ಉಪಮೇಯರ್‌ ಸ್ಥಾನಕ್ಕೆ ಜೆಡಿಎಸ್‌ನಲ್ಲಿ ಪೈಪೋಟಿ

Team Udayavani, Oct 9, 2018, 12:19 PM IST

bbmp2.jpg

ಬೆಂಗಳೂರು: ರಮೀಳಾ ಉಮಾಂಶಕರ್‌ ಅವರ ನಿಧನದಿಂದ ತೆರವಾಗಿರುವ ಉಪಮೇಯರ್‌ ಸ್ಥಾನಕ್ಕೇರಲು ಜೆಡಿಎಸ್‌ನಲ್ಲಿ ಪೈಪೋಟಿ ಶುರುವಾಗಿದೆ.

ಸೆ.28ರ ಚುನಾವಣೆ ವೇಳೆ ಉಪಮೇಯರ್‌ ಸ್ಥಾನ ತಪ್ಪಿದ್ದಕ್ಕೆ ಅಸಮಧಾನಗೊಂಡು ನೇರವಾಗಿ ಬಿಜೆಪಿಗೆ ಬೆಂಬಲ ಘೋಷಿಸಿದ್ದ ಹಾಗೂ ಚುನಾವಣೆಗೆ ಗೈರಾಗುವ ಮೂಲಕ ಬಿಜೆಪಿಗೆ ಪರೋಕ್ಷವಾಗಿ ಬೆಂಬಲಿಸಿದ್ದ ಮೂವರು ಸದಸ್ಯರು ಇದೀಗ ನಿರಾಸೆಗೊಂಡಿದ್ದು, ಪಕ್ಷ ವಿರೋಧಿ ಚಟುವಟಿಕೆ ಆರೋಪ ಇರುವುದರಿಂದ ಅವರು ಉಪ ಮೇಯರ್‌ ರೇಸ್‌ನಿಂದ ಹೊರಗುಳಿಯುವಂತಾಗಿದೆ.

ಉಪಮೇಯರ್‌ ಆಯ್ಕೆ ಸಂಬಂಧ ಪಕ್ಷದ ನಿರ್ಧಾರವನ್ನು ಬಹಿರಂಗವಾಗಿಯೇ ವಿರೋಧಿಸಿದ್ದ ಮಂಜುಳಾ ನಾರಾಯಣಸ್ವಾಮಿ ಹಾಗೂ ದೇವದಾಸ್‌, ಬಿಜೆಪಿ ಪಾಳಯದಲ್ಲಿ ಗುರುತಿಸಿಕೊಂಡಿದ್ದರು. ಅದೇ ರೀತಿ ನಾಜಿಮಾ ಖಾನ್‌, ಚುನಾವಣೆ ಪ್ರಕ್ರಿಯೆಯಿಂದ ದೂರ ಉಳಿಯುವ ಮೂಲಕ ಬಂಡಾಯ ಸಾರಿದ್ದರು. ಮತದಾನದ ವೇಳೆ ದೇವದಾಸ್‌, ಪಕ್ಷದ ಅಭ್ಯರ್ಥಿ ಪರ ಕೈ ಎತ್ತಿದರೂ ಮಂಜುಳಾ ನಾರಾಯಣಸ್ವಾಮಿ ಸಭಾಂಗಣದಿಂದ ನಿರ್ಗಮಿಸಿದ್ದರು. ಹೀಗಾಗಿ, ಮಂಜುಳಾ ಹಾಗೂ ನಾಜಿಮಾ ಖಾನ್‌ ಅವರಿಗೆ ನೋಟಿಸ್‌ ಸಹ ನೀಡಲಾಗಿತ್ತು.

ಉಪ ಮೇಯರ್‌ ಸ್ಥಾನಕ್ಕೆ ಪ್ರಮುಖವಾಗಿ ಹಾಲಿ ಜೆಡಿಎಸ್‌ ನಾಯಕಿ ನೇತ್ರಾ ನಾರಾಯಣ್‌, ಭದ್ರೇಗೌಡ, ಮಹಾದೇವ್‌ ಹಾಗೂ ರಾಜಶೇಖರ್‌ ಆಕಾಂಕ್ಷಿಗಳಾಗಿದ್ದಾರೆ. ಆ ಪೈಕಿ ರಾಜಶೇಖರ್‌ ಅವರಿಗೆ ಕಳೆದ ಮೂರು ಅವಧಿಯಲ್ಲಿ ಯಾವುದೇ ಅಧ್ಯಕ್ಷ ಸ್ಥಾನಮಾನ ಸಿಕ್ಕಿಲ್ಲ. ಜತೆಗೆ ಕುರುಬ ಸಮುದಾಯಕ್ಕೆ ಸೇರಿದವರು. ರಮೀಳಾ ಸಹ ಅದೇ ಸಮುದಾಯದವರು. ಹೀಗಾಗಿ ರಾಜಶೇಖರ್‌ ಅವರಿ ಉಪಮೇಯರ್‌ ಆಗುವ ಅವಕಾಶ ಹೆಚ್ಚು ಎಂದು ಹೇಳಲಾಗಿದೆ.

