Renukaswamy Case: ಸಾಕ್ಷಿ ಸಿಕ್ಕಿವೆ, ಮೃತನಿಗೆ ನ್ಯಾಯ ಕಲ್ಪಿಸುತ್ತೇವೆ: ಆಯುಕ್ತ
Team Udayavani, Jun 19, 2024, 11:41 AM IST
ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ಕೊಂಚ ನಿರ್ಲಕ್ಷ್ಯವಹಿಸಿದ್ದರೆ, ಪ್ರಕರಣ ಬೇರೆ ತಿರುವು ಪಡೆದುಕೊಳ್ಳುವ ಸಾಧ್ಯತೆ ಇತ್ತು. ಆದರೆ, ಪೊಲೀಸರ ಸಮಯ ಪ್ರಜ್ಞೆಯಿಂದ ಪ್ರಕರಣ ಭೇದಿಸಲಾಗಿದೆ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಹೇಳಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇದುವರೆಗೂ ಸ್ಟಾರ್ ನಟ(ದರ್ಶನ್) ಸೇರಿ 17 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಕಾಮಾಕ್ಷಿಪಾಳ್ಯ ಪೊಲೀಸರ ಸಮಯಪ್ರಜ್ಞೆಯಿಂದ ಈ ಪ್ರಕರಣ ಬೆಳಕಿಗೆ ಬಂದಿದ್ದು, ಕೊಂಚ ನಿರ್ಲಕ್ಷ್ಯ ವಹಿಸಿದ್ದರೆ ಈ ಘಟನೆ ಬೇರೆ ತಿರುವು ಪಡೆದುಕೊಳ್ಳುತಿತ್ತು. ಪ್ರಕರಣ ತನಿಖಾ ಹಂತದಲ್ಲಿರುವುದರಿಂದ ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲು ಸಾಧ್ಯವಿಲ್ಲ. ಆದರೆ, ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಮೂಲಕ ಮೃತ ವ್ಯಕ್ತಿ ಹಾಗೂ ಆತನ ಕುಟುಂಬಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಠಾಣೆ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಹಾಗೂ ಠಾಣೆಯ ಬಳಿ ಶಾಮಿಯಾನ ಹಾಕಿರುವುದರ ಕುರಿತು ಪ್ರತಿಕ್ರಿಯಿಸಿದ ಆಯುಕ್ತರು, ಪ್ರತಿಯೊಂದಕ್ಕೂ ಕಾರಣ ವಿರುತ್ತದೆ. ಆರೋಪಿಗಳಲ್ಲಿ ಸೆಲೆಬ್ರಿಟಿಗಳಿದ್ದು ಹೆಚ್ಚಿನ ಕುತೂಹಲ ಕಂಡು ಬರುತ್ತಿರುವುದರಿಂದ ಕೆಲವೊಂದು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ. ತಾಳ್ಮೆಯಿಂದ ಸಹಕರಿಸಿದರೆ ಪ್ರಕರಣವನ್ನು ಸೂಕ್ತ ರೀತಿಯಲ್ಲಿ ತನಿಖೆ ಮಾಡಲು ಸಾಧ್ಯವಾಗಲಿದೆ. ಪೊಲೀಸರು ಯಾವುದೇ ಒತ್ತಡಕ್ಕೆ ಒಳಗಾಗಿಲ್ಲ. ತಪ್ಪಿತಸ್ಥರಿಗೆ ಶಿಕ್ಷೆಯಾಗುವ ರೀತಿಯಲ್ಲಿ ಸಾಕ್ಷ್ಯಗಳನ್ನು ಕಲೆ ಹಾಕುವ ಮೂಲಕ ನ್ಯಾಯಾಲಕ್ಕೆ ವರದಿ ಸಲ್ಲಿಸಲಾಗುವುದು ಎಂದು ಹೇಳಿದರು.
ಆರೋಪಿಗಳದ್ದು ಹೇಯ ಕೃತ್ಯ: ಸ್ಟಾರ್ ನಟ ಹಾಗೂ ಆತನ ತಂಡ ಮಾಡಿರುವುದು ಹೇಯ ಕೃತ್ಯ. ಈ ಸಂಬಂಧ ಆರೋಪಿಗಳ ವಿರುದ್ಧ ಕೆಲವೊಂದು ಸಾಕ್ಷ್ಯಗಳನ್ನು ಸಂಗ್ರಹಿಸಲಾಗುತ್ತಿದೆ. ಡಿಜಿಟಲ್, ಸಿಸಿ ಕ್ಯಾಮೆರಾ, ಕಾಲ್ ಡಿಟೇಲ್ಸ್ ಸೇರಿ ಎಲ್ಲ ರೀತಿಯ ಪುರಾವೆಗಳನ್ನು ಸಂಗ್ರಹಿಸಲಾಗುತ್ತಿದೆ. ಜತೆಗೆ ಎಲ್ಲಾ ಆರೋಪಿಗಳ ಹಿನ್ನೆಲೆ, ಪ್ರಕರಣದಲ್ಲಿ ಪಾತ್ರದ ಬಗ್ಗೆ ಪ್ರತ್ಯೇಕ ತನಿಖಾ ತಂಡ ರಚಿಸಲಾಗಿದೆ ಎಂದು ಆಯುಕ್ತರು ಮಾಹಿತಿ ನೀಡಿದರು.
ಚಿತ್ರದುರ್ಗದಿಂದ ರೇಣುಕಸ್ವಾಮಿ ಅಪಹರಣ ಮಾಡಿರುವ ಸ್ಥಳ ಮಹಜರು, ಅಲ್ಲಿನ ಆರೋಪಿಗಳ ಚಲನವಲನ ಹಾಗೂ ನಟ ದರ್ಶನ್ ಮತ್ತು ಪವಿತ್ರಾಗೌಡ ಕೊಲೆಗೂ ಮುನ್ನ ಈ ವಿಚಾರವಾಗಿ ಮಾತುಕತೆ ಸೇರಿ 17 ಜನರ ಆರೋಪಿಗಳ ಹಿನ್ನೆಲೆ ಕಲೆ ಹಾಕಲು ಪ್ರತ್ಯೇಕ ತಂಡ ರಚನೆ ಮಾಡಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪಾನಮತ್ತ ವೈದ್ಯ, ನರ್ಸ್‌ನಿಂದ ರೋಗಿಗೆ ಬೇಕಾಬಿಟ್ಟಿ ಇಂಜೆಕ್ಷನ್ ?
Organ Donation; ಸಾವಿನ ನಂತರವೂ ನೆರವಾದ ಜೀವ: 5 ಜೀವ ಉಳಿಸಿದ ಅಂಗಾಂಗ ದಾನ
Cancer: ಎಳೆಯ ಮಕ್ಕಳಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್ ಸಮಸ್ಯೆ
Bengaluru: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಗೆ ಯುವಕನಿಂದ ಲೈಂಗಿಕ ಕಿರುಕುಳ; ದೂರು
Theft: ವಿದ್ಯಾಗಣಪತಿ, ಸುಬ್ರಹ್ಮಣ್ಯ ದೇಗುಲಗಳ ಹುಂಡಿ ಹಣ, 5 ಚಿನ್ನದ ತಾಳಿ ಬೊಟ್ಟು ಕಳವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.