Bengaluru: ಬೆಂಕಿ ಅವಘಡ; 6 ಕಾಲೇಜು ಬಸ್‌ಗಳು ಸುಟ್ಟು ಕರಕಲು
Team Udayavani, Jun 30, 2024, 11:06 AM IST
ಬೆಂಗಳೂರು: ಖಾಸಗಿ ನರ್ಸಿಂಗ್ ಕಾಲೇಜೊಂದರ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಲ್ಲಿ ಆರು ಹಳೇಯ ಬಸ್‌ಗಳು ಬೆಂಕಿಗಾಹುತಿಯಾಗಿರುವ ಘಟನೆ ಹೆಗ್ಗನಹಳ್ಳಿ ಕ್ರಾಸ್‌ನಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಹೆಗ್ಗನಹಳ್ಳಿ ಕ್ರಾಸ್‌ನ ಕೆಟಿಜಿ ನರ್ಸಿಂಗ್ ಕಾಲೇಜು ಆವರಣದಲ್ಲಿ ಶನಿವಾರ ಮಧ್ಯಾಹ್ನ ಸುಮಾರು 2.30ಕ್ಕೆ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆಯಲ್ಲಿ ಸಂಚಾರ ಸ್ಥಗಿತಗೊಳಿಸಿದ್ದ 7 ಕಾಲೇಜು ವಾಹನಗಳಿಗೆ ಹಾನಿಯಾಗಿದ್ದು, ಆರು ವಾಹನಗಳು ಭಾಗಶಃ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿವೆ. ಕಾಲೇಜಿನ ಆಡಳಿತ ಮಂಡಳಿ 15 ವರ್ಷ ಸಂಚಾರ ಪೂರೈಸಿದ 7 ವಾಹನಗಳನ್ನು ಕಾಲೇಜಿನ ಆವರಣದ ಖಾಲಿ ಜಾಗದಲ್ಲಿ ನಿಲುಗಡೆ ಮಾಡಿತ್ತು. ಮಧ್ಯಾಹ್ನ ಒಂದು ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಕೆಲವೇ ಕ್ಷಣದಲ್ಲಿ ಪಕ್ಕದ ವಾಹನಗಳಿಗೂ ಬೆಂಕಿ ಆವರಿಸಿ ಹೊತ್ತಿ ಉರಿಯಲು ಆರಂಭಿಸಿವೆ. ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಹಾಗೂ ರಾಜಗೋಪಾಲನಗರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಮೂರು ಅಗ್ನಿಶಾಮಕ ವಾಹನಗಳೊಂದಿಗೆ ಸುಮಾರು ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ 7 ಬಸ್‌ಗಳ ಪೈಕಿ 6 ವಾಹನಗಳಿಗೆ ಹಾನಿಯಾಗಿವೆ. ಹಳೇಯ ಕಾಲೇಜು ವಾಹನಗಳಿಗೆ ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಈ ವಾಹನಗಳು ಸಂಚಾರ ಸ್ಥಗಿತಗೊಳಿಸಿದ್ದರಿಂದ ಹಲವು ದಿನಗಳಿಂದ ಖಾಲಿ ಜಾಗದಲ್ಲಿ ನಿಲುಗಡೆ ಮಾಡಿದ್ದರು. ಘಟನೆಯಲ್ಲಿ ಸದ್ಯ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದರು. ಈ ಸಂಬಂಧ ರಾಜಗೋಪಾಲನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Havyaka Mahasabha: ಡಿ.27ರಿಂದ ಬೆಂಗಳೂರಿನಲ್ಲಿ ತೃತೀಯ ವಿಶ್ವ ಹವ್ಯಕ ಸಮ್ಮೇಳನ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.