ನೀರಾವರಿ ಸಚಿವರಿಂದ ಕಮಿಷನ್ ಬೇಡಿಕೆ
Team Udayavani, Jun 30, 2018, 6:00 AM IST
ಬೆಂಗಳೂರು: ರಾಜ್ಯದಲ್ಲಿರುವುದು ಕಮಿಷನ್ ಸರ್ಕಾರ ಎಂದು ಆರೋಪಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಹತ್ತು ಸಾವಿರ ಕೋಟಿ ರೂ.ಗಳನ್ನು ಗುತ್ತಿಗೆದಾರರಿಗೆ ಬಾಕಿ ಕೊಡಬೇಕಿದೆ. ಜಲಸಂಪನ್ಮೂಲ ಸಚಿವರಿಗೆ ಹಣ ಬಿಡುಗಡೆ ಮಾಡಿ ಎಂದರೆ ಕಮೀಷನ್ ಕೇಳುತ್ತಿದ್ದಾರೆ ಎಂದು ಗುತ್ತಿಗೆದಾರರೇ ಹೇಳುತ್ತಿದ್ದಾರೆಂದು ಪರೋಕ್ಷವಾಗಿ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಆರೋಪ ಮಾಡಿದ್ದಾರೆ.
ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ರಾಜ್ಯಕಾರ್ಯಕಾರಿಣಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾಗಿ 27 ದಿನ ಕಳೆದರೂ ಯಾವುದೇ ಕೆಲಸಗಳು ಪ್ರಾರಂಭವಾಗಿಲ್ಲ. ಹತ್ತು ಸಾವಿರ ಕೋಟಿ ರೂ.ಗುತ್ತಿಗೆದಾರರಿಗೆ ಬಾಕಿ ಕೊಡಬೇಕಿದೆ. ನೀರಾವರಿ ಸಚಿವರಿಗೆ ಹಣ ಬಿಡುಗಡೆ ಮಾಡಿ ಎಂದರೆ ಹಿಂದಿನ ಸರ್ಕಾರದಲ್ಲಿ ಕೊಟ್ಟಿರುವ ಕಮೀಷನ್‌ಗೂ ನಮಗೂ ಸಂಬಂಧವಿಲ್ಲ. ಈಗ ನಮಗೆ ಕೊಡುವುದನ್ನು ಕೊಟ್ಟು ರಿಲೀಸ್ ಮಾಡಿಸಿಕೊಳ್ಳಿ ಎಂದು ಹೇಳ್ತಾರೆ ಅಂತ ಗುತ್ತಿಗೆದಾರರು ನನಗೆ ತಿಳಿಸಿದರು ಎಂದು ಆರೋಪಿಸಿದರು.
ಬೀದಿಗಿಳಿಯಿರಿ: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಚುನಾವಣೆಗೂ ಮುನ್ನ ನೀಡಿದ್ದ ಭರವಸೆಗಳನ್ನು ಈಡೇರಿಸದಿದ್ದರೆ ಬೀದಿಗಿಳಿದು ಹೋರಾಟ ಮಾಡಿ ಎಂದು ಇದೇ ವೇಳೆ ಅವರು ಕಾರ್ಯಕರ್ತರಿಗೆ ಕರೆ ನೀಡಿದರು.
ಸಮ್ಮಿಶ್ರ ಸರ್ಕಾರ ಬಜೆಟ್ ಮಂಡಿಸಲಿ. ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ರೈತರು ರಾಷ್ಟ್ರೀಕೃತ ಬ್ಯಾಂಕ್ ಹಾಗೂ ಸಹಕಾರ ಬ್ಯಾಂಕುಗಳಲ್ಲಿ ಮಾಡಿರುವ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದ ಅವರು ವಿಶ್ವಾಸದ್ರೋಹ ಮಾಡಿದ್ದಾರೆ. ಮಹಿಳೆಯರಿಗೆ,ಹಿರಿಯ ನಾಗರಿಕರಿಗೆ, ಗರ್ಭಿಣಿಯರಿಗೆ ಮಾಸಾಶನ ಕೊಡುವುದಾಗಿ ತಿಳಿಸಿದ್ದಾರೆ. ಇವೆಲ್ಲವ ನ್ನೂ ಈಡೇರಿಸದಿದ್ದರೆ ಬೀದಿ ಬೀದಿಯಲ್ಲಿ ಇವರ ವೈಫಲ್ಯ ಹರಾಜು ಹಾಕಬೇಕಿದೆ ಎಂದು ಹೇಳಿದರು.
