Bengaluru: ರಸ್ತೆ ಬದಿ ನಿಂತಿದ್ದ ಲಾರಿಗೆಬೈಕ್‌ ಡಿಕ್ಕಿ: ದುರ್ಮರಣ

Team Udayavani, Jul 1, 2024, 10:45 AM IST

6

ಬೆಂಗಳೂರು: ರಸ್ತೆ ಬದಿ ನಿಲುಗಡೆ ಮಾಡಿದ್ದ ಸಿಮೆಂಟ್‌ ಮಿಕ್ಸರ್‌ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿರುವ ಘಟನೆ ಹೆಬ್ಬಾಳ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಜಾಲಹಳ್ಳಿಯ ಮುತ್ಯಾಲನಗರ ನಿವಾಸಿ ಜನಾರ್ಧನ್‌(26) ಮೃತ ಸವಾರ.

ಹೆಬ್ಟಾಳದ ಭದ್ರಪ್ಪ ಬಡಾವಣೆ ಸಮೀಪದ ರಿಂಗ್‌ ರಸ್ತೆಯಲ್ಲಿ ಭಾನುವಾರ ಮುಂಜಾನೆ ಸುಮಾರು 2.10ಕ್ಕೆ ಈ ಘಟನೆ ನಡೆದಿದೆ. ಬಿಎಂಟಿಸಿಯಲ್ಲಿ ಗುತ್ತಿಗೆ ನೌಕರನಾಗಿರುವ ಜನಾರ್ಧನ್‌, ಯಲಹಂಕದ ಪುಟ್ಟೇನಹಳ್ಳಿ ಬಿಎಂಟಿಸಿ ಘಟಕದಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿಕೊಂಡು ಭಾನುವಾರ ಮುಂಜಾನೆ ದ್ವಿಚಕ್ರ ವಾಹನದಲ್ಲಿ ಯಲಹಂಕದಿಂದ ಮುತ್ಯಾಲನಗರಕ್ಕೆ ತೆರಳುತ್ತಿದ್ದರು. ಮಾರ್ಗ ಮಧ್ಯೆ ರಿಂಗ್‌ ರಸ್ತೆಯಲ್ಲಿ ಹೋಗುವಾಗ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಲುಗಡೆ ಮಾಡಿದ್ದ ಸಿಮಿಂಟ್‌ ಮಿಕ್ಸರ್‌ ವಾಹನಕ್ಕೆ ಹಿಂದಿನಿಂದ ವೇಗವಾಗಿ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸಹಿತ ರಸ್ತೆಗೆ ಬಿದ್ದ ಜನಾರ್ಧನ್‌ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಸ್ಥಳೀಯರು ಜನಾರ್ಧನ್‌ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಪರೀಕ್ಷಿಸಿದ ವೈದ್ಯರು ಮಾರ್ಗ ಮಧ್ಯೆಯೇ ಜನಾರ್ಧನ್‌ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಸಂಚಾರ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ.

ಯಾವುದೇ ಸಿಗ್ನಲ್‌ ಲೈಟ್‌ ಹಾಕದೆ ರಸ್ತೆಯಲ್ಲಿ ಸಿಮೆಂಟ್‌ ಮಿಕ್ಸರ್‌ ವಾಹನ ನಿಲುಗಡೆ ಮಾಡಿದ್ದೇ ಅಪಘಾತಕ್ಕೆ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಸಂಬಂಧ ಸಿಮೆಂಟ್‌ ಮಿಕ್ಸರ್‌ ವಾಹನದ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಾಗಿದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು. ಈ ಸಂಬಂಧ ಹೆಬ್ಟಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Aircel-Maxis Case: ಏರ್‌ಸೆಲ್‌-ಮ್ಯಾಕ್ಸಿಸ್‌ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ

Bhagyanagar: ಹೈದರಾಬಾದ್‌ ಅಲ್ಲ, ಭಾಗ್ಯನಗರ: ಆರೆಸ್ಸೆಸ್‌ ಮತ್ತೆ ಹಕ್ಕೊತ್ತಾಯ

Mahayuthi

Exit Poll: ಮಹಾರಾಷ್ಟ್ರ: ಬಿಜೆಪಿ ನೇತೃತ್ವಕ್ಕೆ ಮತ್ತೆ ಅಧಿಕಾರ, ಜಾರ್ಖಂಡ್‌ನಲ್ಲಿ ಪೈಪೋಟಿ?

Minister K. N. Rajanna: ಸದ್ಯಕ್ಕಂತೂ ಸಚಿವ ಸಂಪುಟ ಪುನಾರಚನೆ ಇಲ್ಲ

Lakshmi Hebbalkar: “ಎಪಿಎಲ್‌, ಬಿಪಿಎಲ್‌ನವರಿಗೆ ಗೃಹಲಕ್ಷ್ಮಿ ಹಣ ಬಂದೇ ಬರುತ್ತೆ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Theft Case: ಕೆಲಸಕ್ಕಿದ್ದ ಆಸ್ಪತ್ರೆಯಲ್ಲೇ ಕಳ್ಳತನ

Arrested: ನಕಲಿ ಕಂಪನಿಗಳನ್ನು ತೆರೆದು ಇಎಸ್‌ಐ ಕಾರ್ಡ್‌ ವಿತರಣೆ ಧಂಧೆ!

Accident: ಆರೋಪಿ ಸೆರೆಗೆ 200 ಕ್ಯಾಮೆರಾ ಪರಿಶೀಲನೆ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Aircel-Maxis Case: ಏರ್‌ಸೆಲ್‌-ಮ್ಯಾಕ್ಸಿಸ್‌ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ

Aircel-Maxis Case: ಏರ್‌ಸೆಲ್‌-ಮ್ಯಾಕ್ಸಿಸ್‌ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ

Bhagyanagar: ಹೈದರಾಬಾದ್‌ ಅಲ್ಲ, ಭಾಗ್ಯನಗರ: ಆರೆಸ್ಸೆಸ್‌ ಮತ್ತೆ ಹಕ್ಕೊತ್ತಾಯ

Bhagyanagar: ಹೈದರಾಬಾದ್‌ ಅಲ್ಲ, ಭಾಗ್ಯನಗರ: ಆರೆಸ್ಸೆಸ್‌ ಮತ್ತೆ ಹಕ್ಕೊತ್ತಾಯ

Mahayuthi

Exit Poll: ಮಹಾರಾಷ್ಟ್ರ: ಬಿಜೆಪಿ ನೇತೃತ್ವಕ್ಕೆ ಮತ್ತೆ ಅಧಿಕಾರ, ಜಾರ್ಖಂಡ್‌ನಲ್ಲಿ ಪೈಪೋಟಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.