ಮೇಲ್ಮನೆ ಆರು ಸ್ಥಾನಗಳಿಗೆ ದೋಸ್ತಿಗಳಲ್ಲಿ ಪೈಪೋಟಿ


Team Udayavani, Sep 16, 2018, 6:25 AM IST

vidhana-soudha-750.jpg

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಭವಿಷ್ಯದ ಬಗೆಗಿನ ಗೊಂದಲಗಳ ನಡುವೆಯೇ ವಿಧಾನ ಪರಿಷತ್ತಿನ ಖಾಲಿ ಇರುವ ಆರು ಸ್ಥಾನಗಳ ಆಯ್ಕೆ ಸಂಬಂಧ ಆಡಳಿತ ನಡೆಸುತ್ತಿರುವ ಮಿತ್ರ ಪಕ್ಷಗಳ ನಡುವೆ ಹಗ್ಗ ಜಗ್ಗಾಟ ಆರಂಭವಾಗಿದೆ.

ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಮೂರು ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಮೂರು ಸ್ಥಾನಗಳಿಗೂ ಪ್ರತ್ಯೇಕ ಅಧಿಸೂಚನೆ ಹೊರಡಿಸಿರುವುದರಿಂದ ಮೂರೂ ಸ್ಥಾನಗಳು ಆಡಳಿತ ಪಕ್ಷಗಳಿಗೆ ದೊರೆತಿವೆ. ಹೀಗಾಗಿ ಎರಡೂ ಪಕ್ಷಗಳಲ್ಲಿ ಆಕಾಂಕ್ಷಿಗಳು ಹೆಚ್ಚಾಗಿದ್ದು, ಮೇಲ್ಮನೆ ಪ್ರವೇಶಿಸಲು ವಿಧಾನಸಭೆ ಚುನಾವಣೆಯಲ್ಲಿ ಸೋತವರು, ಚುನಾವಣೆಯಲ್ಲಿ ಟಿಕೆಟ್‌ ವಂಚಿತರು ತಮ್ಮ ನಾಯಕರ ಮೇಲೆ ಒತ್ತಡ ಹೇರಲು ಆರಂಭಿಸಿದ್ದಾರೆ.

ಕಾಂಗ್ರೆಸ್‌ನ ಪರಮೇಶ್ವರ್‌ ಹಾಗೂ ಬಿಜೆಪಿಯ ಕೆ.ಎಸ್‌. ಈಶ್ವರಪ್ಪ ಮತ್ತು ವಿ.ಸೋಮಣ್ಣ ವಿಧಾನಸಭೆ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿರುವುದರಿಂದ ಖಾಲಿಯಾಗಿರುವ ಮೂರು ಸ್ಥಾನಗಳಿಗೆ ಅಕ್ಟೋಬರ್‌ 3 ರಂದು ಉಪ ಚುನಾವಣೆ ನಡೆಯಲಿದೆ. ಪರಮೇಶ್ವರ್‌ ಹಾಗೂ ಈಶ್ವರಪ್ಪ ಅವರಿಂದ ತೆರವಾದ ಸ್ಥಾನಗಳ ಅವಧಿ 2020 ಜೂನ್‌ ವರೆಗೆ ಇದ್ದು, ವಿ.ಸೋಮಣ್ಣ ಅವರಿಂದ ಖಾಲಿಯಾದ ಸ್ಥಾನದ ಅವಧಿ 2022ರ ಜೂನ್‌ ವರೆಗೂ ಇದೆ.

ಸಮ್ಮಿಶ್ರ ಸರ್ಕಾರದಲ್ಲಿ ಹೊಂದಾಣಿಕೆ ಲೆಕ್ಕಾಚಾರ ನಡೆಯುತ್ತಿರುವುದರಿಂದ ಎರಡು ಸ್ಥಾನಗಳು ಕಾಂಗ್ರೆಸ್‌ಗೆ ಒಂದು ಸ್ಥಾನ ಜೆಡಿಎಸ್‌ಗೆ ದೊರೆಯಲಿದೆ. ಹೀಗಾಗಿ ಜೆಡಿಎಸ್‌ 2020 ರ ವರೆಗಿನ ಅವಧಿಯ ಸ್ಥಾನಗಳನ್ನು ಕಾಂಗ್ರೆಸ್‌ಗೆ ಬಿಟ್ಟುಕೊಟ್ಟು 2022 ರ ಅವಧಿಯ ಸ್ಥಾನವನ್ನು ಉಳಿಸಿಕೊಳ್ಳಲು ಯೋಚಿಸಿದೆ ಎಂದು ತಿಳಿದು ಬಂದಿದೆ.