ಅಪ್ಪ-ಮಕ್ಕಳಿಗೆ ಅಧಿಕಾರದ ಹಪಾಹಪಿ ಇಲ್ಲದೇ ಇದ್ದಿದ್ದರೆ, ನಾವು ಸರ್ಕಾರ ರಚನೆ ಮಾಡುವುದಿಲ್ಲ. ಪ್ರಣಾಳಿಕೆಯಲ್ಲಿ ನಾವು ಘೋಷಿಸಿರುವ ಕಾರ್ಯಕ್ರಮ ಜಾರಿ ಮಾಡಿದರೆ ಮಾತ್ರ ಬೆಂಬಲ ಕೊಡ್ತೇವೆ ಎಂದು ಹೇಳಬಹುದಿತ್ತು. ಆದರೆ, ಅದು ಮಾಡದೆ ಅಧಿಕಾರಕ್ಕಾಗಿ ಅಪವಿತ್ರ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು.
ಜತೆಗೆ ಈ ಸರ್ಕಾರ ಜಾಸ್ತಿ ಬಾಳುವುದಿಲ್ಲ ಎಂದು ಭವಿಷ್ಯ ನುಡಿದರು. ವಿಧಾನಸಭೆ ಒಳಗೆ ಮತ್ತು ಹೊರಗೆ ನಮ್ಮ ಹೋರಾಟ ಮುಂದುವರಿಯಲಿದೆ. ಅಧಿವೇಶನ ಮುಗಿದ ನಂತರ ರಾಜ್ಯ ಪ್ರವಾಸ ಕೈಗೊಳ್ಳಲಿದ್ದೇನೆ. ನಮ್ಮ ಗುರಿ ಲೋಕಸಭೆ ಚುನಾವಣೆ ಗೆಲ್ಲುವುದಾಗಿದೆ. ರಾಜ್ಯದಿಂದ 25 ಸ್ಥಾನ ಗೆಲ್ಲುವ ಟಾರ್ಗೆಟ್ ನಮಗೆ ನೀಡಲಾಗಿದ್ದು, ಈ ಕ್ಷಣದಿಂದಲೇ ನಾವು ಆ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕು. ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕೈಗೊಂಡಿರುವ ಯೋಜನೆಗಳ ಬಗ್ಗೆ ಜನರಿಗೆ ತಿಳಿಸಬೇಕು ಎಂದು ಹೇಳಿದರು.
ರಾಜ್ಯ ಉಸ್ತುವಾರಿ ಮುರಳೀಧರ್‌ರಾವ್, ಕೇಂದ್ರ ಸಚಿವರಾದ ಅನಂತಕುಮಾರ, ರಮೇಶ್ ಜಿಗಜಿಣಗಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಾಜಿ ಸಚಿವರಾದ ಆರ್.ಅಶೋಕ್, ಗೋವಿಂದ ಕಾರಜೋಳ, ಶೋಭಾ ಕರಂದ್ಲಾಜೆ, ಶ್ರೀರಾಮುಲು,ಅರವಿಂದ ಲಿಂಬಾವಳಿ, ಸಿ.ಟಿ.ರವಿ, ಮುಖಂಡರಾದ ಬಿ.ಎಲ್.ಸಂತೋಷ್, ರವಿಕುಮಾರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.