ಆಯೋಗದ ಶಿಫಾರಸು ಪಾಲಿಸದ ಸರ್ಕಾರ


Team Udayavani, Aug 3, 2018, 11:51 AM IST

ayogada.jpg

ಬೆಂಗಳೂರು: ಮಾನವ ಹಕ್ಕುಗಳ ರಕ್ಷಣೆ ಹಾಗೂ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ “ಕ್ರಮ ಜಾರಿ ವರದಿ’ (ಎಟಿಆರ್‌) ಸಲ್ಲಿಸುವಂತೆ ಆಯೋಗ ಮಾಡಿರುವ ಶಿಫಾರಸು ಎರಡು ವರ್ಷ ಕಳೆದರೂ ಕರ್ನಾಟಕ ಪಾಲಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಎಚ್‌.ಎಲ್‌. ದತ್ತು, ಆದಷ್ಟು ಬೇಗ  ಎಟಿಆರ್‌ ಸಲ್ಲಿಸಲು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿದರು.

ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಿಂದ ವಿಕಾಸೌಧದಲ್ಲಿ ಆಯೋಜಿಸಲಾಗಿರುವ ಎರಡು ದಿನಗಳ “ಬಹಿರಂಗ ವಿಚಾರಣೆ ಆಧಿವೇಶನ’ವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದ ಅವರು, ಆಯೋಗದ ಶಿಫಾರಸುಗಳ ಪ್ರಕಾರ ಕ್ರಮ ಜಾರಿ ವರದಿ ಸಲ್ಲಿಸುವ ವಿಚಾರದಲ್ಲಿ ಕರ್ನಾಟಕ ಸರ್ಕಾರದ ನಡೆ ಬಗ್ಗೆ ಅಸಮಧಾನ ವ್ಯಕ್ತಪಡಿಸಿದರು.

ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳ ರಕ್ಷಣೆ, ಹಿರಿಯ ನಾಗರಿಕರು, ಕಾರ್ಮಿಕ ವರ್ಗದ ಹಕ್ಕುಗಳ ರಕ್ಷಣೆ ಕುರಿತು ಚರ್ಚಿಸಲು 2016ರಲ್ಲಿ ಆಯೋಗ ರಾಷ್ಟ್ರಮಟ್ಟದ ಕಾರ್ಯಾಗಾರ ಆಯೋಜಿಸಿತ್ತು. ಎಲ್ಲ ರಾಜ್ಯದ ಸರ್ಕಾರಿ ಪ್ರತಿನಿಧಿಗಳು ಭಾಗವಹಿಸಿದ್ದರು. ಸಾರ್ವಜನಿಕರ ರಕ್ಷಣೆಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ವರದಿ ನೀಡುವಂತೆ ಆಗಲೇ ತಿಳಿಸಲಾಗಿತ್ತು. ಆದರೆ, ಕರ್ನಾಟಕ ಆ ನಿಯಮ ಪಾಲಿಸಿಲ್ಲ ಎಂದರು.

ದೇಶದಲ್ಲಿ ಎನ್‌ಎಚ್‌ಆರ್‌ಸಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ದೂರುಗಳ ತ್ವರಿತ ವಿಲೇವಾರಿಗೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಕೆಲ ರಾಜ್ಯಗಳಲ್ಲಿ ಬಹಿರಂಗ ವಿಚಾರಣೆ ಹಾಗೂ ಶಿಬಿರಗಳನ್ನು ಆಯೋಜಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಮಹಿಳೆಯರು ಮತ್ತು ಮಕ್ಕಳ ರಕ್ಷಣೆ ವಿಚಾರದಲ್ಲಿ ಆಯೋಗ ಕಟಿಬದ್ಧವಾಗಿದೆ. ನಿರ್ದಾಕ್ಷಿéಣ್ಯ ಕ್ರಮಗಳನ್ನೂ ತೆಗೆದುಕೊಳ್ಳಲಾಗುತ್ತಿದೆ.

ಹಾಗೆಯೇ ಕಾರಾಗೃಹಗಳ ಸುಧಾರಣೆ, ಸರ್ಕಾರಿ ಶಾಲೆಗಳ ಉನ್ನತೀಕರಣ, ಆರೋಗ್ಯ ಕೇಂದ್ರಗಳಿಗೆ ವೈದ್ಯರ ನೇಮಕ ಸೇರಿದಂತೆ ಜನ ಸಾಮಾನ್ಯರಿಗೆ ಅಗತ್ಯವಿರುವ ಅಂಶಗಳ ಬಗ್ಗೆ ಸರ್ಕಾರಗಳ ಮೇಲೆ ಒತ್ತಡ ಹೇರಿ ನ್ಯಾಯ ಕೊಡಿಸುವಲ್ಲಿ ಆಯೋಗ ಕಾರ್ಯ ನಿರ್ವಹಿಸುತ್ತಿದ ಎಂದು ಹೇಳಿದರು.

