ಬರಲಿದೆ ಸಿದ್ದು ಕಾಮ್‌ಕೀ ಬಾತ್
Team Udayavani, Oct 3, 2017, 6:00 AM IST
ಬೆಂಗಳೂರು: ರಾಜ್ಯ ಸರ್ಕಾರದ ಕಾರ್ಯಾನುಷ್ಠಾನದ ಬಗ್ಗೆ ಜನ ಸಾಮಾನ್ಯರಿಗೆ ತಿಳಿಸಲು “ಕಾಮ್ ಕೀ ಬಾತ್’ ಯೋಜನೆ ರೂಪಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಜನ್ಮದಿನದ ಅಂಗವಾಗಿ ಸೋಮವಾರ ವಿಧಾನಸೌಧದ ಆವರಣದಲ್ಲಿರುವ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜ್ಯ ಸರ್ಕಾರದ ಸಾಧನೆಯನ್ನು ಮಾತುಗಳ ಮೂಲಕ ಜನತೆಗೆ ತಿಳಿಸಲು ಪ್ರಧಾನಿ ನರೇಂದ್ರ ಮೋದಿಯವರ ಮನ್ ಕೀ ಬಾತ್‌ಗೆ ಪರ್ಯಾಯವಾಗಿ ಪ್ರಾಸಬದ್ಧ ವಾಕ್ಯ ಹುಡುಕಿ ಕಾಮ್ ಕೀ ಬಾತ್ ಎಂದು ಹೆಸರಿಟ್ಟಿದ್ದೇವೆ. ಇದು ಕೇವಲ ಮನದ ಮಾತಲ್ಲ. ಸಾಧನೆ ಹಾಗೂ ಕಾರ್ಯದ ಅನುಷ್ಠಾನದ ಮಾತು ಎಂದು ವಿವರಿಸಿದರು.
ಈ ಮೂಲಕ ಕನ್ನಡಕ್ಕೆ ಪ್ರಾಧಾನ್ಯತೆ ಕಡಿಮೆ ಮಾಡಲಾಗುತ್ತಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ಕಾರ್, ಬಸ್ ಮೊದಲಾದ ಇಂಗ್ಲಿಷ್ ಪದಗಳಿಗೆ ಕನ್ನಡದಲ್ಲಿ ಪರ್ಯಾಯ ಪದವಿಲ್ಲ. ಕುವೆಂಪು ಹೇಳಿರುವಂತೆ ಇಂಗ್ಲಿಷ್ ಪದದ ಕೊನೆಯಲ್ಲಿ “ಉ’ಕಾರ ಸೇರಿಸಿದರೆ ಅದು ಕನ್ನಡ ಪದವಾಗುತ್ತದೆ. ಹೀಗೆ ಜನ ಸಾಮಾನ್ಯರನ್ನು ಸುಲಭದಲ್ಲಿ ತಲುಪುವ ಉದ್ದೇಶದಿಂದ ಮನ್‌ಕೀ ಬಾತ್‌ಗೆ ಪರ್ಯಾಯವಾಗಿ ಕಾಮ್ ಕೀ ಬಾತ್ ಆರಂಭಿಸುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.