ಇನ್ನು ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಗಣ್ಯರನ್ನು ಸರ್ಕಾರವೇ ನಾಮನಿರ್ದೇಶನ ಮಾಡಲು ಮೂರು ಸ್ಥಾನಗಳಿದ್ದು,  ಅವುಗಳಲ್ಲಿ ಎರಡು ಸ್ಥಾನಗಳ ಮೇಲೆ ಜೆಡಿಎಸ್‌ ಕಣ್ಣಿಟ್ಟಿದೆ ಎಂದು ಹೇಳಲಾಗುತ್ತಿದೆ. ನಾಮ ನಿರ್ದೇಶನದ ಜವಾಬ್ದಾರಿಯನ್ನು ಸಂಪುಟ ಮುಖ್ಯಮಂತ್ರಿಗೆ ವಹಿಸಿರುವುದರಿಂದ ಈ ಕುರಿತಂತೆಯೂ ಮುಖ್ಯಮಂತ್ರಿ ಶೀಘ್ರವೇ ತೀರ್ಮಾನ ಕೈಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಹೀಗಾಗಿ ಆರು ಸ್ಥಾನಗಳಿಗೆ ಒಂದೇ ಸಮಯದಲ್ಲಿ ಮೇಲ್ಮನೆಗೆ ಪ್ರವೇಶಿಸುವ ಅವಕಾಶ ಇರುವುದರಿಂದ ಜೆಡಿಎಸ್‌ ಮೂರು ಸ್ಥಾನಗಳನ್ನು ತನ್ನ ಬಳಿ ಉಳಿಸಿಕೊಳ್ಳುವ ಲೆಕ್ಕಾಚಾರ ಹಾಕಿದೆ ಎಂದು ಹೇಳಲಾಗುತ್ತಿದೆ. ಆದರೆ, ಕಾಂಗ್ರೆಸ್‌ ನಾಲ್ಕು ಸ್ಥಾನಗಳು  ತನ್ನ ಪಾಲಿಗೆ ಬರುತ್ತವೆ ಎಂಬ ಲೆಕ್ಕಾಚಾರದಲ್ಲಿದೆ. ಈ ಕುರಿತು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ವಿದೇಶ ಪ್ರವಾಸದಿಂದ ವಾಪಸ್‌ ಬಂದ ನಂತರ ಅಧಿಕೃತ ತೀರ್ಮಾನ ವಾಗಲಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಕಾಂಗ್ರೆಸ್‌ನಲ್ಲಿ ಆಕಾಂಕ್ಷಿಗಳ ದಂಡು:
ಕೆಳಮನೆಯಿಂದ ಮೇಲ್ಮನೆಗೆ ಮೂರು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಕಾಂಗ್ರೆಸ್‌ನಲ್ಲಿ ಹತ್ತಕ್ಕೂ ಹೆಚ್ಚು ಆಕಾಂಕಿಗಳಿದ್ದಾರೆ. ಮಾಜಿ ಸಚಿವರಾದ ರಾಣಿ ಸತೀಶ್‌, ಬಿ.ಕೆ. ಚಂದ್ರಶೇಖರ್‌, ವಿಧಾನ ಪರಿಷತ್‌ ಮಾಜಿ ಸಭಾಪತಿ ವಿ.ಆರ್‌.ಸುದರ್ಶನ್‌, ನಿವೇದಿತ್‌ ಆಳ್ವಾ, ಪ್ರೊ.ಕೆ.ಇ.ರಾಧಾಕೃಷ್ಣ, ನಾಗರಾಜ್‌ ಯಾದವ್‌, ಶಫಿ ಅಹಮದ್‌, ಮಾಲೂರು ನಾರಾಯಣಸ್ವಾಮಿ, ಲಕ್ಷ್ಮೀ ನರಸಿಂಹಯ್ಯ, ಎಂ.ಸಿ. ವೇಣುಗೋಪಾಲ್‌, ಮೋಟಮ್ಮ ಪುತ್ರಿ ನಯನಾ ಮೋಟಮ್ಮ, ಡಾ. ಬಿ.ಎಸ್‌. ಶಿವಣ್ಣ ತಮ್ಮ ನಾಯಕರ ಮೂಲಕ ತೀವ್ರ ಲಾಬಿ ಆರಂಭಿಸಿದ್ದಾರೆ ಎನ್ನಲಾಗುತ್ತಿದೆ.

