಹಾತ್ಮರ ಭಾವಚಿತ್ರಗಳನ್ನು ಬಳಸಿ ಮುದ್ರಿಸಬೇಕು. ಉಳಿದಂತೆ ಯಾವ ಜನಪ್ರತಿನಿಧಿಗಳ ಭಾವಚಿತ್ರಗಳು ಹಾಗೂ ರಾಜಕೀಯ ಮುಖಂಡರ ಭಾವಚಿತ್ರಗಳನ್ನು ಮುದ್ರಿಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಜತೆಗೆ, ಈಗಾಗಲೇ ಸಾರ್ವಜನಿಕ ಬಸ್‌ನಿಲ್ದಾಣಗಳು, ಕುಡಿಯುವ ನೀರಿನ ಘಟಕಗಳು ಸೇರಿ ಇತರೆ ಸಾರ್ವಜನಿಕ ಪ್ರದೇಶಗಳಲ್ಲಿ ಅಳವಡಿಸಲಾಗಿರುವ ಜಾಹೀರಾತು ಪ್ರಕಟಣೆಗಳಲ್ಲಿ ಜನಪ್ರತಿನಿಧಿಗಳು ಹಾಗೂ ರಾಜಕೀಯ ಮುಖಂಡರ ಭಾವಚಿತ್ರಗಳಿದ್ದರೆ ಕೂಡಲೇ ತೆರವುಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.