![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 4, 2021, 5:15 PM IST
ಬೆಂಗಳೂರು: ಕನ್ನಡದ ಖ್ಯಾತ ಬರಹಗಾರ, ಅಂಕಣಕಾರ ಎಸ್. ಎಫ್ .ಯೋಗಪ್ಪನವರ್ ನಿಧನಕ್ಕೆ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಮೂಲತ: ಬಾಗಲಕೋಟೆ ಜಿಲ್ಲೆಯವರಾದ ಯೋಗಪ್ಪನವರ್ ಲಂಕೇಶ್ ಪತ್ರಿಕೆಯಲ್ಲಿ ಅಂಕಣಕಾರರಾಗಿ ಪ್ರಖ್ಯಾತರಾದರು. ರಾಜ್ಯ ಸರ್ಕಾರದ ವಿವಿಧ ಹುದ್ದೆಗಳಲ್ಲಿ ದಕ್ಷ ಅಧಿಕಾರಿ ಎಂದು ಹೆಸರು ಮಾಡಿದವರು. ಸರ್ಕಾರಿ ವೃತ್ತಿಯ ಜೊತೆಗೆ ಸಾಹಿತ್ಯದ ಒಲವು ಬೆಳೆಸಿಕೊಂಡ ಯೋಗಪ್ಪನವರ್ ತಮ್ಮ ಸೃಜನಶೀಲ ಬರವಣಿಗೆಯ ಮೂಲಕ ಸಾಹಿತ್ಯಾಸಕ್ತರ ಹೃದಯ ಗೆದ್ದವರು.
ದೇವರ ಹೆಸರಿನಲ್ಲಿ ಪ್ರಮಾಣ ಮಾಡಿ, ಪ್ರೀತಿಯೆಂಬುದು ಚಂದ್ರನ ದಯೆ, ಶೋಧ ಮುಂತಾದ ಕಾದಂಬರಿಗಳು, ಆರಾಮ ಕುರ್ಚಿ ಮತ್ತು ಇತರ ಕಥೆಗಳು ಕಥಾಸಂಕಲನ, ಮಾಯಾ ಕನ್ನಡಿ ಮುಂತಾದ ಅನುವಾದಗಳ ಮೂಲಕ ಯೋಗಪ್ಪನವರ್ ಕನ್ನಡ ಸಾಹಿತ್ಯಲೋಕಕ್ಕೆ ಅಮೂಲ್ಯ ಕೊಡುಗೆ ಕೊಟ್ಟಿದ್ದಾರೆ.
ಕರೋನಾ ಕರುಣೆ ಇಲ್ಲದೆ ಕರೆದುಕೊಂಡ ಸಾಂಸ್ಕೃತಿಕ ಲೋಕದ ಮತ್ತೊಂದು ಸಹೃದಯಿ ಜೀವ ನಮ್ಮನ್ನು ಆಗಲಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ಕೊಡಲಿ, ಅವರ ಕುಟುಂಬ ವರ್ಗಕ್ಕೆ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ನೀಡಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಸಚಿವ ಲಿಂಬಾವಳಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.