ಉಪ ಮುಖ್ಯಮಂತ್ರಿ ಪರಮೇಶ್ವರ್‌ ಈಗಾಗಲೇ ಮಾರ್ಗರೇಟ್‌ ಆಳ್ವ ಪುತ್ರ ನಿವೇದಿತ್‌ ಆಳ್ವಾ ಅವರನ್ನ ಮೇಲ್ಮನೆಗೆ ಕಳುಹಿಸುವ ಭರವಸೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಅವರೇ ಭರವಸೆ ಕೊಟ್ಟಿರುವ ಜಯನಗರ ಟಿಕೆಟ್‌ ತಪ್ಪಿರುವ ಎಂ.ಸಿ. ವೇಣುಗೋಪಾಲ್‌ ಆಕ್ರೋಶಗೊಂಡಿದ್ದಾರೆ ಎನ್ನಲಾಗಿದೆ. ರಾಣಿ ಸತೀಶ್‌ ಲಿಂಗಾಯತ ಕೋಟಾದಡಿ ಪ್ರಯತ್ನ ನಡೆಸಿದ್ದು, ನಾಗರಾಜ್‌ ಯಾದವ್‌, ಡಾ.ಬಿ.ಎಸ್‌. ಶಿವಣ್ಣ ಸಿದ್ದರಾಮಯ್ಯ ಅವರನ್ನು ನಂಬಿಕೊಂಡಿದ್ದಾರೆ.

ಬಿ.ಕೆ. ಚಂದ್ರಶೇಖರ್‌, ವಿ.ಆರ್‌. ಸುದರ್ಶನ್‌ ಹಾಗೂ  ಕೆ.ಇ. ರಾಧಾಕೃಷ್ಣ  ಶಿಕ್ಷಣ ಹಾಗೂ ಸಮಾಜ ಸೇವೆ ಆಧಾರದಲ್ಲಿ ನಾಮ ನಿರ್ದೇಶನ ಮಾಡುವಂತೆಯೂ ಪಕ್ಷದ ನಾಯಕರಲ್ಲಿ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ನಾರಾಯಣಸ್ವಾಮಿ, ನಯನಾ ಮೋಟಮ್ಮ, ಲಕ್ಷ್ಮೀ ನರಸಿಂಹಯ್ಯ ಅವರು ದಲಿತರಿಂದ ಖಾಲಿಯಾಗಿರುವ ಸ್ಥಾನವನ್ನು ದಲಿತರಿಗೆ ನೀಡಬೇಕೆಂದು ದಲಿತ ನಾಯಕರ ಮೇಲೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗುತ್ತಿದೆ.

ಇನ್ನು ಜೆಡಿಎಸ್‌ನಲ್ಲಿಯೂ ಆಕ್ಷಾಂಕ್ಷಿಗಳ ಪಟ್ಟಿ ದೊಡ್ಡದಿದ್ದು, ವಿಧಾನಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳೂ ಮೇಲ್ಮನೆ ಪ್ರವೇಶಿಸಲು ಪ್ರಯತ್ನ ನಡೆಸಿದ್ದಾರೆ ಎನ್ನಲಾಗುತ್ತಿದೆ. ಮಧು ಬಂಗಾರಪ್ಪ, ಎನ್‌.ಎಚ್‌. ಕೋನರೆಡ್ಡಿ, ಮಾಜಿ ವಿಧಾನ ಪರಿಷತ್‌ ಸದಸ್ಯ ರಮೇಶ್‌ ಬಾಬು, ಜೆಡಿಎಸ್‌ ನಗರ ಘಟಕದ ಅಧ್ಯಕ್ಷ ಪ್ರಕಾಶ್‌, ಕೆಪಿಸಿಸಿ ಕಾರ್ಯಾಧ್ಯಕ್ಷ ನಾರಾಯಣ ರಾವ್‌ ಅವರ ಹೆಸರುಗಳು ಕೇಳಿ ಬರುತ್ತಿವೆ.

