ವಿಧಾನಸೌಧ ಪ್ರವೇಶಕ್ಕೆ ಪುರಪಿತೃಗಳ ಪೈಪೋಟಿ
Team Udayavani, Mar 29, 2018, 2:34 PM IST
ಬೆಂಗಳೂರು: ಬಿಬಿಎಂಪಿಯಿಂದ ವಿಧಾನಸಭೆಗೆ ಪ್ರವೇಶ ಪಡೆಯಲು ಕನಸು ಕಾಣುತ್ತಿರುವ ಪಾಲಿಕೆ ಸದಸ್ಯರು ಮೂರೂ ಪಕ್ಷಗಳಲ್ಲಿ ಟಿಕೆಟ್‌ಗಾಗಿ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಪಾಲಿಕೆಯ ಮೇಯರ್, ಉಪಮೇಯರ್, ಹಾಲಿ ಹಾಗೂ ಹಾಲಿ ಸದಸ್ಯರು ತಮ್ಮ ತಮ್ಮ ಪಕ್ಷಗಳಿಂದ ಟಿಕೆಟ್ ಪಡೆಯಲು ಲಾಬಿ ಪ್ರಾರಂಭಿಸಿದ್ದಾರೆ. ಕೆಲವು ಸದಸ್ಯರಂತೂ ಟಿಕೆಟ್ ಸಿಗದಿದ್ದರೆ ಪಕ್ಷೇತರರಾಗಿ ಕಣಕ್ಕಿಳಿಯಲು ಚಿಂತನೆ ನಡೆಸಿದ್ದಾರೆ.
ಸತತ ಐದು ಬಾರಿ ಪಾಲಿಕೆಯ ಸದಸ್ಯರಾಗಿ ಆಯ್ಕೆಯಾಗಿರುವ ಮಾಜಿ ಮೇಯರ್ ಬಿ.ಎಸ್.ಸತ್ಯನಾರಾಯಣ ಬಸವನಗುಡಿ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಬಸವನಗುಡಿಯಲ್ಲಿ ಹಾಲಿ ಬಿಜೆಪಿ ಶಾಸಕರಿದ್ದರೂ ಈ ಬಾರಿ ತಮಗೆ ಅವಕಾಶ ನೀಡುವಂತೆ ಪಕ್ಷದ ವರಿಷ್ಠರ ಬಳಿ ಬೇಡಿಕೆಯಿಟ್ಟಿದ್ದಾರೆ. ಅಷ್ಟೇ ಅಲ್ಲದೆ ಕ್ಷೇತ್ರದಲ್ಲಿ ಪ್ರಚಾರವನ್ನೂ ಆರಂಭಿಸಿದ್ದಾರೆ.
ಮಾಜಿ ಮೇಯರ್ ಪದ್ಮಾವತಿ ಅವರು ರಾಜಾಜಿನಗರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದು ಪಕ್ಷದ ನಾಯಕರ ಮೌಖೀಕ ಸೂಚನೆ ಮೇರೆಗೆ ಪ್ರಚಾರ ಕಾರ್ಯಕ್ಕೂ ಚಾಲನೆ ನೀಡಿದ್ದಾರೆ. ವಿಜಯನಗರ ಕ್ಷೇತ್ರದಿಂದ ಪಾಲಿಕೆಯ ಮಾಜಿ ಸದಸ್ಯ ರವೀಂದ್ರ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದು, ಮಹಾಲಕ್ಷ್ಮೀ ಬಡಾವಣೆಯಿಂದ ಮಾಜಿ ಉಪಮೇಯರ್ ಎಸ್.ಹರೀಶ್ ಹಾಗೂ ಮಾಜಿ ಪಾಲಿಕೆ ಸದಸ್ಯ ಎಂ.ನಾಗರಾಜ್ ನಡುವೆ ಟಿಕೆಟ್‌ಗೆ ಪೈಪೋಟಿ ಆರಂಭವಾಗಿದೆ.
ರಾಜರಾಜೇಶ್ವರಿನಗರ ಕ್ಷೇತ್ರದಿಂದ ಸ್ಪರ್ಧಿಸಲು ಜೆಡಿಎಸ್‌ನಿಂದ ಪಾಲಿಕೆಯ ಮಾಜಿ ಸದಸ್ಯ ಆರ್.ಪ್ರಕಾಶ್, ಬಿಜೆಪಿಯಿಂದ ಮತ್ತೂಬ್ಬ ಮಾಜಿ ಸದಸ್ಯ ರಾಮಚಂದ್ರ ಪ್ರಯತ್ನಿಸುತ್ತಿದ್ದಾರೆ. ಆರ್.ಅಶೋಕ್ ಪ್ರತಿನಿಧಿಸುವ ಪದ್ಮನಾಭನಗರದಿಂದ ಕಣಕ್ಕಿಳಿಯಲು ಮಾಜಿ ಮೇಯರ್ ವೆಂಕಟೇಶ್ ಮೂರ್ತಿ ಸಿದ್ಧತೆ ನಡೆಸಿದ್ದಾರೆ. ಕಾಂಗ್ರೆಸ್‌ನಿಂದ ಅದೇ ಕ್ಷೇತ್ರದಲ್ಲಿ ಟಿಕೆಟ್ ನೀಡುವಂತೆ ಪಾಲಿಕೆಯ ಸದಸ್ಯ ಅನ್ಸರ್ ಪಾಷಾ ಬೇಡಿಕೆ ಇಟ್ಟಿದ್ದಾರೆ.