ಸ್ಥಾಯಿ ಸಮಿತಿ ನಂತರ ಚುನಾವಣೆ?: ಬಿಬಿಎಂಪಿ ಆಯುಕ್ತರು ಈಗಾಗಲೇ 12 ಸ್ಥಾಯಿ ಸಮಿತಿಗಳ ಅಧ್ಯಕ್ಷ ಹಾಗೂ ಸದಸ್ಯರ ಸ್ಥಾನಗಳಿಗೆ ಚುನಾವಣೆ ನಡೆಸುವ ಕುರಿತಂತೆ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದಿದ್ದು, ನವೆಂಬರ್‌ ಎರಡನೇ ವಾರದಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ. ಆದರೆ, ತೆರವಾಗಿರುವ ಉಪಮೇಯರ್‌ ಸ್ಥಾನದ ಚುನಾವಣೆ ಕುರಿತಂತೆ ಈವರೆಗೆ ಪಾಲಿಕೆಯ ಆಯುಕ್ತರು ಯಾವುದೇ ಪತ್ರ ಬರೆದಿಲ್ಲ.

ಒಂದೊಮ್ಮೆ ಆಯುಕ್ತರು ಶೀಘ್ರ ಪತ್ರ ಬರೆದರೆ ಸ್ಥಾಯಿ ಸಮಿತಿ ಅಧ್ಯಕ್ಷ ಹಾಗೂ ಸದಸ್ಯರ ಚುನಾವಣೆ ದಿನವೇ ಉಪಮೇಯರ್‌ ಸ್ಥಾನಕ್ಕೂ ಚುನಾವಣೆ ನಡೆಯಬಹುದು. ಇಲ್ಲದಿದ್ದರೆ ಸ್ಥಾಯಿ ಸಮಿತಿ ಚುನಾವಣೆ ನಂತರ ಉಪಮೇಯರ್‌ ಚುನಾವಣೆ ನಡೆಸಬೇಕಾಗುತ್ತದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು. 

ಬಿಜೆಪಿಯಿಂದಲೂ ಸ್ಪರ್ಧೆ: ರಮೀಳಾ ಅವರ ನಿಧನದಿಂದ ತೆರವಾಗಿರುವ ಉಪಮೇಯರ್‌ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ನಿರ್ಧರಿಸಿದೆ. ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಆರ್‌.ಅಶೋಕ್‌ ಹಾಗೂ ನಗರದ ಶಾಸಕರು, ಸಂಸದರು ಚರ್ಚಿಸಿ ತೀರ್ಮಾನಿಸಲಿದ್ದಾರೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Arjun Tendulkar: 5 ವಿಕೆಟ್‌ ಕೆಡವಿದ ಅರ್ಜುನ್‌ ತೆಂಡುಲ್ಕರ್‌ ಐಪಿಎಲ್‌ ಆಯ್ಕೆಗೆ ಸಜ್ಜು

Arjun Tendulkar: 5 ವಿಕೆಟ್‌ ಕೆಡವಿದ ಅರ್ಜುನ್‌ ತೆಂಡುಲ್ಕರ್‌ ಐಪಿಎಲ್‌ ಆಯ್ಕೆಗೆ ಸಜ್ಜು

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬಸ್‌ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್‌ ಬಂಧನ

Bengaluru: ಬಸ್‌ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್‌ ಬಂಧನ

Theft Case: ಕದ್ದ ಚಿನ್ನ ಜ್ಯುವೆಲ್ಲರಿಗೆ ಮಾರುವಾಗ ಸಿಕ್ಕಿಬಿದ್ದ!

Theft Case: ಕದ್ದ ಚಿನ್ನ ಜ್ಯುವೆಲ್ಲರಿಗೆ ಮಾರುವಾಗ ಸಿಕ್ಕಿಬಿದ್ದ!

5

Arrested: ಫಾರೆಸ್ಟ್‌ ಗಾರ್ಡ್‌ ಹುದ್ದೆ ತೊರೆದು ಕಳ್ಳತನಕ್ಕಿಳಿದವ ಸೆರೆ

Thefte Case: ಕೆಲಸಕ್ಕಿದ್ದ ಮನೆಯಲ್ಲೇ ರೂ. 12 ಲಕ್ಷ. ಚಿನ್ನ ಕದ್ದಳು

Thefte Case: ಕೆಲಸಕ್ಕಿದ್ದ ಮನೆಯಲ್ಲೇ ರೂ. 12 ಲಕ್ಷ. ಚಿನ್ನ ಕದ್ದಳು

Crime: ಹೆತ್ತ ತಾಯಿಯನ್ನೇ ಕೊಂದ ಮಗ!

Crime: ಹೆತ್ತ ತಾಯಿಯನ್ನೇ ಕೊಂದ ಮಗ!

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

ಕೌಕ್ರಾಡಿ: ತಹಶೀಲ್ದಾರ್‌ ನೇತೃತ್ವದಲ್ಲಿ ಗುಡಿಸಲು ತೆರವು

ಕೌಕ್ರಾಡಿ: ತಹಶೀಲ್ದಾರ್‌ ನೇತೃತ್ವದಲ್ಲಿ ಗುಡಿಸಲು ತೆರವು

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.