190 ದೂರುಗಳ ವಿಚಾರಣೆ: ಆ.2 ಮತ್ತು 3 ಎರಡು ದಿನಗಳ ಕಾಲ ನಡೆಯಲಿರುವ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಬಹಿರಂಗ ವಿಚಾರಣೆ ಅಧಿವೇಶನದಲ್ಲಿ ಒಟ್ಟು 190 ದೂರುಗಳನ್ನು ಇತ್ಯರ್ಥಪಡಿಸುವ ಗುರಿ ಇಟ್ಟುಕೊಳ್ಳಲಾಗಿದೆ. ಇದಕ್ಕಾಗಿ  ಪ್ರತ್ಯೇಕವಾಗಿ ನಾಲ್ಕು  ತಾತ್ಕಾಲಿಕ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ.

ಆಯೋಗದ ಅಧ್ಯಕ್ಷ ನ್ಯಾ. ಎಚ್‌.ಎಲ್‌ ದತ್ತು, ಸದಸ್ಯರಾದ ನ್ಯಾ. ಪಿ.ಸಿ ಘೋಷ್‌, ನ್ಯಾ. ಡಿ. ಮುರಗೇಷನ್‌ ನ್ಯಾ. ಜ್ಯೋತಿಕಾ ಕಲಾ ಪ್ರತ್ಯೇಕವಾಗಿ ಪ್ರಕರಣ ವಿಚಾರಣೆ ನಡೆಸಿದರು. ಗುರುವಾರ ವಿಚಾರಣೆಗೆ ಬಂದ ದೂರುಗಳ ಪೈಕಿ ಬಹುತೇಕ ಜಾತಿ ನಿಂದನೆ, ಶೋಷಣೆ, ಭೂಒತ್ತುವರಿ, ಪರಿಹಾರ, ಪಿಂಚಣಿ ಸೌಲಭ್ಯದ ಪ್ರಕರಣಗಳೇ ಹೆಚ್ಚಾಗಿದ್ದವು.

ಶಿಕ್ಷಣಾಧಿಕಾರಿಗಳಿಗೆ ತರಾಟೆ: ಪ್ರಾಥಮಿಕ ಶಾಲೆಯ ಶಿಕ್ಷಕರೊಬ್ಬರಿಗೆ ಉನ್ನತ ಶಿಕ್ಷಣಕ್ಕೆ (ಬಿಪಿ.ಎಡ್‌) ಅವಕಾಶ ನಿರಾಕರಿಸಿರುವ ಬಗ್ಗೆ ವಿವರವಾದ ವರದಿ ಕೊಡುವಂತೆ ಆಯೋಗದ ನ್ಯಾ. ಎಚ್‌.ಎಲ್‌. ದತ್ತು ಅಧ್ಯಕ್ಷ ಸರ್ಕಾರಕ್ಕೆ ನಿರ್ದೇಶನ ನೀಡಿದರು. ಬಿಪಿ.ಎಡ್‌ ಕಲಿಯಲು ಏಕ ಕಾಲದಲ್ಲಿ ಅರ್ಜಿ ಸಲ್ಲಿಸಿದ್ದರೂ ನನ್ನ ಅರ್ಜಿ ತಿರಸ್ಕರಿಸಿ, ನನ್ನ ಸಹೋದ್ಯೋಗಿಗೆ ಉನ್ನತ ಶಿಕ್ಷಣಕ್ಕೆ ಅವಕಾಶ ಕೊಡಲಾಗಿದೆ ಎಂದು ದಾವಣಗೆರೆಯ ಚನ್ನಗಿರಿ ತಾಲೂಕಿನ ಶಿಕ್ಷಕ ರವಿಕಿರಣ್‌ ದೂರಿದರು.

ಬೆಳಗ್ಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ನ್ಯಾ. ದತ್ತು, ಕಾನೂನು ಪ್ರಕಾರ ಅವಕಾಶವಿದ್ದರೂ ಯಾಕೆ ಅವಕಾಶ ಕೊಟ್ಟಿಲ್ಲ ಎಂದರು. ಈ ಬಗ್ಗೆ ಮಧ್ಯಾಹ್ನ ಬಂದು ಹಿರಿಯ ಅಧಿಕಾರಿಗಳು ವಿವರಣೆ ನೀಡಲಿ. ಇಲ್ಲವೆಂದರೆ, ದೂರುದಾರನಿಗೆ ಪ್ರತಿ ವರ್ಷ ನಾಲ್ಕು ಲಕ್ಷ ರೂ. ಪರಿಹಾರ ನೀಡುವಂತೆ ಆದೇಶ ಮಾಡುತ್ತೇನೆ ಎಂದು ಎಚ್ಚರಿಸಿದರು. ಇಲಾಖಾಧಿಕಾರಿ ಮಾಹಿತಿ ನೀಡಿದಾಗ, ಪೂರ್ಣ ವರದಿ ನೀಡಲು ಸೂಚಿಸಿದರು.

