ಸಿಸಿ ಕ್ಯಾಮೆರಾ ಮೇಲೆ ಆಯೋಗದ ಕಣ್ಣು
Team Udayavani, Mar 14, 2019, 6:06 AM IST
ಬೆಂಗಳೂರು: ಲೋಕಸಭಾ ಚುನಾವಣೆಯ ಅಕ್ರಮಗಳ ನಿಯಂತ್ರಣಕ್ಕೆ ಮುಂದಾಗಿರುವ ಚುನಾವಣಾ ಆಯೋಗವು ನಗರದಲ್ಲಿರುವ ಎಲ್ಲ ಸಿಸಿಟಿವಿ ಕ್ಯಾಮೆರಾಗಳ ಮೇಲೆ ನಿಗಾ ಇಡಲು ಮುಂದಾಗಿದೆ.
ಚುನಾವಣೆಯಲ್ಲಿ ಹಿನ್ನೆಲೆಯಲ್ಲಿ ಮತದಾರರ ಮೇಲೆ ಒತ್ತಡ ಹೇರುವುದು, ಅಕ್ರಮ ಚಟುವಟಿಕೆಗಳನ್ನು ಪತ್ತೆಗೆ ಪಾಲಿಕೆ ಯ ವ್ಯಾಪ್ತಿಯಲ್ಲಿರುವ ಸಿಸಿ ಕ್ಯಾಮೆರಾಗಳನ್ನುಬಳಸಿಕೊಳ್ಳಲು ಆಯೋಗ ಯೋಜನೆ ರೂಪಿಸಿದೆ. ನಗರದಲ್ಲಿ ಸುಮಾರು 5 ಸಾವಿರ ಸಿಸಿ ಕ್ಯಾಮೆರಗಳಿವೆ ಎಂದು ಅಂದಾಜಿಸಲಾಗಿದೆ. ಆ ಪೈಕಿ ಪಾಲಿಕೆಯ 198 ವಾರ್ಡ್‌ಗಳಲ್ಲಿಯೇ 4 ಸಾವಿರ ಕ್ಯಾಮೆರಾಗಳಿದ್ದು, ಉಳಿದಂತೆ ಪ್ರಮುಖ ಜಂಕ್ಷನ್‌ಗಳು ಹಾಗೂ ರಸ್ತೆಗಳಲ್ಲಿ ಅಳವಡಿಸಿರುವ ಕ್ಯಾಮೆರಾಗಳ ಮೊರೆ ಹೋಗಲು ಆಯೋಗ ನಿರ್ಧರಿಸಿದ್ದು, ನಗರ ಪೊಲೀಸ್ ಹಾಗೂ ಪಾಲಿಕೆಯ ಸಿಬ್ಬಂದಿ ಕ್ಯಾಮೆರಾಗಳ ಮೇಲೆ ನಿಗಾವಹಿಸಲಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ನಗರ ಜಿಲ್ಲಾ ಚುನಾವಣಾಧಿಕಾರಿ ಎನ್.ಮಂಜುನಾಥ ಪ್ರಸಾದ್, ನಗರ ಪೊಲೀಸ್ ಆಯುಕ್ತರ
ಸಹಯೋಗದಲ್ಲಿ ನಗರದಲ್ಲಿರುವ ಎಲ್ಲ ಸಿಸಿ ಕ್ಯಾಮೆರಾಗಳನ್ನು ಚುನಾವಣಾ ಕಾರ್ಯಕ್ಕೆ ಬಳಸಿಕೊಳ್ಳಲು ನಿರ್ಧರಿಸಿದ್ದೇವೆ. ಇದರಿಂದಾಗಿ ಕಾನೂನು ಬಾಹಿರ ಚಟುವಟಿಕೆಗಳ ತಡೆಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.