ಉಳಿದಂತೆ ಶಾಂತಿನಗರದ ಬಿಜೆಪಿ ಟಕೆಟ್‌ಗೆ ಮಾಜಿ ಉಪ ಮೇಯರ್ ವಾಸುದೇವ ಮೂರ್ತಿ, ಮಾಜಿ ಪಾಲಿಕೆ ಸದಸ್ಯ ಶ್ರೀಧರ್ ರೆಡ್ಡಿ ಅವರ ನಡುವೆ ಪೈಪೋಟಿ ಏರ್ಪಟ್ಟಿದೆ. ಶಿವಾಜಿನಗÃದಲ್ಲಿ ಬಿಜೆಪಿ ಟಿಕೆಟ್‌ಗಾಗಿ ಮಾಜಿ ಪಾಲಿಕೆ ಸದಸ್ಯ ಗೋಪಿ ಪ್ರಯತ್ನಿಸಿದ್ದಾರೆ. ಸರ್ವಜ್ಞನಗರದಲ್ಲಿ ಬಿಜೆಪಿ ಟಿಕೆಟ್‌ಗಾಗಿ ಪಾಲಿಕೆಯ ಪ್ರತಿಪಕ್ಷ ನಾಯಕ ಪದ್ಮನಾಭರೆಡ್ಡಿ, ಮಾಜಿ ಸದಸ್ಯ ಗೋವಿಂದರಾಜು, ಎಂ.ಸಿ.ಶ್ರೀನಿವಾಸ ಹಾಗೂ ಎಂ.ಎನ್.ರೆಡ್ಡಿ ಆಕಾಂಕ್ಷಿಗಳಾಗಿದ್ದಾರೆ.
ಪ್ರಬಲಗೊಂಡ ಲಾಬಿ: ಚಾಮರಾಜಪೇಟೆಯಿಂದ ಬಿಜೆಪಿ ಟಿಕೆಟ್‌ಗಾಗಿ ಪಾಲಿಕೆಯ ಮಾಜಿ ಸದಸ್ಯ ಬಿ.ವಿ.ಗಣೇಶ್, ಮಾಜಿ ಉಪ ಮೇಯರ್ ಲಕ್ಷ್ಮಿನಾರಾಯಣ ಪ್ರಬಲ ಲಾಬಿಯಲ್ಲಿ ತೊಡಗಿದ್ದಾರೆ. ಕೆ.ಆರ್.ಪುರ ಪಾಲಿಕೆ ಸದಸ್ಯೆ ಪೂರ್ಣಿಮಾ ಸಹ ಕೆ.ಆರ್.ಪುರಂ ಅಥವಾ ಹಿರಿಯೂರಿನಿಂದ ಟಿಕೆಟ್ ಕೊಡಿ ಎಂದು ಬಿಜೆಪಿ ವರಿಷ್ಠರಲ್ಲಿ ಬೇಡಿಕೆ ಇಟ್ಟಿದ್ದಾರೆ.
ಚಿಕ್ಕಪೇಟೆ ಕ್ಷೇತ್ರಕ್ಕೆ ಪಾಲಿಕೆಯ ಮಾಜಿ ಸದಸ್ಯ ಎನ್.ಆರ್.ರಮೇಶ್, ಗೋವಿಂದರಾಜನಗರ ಕ್ಷೇತ್ರಕ್ಕೆ ಉಮೇಶ್ ಶೆಟ್ಟಿ ಹಾಗೂ ಮಾಜಿ ಮೇಯರ್ ಎನ್.ಶಾಂತಕುಮಾರಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಇನ್ನು, ದೇವರಜೀವನಹಳ್ಳಿ ವಾರ್ಡ್ ಸದಸ್ಯರೂ ಆಗಿರುವ ಮೇಯರ್ ಆರ್.ಸಂಪತ್‌ರಾಜ್ ಪುಲಕೇಶಿನಗರದ ಪ್ರಬಲ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
ಕಳೆದ 25 ವರ್ಷಗಳಿಂದ ಬಸವನಗುಡಿ ವಾರ್ಡ್ ಪಾಲಿಕೆ ಸದಸ್ಯನಾಗಿದ್ದು, ಮೇಯರ್ ಆಗಿದ್ದ ಅವಧಿಯಲ್ಲಿ ನಗರದ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಹೀಗಾಗಿ ಕ್ಷೇತ್ರದ ಜನರ ಸೇವೆ ಮಾಡಲು ಬಸವನಗುಡಿ ಟಿಕೆಟ್ ನೀಡುವಂತೆ ಪಕ್ಷದ ನಾಯಕರಿಗೆ ಮನವಿ ಮಾಡಲಾಗಿದೆ. ಕ್ಷೇತ್ರದಲ್ಲಿ ಹಾಲಿ ಶಾಸಕರಿದ್ದರೂ, ಗುಜರಾತ್, ಉತ್ತರ ಪ್ರದೇಶಗಳಲ್ಲಿ ಹಾಲಿ ಶಾಸಕರ ಬದಲಿಗೆ ಹೊಸಬರಿಗೆ ಟಿಕೆಟ್ ನೀಡಿರುವ ಉದಾಹರಣೆಗಳಿವೆ.
-ಬಿ.ಎಸ್.ಸತ್ಯನಾರಾಯಣ, ಮಾಜಿ ಮೇಯರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.