ಕೊರಟಗೆರೆಯಲ್ಲೇ ಸ್ಪರ್ಧೆ: ಪರಮೇಶ್ವರ್ ಸ್ಪಷ್ಟನೆ
Team Udayavani, Jul 10, 2017, 3:10 AM IST
ತುಮಕೂರು: 2018ರ ವಿಧಾನಸಭಾ ಚುನಾವಣೆಯಲ್ಲಿ ಕೊರಟಗೆರೆ ವಿಧಾನಸಭಾ ಕ್ಷೇತ್ರದಿಂದಲೇ ಸ್ಪರ್ಧಿಸುವುದಾಗಿ
ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಈ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ನಗರ ಸಮೀಪದ ಹೆಗ್ಗರೆಯ ತಮ್ಮ ನಿವಾಸದಲ್ಲಿ ಭಾನುವಾರ ನಡೆಸಿದ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಈ ವಿಷಯ ಹೇಳಿದ್ದಾರೆ. ಹಿಂದಿನ ಚುನಾವಣೆಯಲ್ಲಿನ ಸೋಲಿನ ಪರಾಮರ್ಶೆ ನಡೆಸಿ, ಮುಂದಿನ ಚುನಾವಣೆಯಲ್ಲಿ ಕೊರಟಗೆರೆಯಿಂದಲೇ ಸ್ಪರ್ಧಿಸಬೇಕೆಂದು ಕಾರ್ಯಕರ್ತರು ಒತ್ತಾಯಿಸಿದಾಗ ಪರಮೇಶ್ವರ್ ಒಪ್ಪಿಕೊಂಡಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಮುಖ್ಯಮಂತ್ರಿ ಆಗುವ ಉತ್ಸಾಹದಲ್ಲಿದ್ದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಸೋಲುಂಡ ಹಿನ್ನೆಲೆಯಲ್ಲಿ ಕೊರಟಗೆರೆ ಕ್ಷೇತ್ರದ ಬಗ್ಗೆ ನಿರಾಸಕ್ತಿ ತೋರಿದ್ದರು ಎನ್ನಲಾಗಿದೆ.
ಆದ್ದರಿಂದಲೇ ಪರಮೇಶ್ವರ್ ಬೇರೆ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆಂಬ ಊಹಾಪೋಹಗಳು ಹರಡಿದ್ದವು. ಭಾನುವಾರ ಮಾಧ್ಯಮಗಳಿಗೂ ಮಾಹಿತಿ ನೀಡದೆ ತಮ್ಮ ಮನೆಯಲ್ಲಿ ಕೊರಟಗೆರೆ ಕ್ಷೇತ್ರದಲ್ಲಿನ ಪಕ್ಷದ ಕಾರ್ಯಕರ್ತರ ಸಭೆ ನಡೆಸಿ, ಅಭಿಪ್ರಾಯ ಸಂಗ್ರಹಿಸಿದರು. ನಂತರ ಕೊರಟಗೆರೆಯಲ್ಲಿಯೇ ಸ್ಪರ್ಧಿಸುವುದಾಗಿ ದೃಢಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Contracter Case: ಗುತ್ತಿಗೆದಾರ ಆತ್ಮಹತ್ಯೆ: ಸಚಿವ ಪ್ರಿಯಾಂಕ್ ರಾಜೀನಾಮೆಗೆ ಬಿಜೆಪಿ ಆಗ್ರಹ
Hindi ಸಂವಾದದ ಭಾಷೆ ಮಾಡಲು ಸಂಕಲ್ಪ: ಕೇಂದ್ರ ಸಚಿವ ನಿತ್ಯಾನಂದ ರಾಯ್
Name Road in Row: ಕರ್ನಾಟಕಕ್ಕೇ ಸಿದ್ದರಾಮಯ್ಯ ಅಂತ ಹೆಸರು ಇಡಲಿ: ಎಚ್‌ಡಿಕೆ ವ್ಯಂಗ್ಯ
ನಾವು ಬೀದಿಗಿಳಿದರೆ ಬಿಜೆಪಿಯವರು ಮನೆ ಖಾಲಿ ಮಾಡಬೇಕು: ಸಚಿವ ಪ್ರಿಯಾಂಕ್
Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.