Commissioner B. Dayanand: ಪೊಲೀಸ್ ಡ್ರೆಸ್‌ನಲ್ಲಿ ರೀಲ್ಸ್ ಗೆ ಕಮಿಷನರ್ ಬ್ರೇಕ್
Team Udayavani, Jul 23, 2024, 11:27 AM IST
ಬೆಂಗಳೂರು: ಸಮವಸ್ತ್ರದಲ್ಲಿರುವ ಫೋಟೋ, ವಿಡಿಯೋ, ರೀಲ್ಸ್ ಸೇರಿ ಇಲಾಖೆ ಹಾಗೂ ಪೊಲೀಸ್ ಕರ್ತವ್ಯಗಳಿಗೆ ಸಂಬಂಧಿಸಿದ ಯಾವುದೇ ವಿಷಯಗಳ ಕುರಿತು ಜಾಲತಾಣಗಳಲ್ಲಿ ಹರಿಬಿಡದಂತೆ ಅಧಿಕಾರಿ-ಸಿಬ್ಬಂದಿಗೆ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಎಚ್ಚರಿಸಿದ್ದಾರೆ.
ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನುಉದ್ದೇಶಿಸಿ ಆದೇಶಿಸಿರುವ ನಗರ ಪೊಲೀಸ್ ಆಯುಕ್ತರು, ಸಮವಸ್ತ್ರದಲ್ಲಿರುವ ಫೋಟೋ, ರೀಲ್ಸ್, ವೀಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದು ಹಾಗೂ ಪೊಲೀಸ್ ಇಲಾಖೆಯ ಅಧಿಕೃತ ಕೆಲಸಗಳ ಕುರಿತು ಅನಿಸಿಕೆ ವ್ಯಕ್ತಪಡಿಸುವುದು ನಿಯಮಗಳಿಗೆ ವಿರುದ್ಧವಾಗಿದೆ.
ಇಲಾಖೆಗೆ ಸಂಬಂಧಪಡದಿರುವ ವಿಷಯಗಳು ಇಲಾಖೆಯ ಘನತೆಗೆ ಹಾನಿಯುಂಟು ಮಾಡಬಹುದು. ಪೊಲೀಸ್ ಸಮವಸ್ತ್ರವು ಪೊಲೀಸರ ಬದ್ಧತೆ, ಹೊಣೆಗಾರಿಕೆಯ ಸಂಕೇತವಾಗಿದೆ. ಆದ್ದರಿಂದ ಯಾವುದೇ ಸಾರ್ವಜನಿಕ ಅಥವಾ ಡಿಜಿಟಲ್ ವೇದಿಕೆಯಲ್ಲಿ ಅದರ ಬಳಕೆಯು ಈ ಮೌಲ್ಯಗಳನ್ನು ಪ್ರತಿಬಿಂಬಿಸುವಂತಿರಬೇಕಾಗುತ್ತದೆ. ಯಾವುದೇ ಸರ್ಕಾರಿ ನೌಕರನು ಅಧಿಕೃತವಾದ ಮಾಹಿತಿಯನ್ನು ಮಾಧ್ಯಮ, ಜಾಲತಾಣಗಳಲ್ಲಿ ಹಂಚಿಕೊಳ್ಳುವಂತಿಲ್ಲ. ಸಕ್ಷಮ ಪ್ರಾಧಿಕಾರದಿಂದ ಅಧಿಕೃತ ಮಾನ್ಯತೆ ಪಡೆದ ಅಧಿಕೃತ ಅಧಿಕಾರಿ ಮಾತ್ರವೇ ಸಾಮಾಜಿಕ ಮಾಧ್ಯಮ ಖಾತೆಗಳ ಮೂಲಕ ಮಾಹಿತಿ ಹಂಚಿಕೊಳ್ಳಲು ಅವಕಾಶವಿದೆ. ಪೊಲೀಸ್ ಸಮವಸ್ತ್ರದಲ್ಲಿ ಫೋಟೋಗಳು, ವಿಡಿಯೋಗಳು. ರೀಲ್ಸ್‌ಗಳು ಇತ್ಯಾದಿಗಳನ್ನು ಹರಿಬಿಡದಂತೆ ಜಾಗೃತಗೊಳಿಸಬೇಕು. ಒಂದು ವೇಳೆ ಲೋಪ ಕಂಡರೆ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಎಲ್ಲಾ ವಿಭಾಗಗಳ ಡಿಸಿಪಿಗಳಿಗೆ ಬಿ.ದಯಾನಂದ್ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.