ಭೂಮಾಲೀಕನಿಗೆ ಪರಿಹಾರದ ಭರವಸೆ: ಮೆಟ್ರೋ ಯೋಜನೆಗೆ ಜಮೀನು ಕಳೆದುಕೊಂಡಿರುವ ಭೂಮಾಲೀಕನಿಗೆ ಕೊಡಬೇಕಾಗಿರುವ 14 ಲಕ್ಷ ರೂ. ಪರಿಹಾರ ಮೊತ್ತವನ್ನು ಒಂದು ತಿಂಗಳಲ್ಲಿ ಪಾವತಿಸುವಂತೆ ಮೆಟ್ರೋ ಮತ್ತು ಕೆಎಐಡಿಬಿ ಅಧಿಕಾರಿಗಳಿಗೆ ನ್ಯಾ. ಎಚ್‌.ಎಲ್‌ ದತ್ತು ಆದೇಶಿಸಿದರು.

ಬೆನ್ನಿಗಾನಹಳ್ಳಿ ನಿವಾಸಿ ಪ್ರಕಾಶ್‌, ಮೆಟ್ರೋ ಮಾರ್ಗ ವಿಸ್ತರಣೆಗೆ ತಮ್ಮ ಕುಟುಂಬಕ್ಕೆ ಸೇರಿದ 135 ಅಡಿ ಜಾಗ ಸ್ವಾಧೀನಪಡಿಸಿಕೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ ಎಂದು ಅಳಲು ತೋಡಿಕೊಂಡರು. ಮನೆ ತೆರವುಗೊಳಿಸಿದ್ದರೆ ಮೆಟ್ರೋ ಮಾರ್ಗ ವಿಸ್ತರಣೆ ಸಾಧ್ಯವಿಲ್ಲ. ಜಮೀನಿಗೆ ಬದಲಾಗಿ ಪರಿಹಾರ ಕೊಡುತ್ತೇವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಪರಿಹಾರ ಕೊಡಿಸುವ ಭರವಸೆ ನೀಡಿದರು.

ಪತಿಯ ಬದಲಿಗೆ ಬಂದ ಪತ್ನಿಗೆ ತಾಕೀತು: ತನ್ನ ಪತಿಗೆ ಅನ್ಯಾಯವಾಗಿದೆ ಎಂದು ದೂರಿದ್ದ ಮೈಸೂರಿನ ಕೇಂದ್ರೀಯ ಆಹಾರ ಸಂಶೋಧನಾ ಸಂಸ್ಥೆಯ (ಸಿಎಫ್ಟಿಆರ್‌ಐ) ಉದ್ಯೋಗಿಯೊಬ್ಬರ ಪತ್ನಿ ಮಾಧವಿ ಮುಕುಂದ ಪದ್ಮಾರೆ ಅವರನ್ನು ನ್ಯಾ. ದತ್ತು ತೀವ್ರ ತರಾಟೆಗೆ ತೆಗೆದುಕೊಂಡರು.

ದೂರಿನ ವಿಚಾರಣೆ ನಡೆಸಿದ ಅವರು, ಆರೋಪ ಇರುವುದು ನಿಮ್ಮ ಪತಿ ಮೇಲೆ, ಆದರೆ ವಿಚಾರಣೆ ನೀವ್ಯಾಕೆ ಬಂದಿದ್ದೀರಿ. ಇದೊಂದು ದಂಡ ಸಮೇತ ವಜಾಗೊಳಿಸಲು ಅರ್ಹವಾದ ಪ್ರಕರಣ. ನಿಮ್ಮ ಪತಿಯ ಮೇಲೆ ಹಣ ದುರ್ಬಳಕೆ ಆರೋಪವಿದೆ. ಅಲ್ಲದೇ ಲೈಂಗಿಕ ದೌರ್ಜನ್ಯದ ಆರೋಪ ಸಹ ಇದೆ ಎಂದರು.

ಹಣ ದುರ್ಬಳಕೆ ಆರೋಪ ಅಲ್ಲಗಳೆದ ಮಾಧವಿ, ಲೈಂಗಿಕ ದೌರ್ಜನ್ಯದ ವಿಚಾರ ಕೇವಲ ಫೇಸ್‌ಬುಕ್‌, ವಾಟ್ಸ್‌ಪ್‌ಗೆ ಸೀಮಿತವಾಗಿತ್ತು ಎಂದು ಸಮಜಾಯಿಷಿ ನೀಡಿದರು. ಇದೇ ವೇಳೆ ಸಿಎಫ್ಟಿಆರ್‌ಐ ಅಧಿಕಾರಿಗಳು ಆರೋಪಗಳಿಗೆ ಸಂಬಂಧಿಸಿದ ವರದಿಯನ್ನು ಆಯೋಗಕ್ಕೆ ಸಲ್ಲಿಸಿದರು. ಸಕ್ಷಮ ಪ್ರಾಧಿಕಾರದ ಮುಂದೆ ಪ್ರಕರಣ ಇತ್ಯರ್ಥಪಡಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.