ಕೋಮಟೋಳ್ಳು ತೆಲುಗು ಕೃತಿ ನಿಷೇಧಿಸಲು ಆಗ್ರಹ
Team Udayavani, Sep 19, 2017, 11:49 AM IST
ಬೆಂಗಳೂರು: ತೆಲಂಗಾಣದ ಸಾಹಿತಿ ಪ್ರೊ.ಕಂಚ ಐಲಯ್ಯ ಷೆಫರ್ಡ್ ಅವರು ಆರ್ಯವೈಶ್ಯ ಸಮುದಾಯವನ್ನು ನಿಂದಿಸುವ ಉದ್ದೇಶದಿಂದ ತೆಲುಗು ಭಾಷೆಯಲ್ಲಿ ಬರೆದಿರುವ “ಸಾಮಾಜಿಕ ಸ್ಮಗ್ಲರ್ ಕೋಮಟೋಳ್ಳು’ ಪುಸ್ತಕವನ್ನು ತಕ್ಷಣವೇ ನಿಷೇಧಿಸಬೇಕು ಮತ್ತು ಲೇಖಕರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ಆರ್ಯವೈಶ್ಯ ಮಹಾಮಂಡಳಿ ಮತ್ತು ಆರ್ಯವೈಶ್ಯ ಒಕ್ಕೂಟ ಆಗ್ರಹಿಸಿದೆ.
ರಾಜ್ಯದ ವಿವಿಧ ಭಾಗಗಳಿಂದ ನಗರಕ್ಕೆ ಬಂದ ಆರ್ಯವೈಶ್ಯ ಸಮುದಾಯದವರು ಸೋಮವಾರ ಟೌನ್‌ಹಾಲ್ ಮುಂದೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು. ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಮಾತನಾಡಿ, ತೆಲಂಗಾಣದ ಲೇಖಕ ಕೆಂಚ ಐಲಯ್ಯರವರು ಆರ್ಯವೈಶ್ಯರನ್ನು ಸ್ಮಗ್ಲರ್ ಎನ್ನುವ ಮೂಲಕ ಇಡೀ ಸಮುದಾಯಕ್ಕೆ ಅಪಮಾನ ಮಾಡಿದ್ದಾರೆ.
ಇದರ ವಿರುದ್ಧ ಆಂಧ್ರ ಪ್ರದೇಶ ಹಾಗೂ ತೆಲಂಗಾಣದ ಮುಖ್ಯಮಂತ್ರಿಗೆ ಮತ್ತು ರಾಜ್ಯದ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ್ದೇವೆ. ಆ ಪುಸ್ತಕವನ್ನು ತಕ್ಷಣದಿಂದಲೇ ನಿಷೇಧಿಸಿ, ಲೇಖಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು. ಒಂದು ವಾರದೊಳಗೆ ಸೂಕ್ತ ಕ್ರಮ ತೆಗೆದುಕೊಳ್ಳದೇ ಇದ್ದರೆ ರಾಜ್ಯದ ಬೀದಿ ಬೀದಿಯಲ್ಲಿ ಹೋರಾಟ ನಡೆಸಲಿದ್ದೇವೆ. ಎಲ್ಲಾ ಪೊಲೀಸ್ ಠಾಣೆಯಲ್ಲೂ ಆ ಲೇಖಕನ ವಿರುದ್ಧ ದೂರು ದಾಖಲಿಸಲಿದ್ದೇವೆ ಎಂದು ಎಚ್ಚರಿಸಿದರು.
ಹಲವಾರು ವರ್ಷದಿಂದ ದಾನಧರ್ಮ ಮಾಡಿಕೊಂಡು ಬರುತ್ತಿರುವ ಈ ಸಮುದಾಯವನ್ನು ಕೀಳಾಗಿ ಬಿಂಬಿಸಿದ್ದಾರೆ. ಗಾಂಧೀಜಿ ಹಾಗೂ ನೆಹರು ಬಗ್ಗೆಯೂ ಹೀನ ಶಬ್ಧಗಳಲ್ಲಿ ಬರೆದಿದ್ದಾರೆ. ಪ್ರಚಾರದ ಗೀಳಿನಿಂದಾಗಿ ಹೀಗೆ ಮಾಡಿದ್ದಾರೆ ಎಂದು ಆರೋಪಿಸಿದರು. ಮಹಾಮಂಡಳಿಯ ಬಿ.ಗೋವಿಂದ, ಗಿರೀಶ್ ಪೆಂಡಕೂರ್, ಕೆ.ವಿಜಯರಾಜೇಶ್, ಎ.ಆರ್.ರಾಮಪ್ರಸಾದ್ ಮೊದಲಾದವರು ಪ್ರತಿಭಟನೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Belman: ಅಗ್ನಿ ದುರಂತದ ಅಪಾಯ; ಟ್ರಾನ್ಸ್‌ಫಾರ್ಮರ್ ಸುತ್ತ ಸ್ವಚ್ಛತೆ
Network Problem: ಹಲೋ…ಹಲೋ…ಹಲೋ ಟೆಸ್ಟಿಂಗ್!
Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ
Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ
BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.