ಮಧು ಬಂಗಾರಪ್ಪ ಸಿನೆಮಾ ರಂಗ ಹಾಗೂ ರಮೇಶ್‌ ಬಾಬು ಶಿಕ್ಷಣ ಕ್ಷೇತ್ರ ಹಾಗೂ ಸಮಾಜ ಸೇವೆ ಲೆಕ್ಕಾಚಾರದಲ್ಲಿ ನಾಮ ನಿರ್ದೇಶನಕ್ಕೂ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗುತ್ತಿದೆ. ಆದರೆ. ನಾಮನಿರ್ದೇಶನಕ್ಕೆ  ಜೆಡಿಎಸ್‌ನಿಂದ ಬುಡಕಟ್ಟು ಸಮುದಾಯದ ಏಳಿಗೆಗಾಗಿ ಶ್ರಮಿಸುತ್ತಿರುವ ಡಾ. ಎಚ್‌.ಸುದರ್ಶನ್‌, ಕಾಂಗ್ರೆಸ್‌ನಿಂದ ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಅವರ ಹೆಸರುಗಳೂ ಕೇಳಿ ಬರುತ್ತಿವೆ.

ಭಾನುವಾರ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸ್ವದೇಶಕ್ಕೆ ಮರಳಲಿದ್ದು, ಜೆಡಿಎಸ್‌ ನಾಯಕರ ಜೊತೆ ಸ್ಥಾನ ಹೊಂದಾಣಿಕೆ ಕುರಿತು ಚರ್ಚಿಸುವ ಸಾಧ್ಯತೆ ಇದೆ. ನಂತರ ವಿಧಾನ ಪರಿಷತ್‌ ಸದಸ್ಯರ ನೇಮಕ ಸೇರಿದಂತೆ ಸಚಿವ ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆ ಕುರಿತು ಚರ್ಚಿಸಲು ಸೆಪ್ಟಂಬರ್‌ 18 ರಂದು ದೆಹಲಿಗೆ ತೆರಳುವ ಸಾಧ್ಯತೆ ಇದೆ.

– ಶಂಕರ ಪಾಗೋಜಿ

ಟಾಪ್ ನ್ಯೂಸ್

BJP: ಅಶಿಸ್ತಿನ ವಿರುದ್ಧ ಹೈಕಮಾಂಡ್‌ ಕ್ರಮ ಕೈಗೊಳ್ಳಲಿ: ಡಿವಿಎಸ್‌

BJP: ಅಶಿಸ್ತಿನ ವಿರುದ್ಧ ಹೈಕಮಾಂಡ್‌ ಕ್ರಮ ಕೈಗೊಳ್ಳಲಿ: ಡಿವಿಎಸ್‌

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

1-sindu

Badminton; ಸಯ್ಯದ್‌ ಮೋದಿ ಇಂಟರ್‌ನ್ಯಾಶನಲ್‌: ಸಿಂಧು, ಸೆನ್‌ ಕ್ವಾರ್ಟರ್‌ಫೈನಲಿಗೆ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP: ಅಶಿಸ್ತಿನ ವಿರುದ್ಧ ಹೈಕಮಾಂಡ್‌ ಕ್ರಮ ಕೈಗೊಳ್ಳಲಿ: ಡಿವಿಎಸ್‌

BJP: ಅಶಿಸ್ತಿನ ವಿರುದ್ಧ ಹೈಕಮಾಂಡ್‌ ಕ್ರಮ ಕೈಗೊಳ್ಳಲಿ: ಡಿವಿಎಸ್‌

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BJP: ಅಶಿಸ್ತಿನ ವಿರುದ್ಧ ಹೈಕಮಾಂಡ್‌ ಕ್ರಮ ಕೈಗೊಳ್ಳಲಿ: ಡಿವಿಎಸ್‌

BJP: ಅಶಿಸ್ತಿನ ವಿರುದ್ಧ ಹೈಕಮಾಂಡ್‌ ಕ್ರಮ ಕೈಗೊಳ್ಳಲಿ: ಡಿವಿಎಸ್‌

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

1-sindu

Badminton; ಸಯ್ಯದ್‌ ಮೋದಿ ಇಂಟರ್‌ನ್ಯಾಶನಲ್‌: ಸಿಂಧು, ಸೆನ್‌ ಕ್ವಾರ್ಟರ್‌ಫೈನಲಿಗೆ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.