ಹೊಸಕೋಟೆ ಶಾಸಕರ ವಿರುದ್ಧ ಎಸಿಬಿಗೆ ದೂರು
Team Udayavani, Apr 7, 2018, 12:15 PM IST
ಬೆಂಗಳೂರು: ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿಯಿರುವ ನೂರಾರು ಎಕರೆ ಸರ್ಕಾರಿ ಜಮೀನನ್ನು ಬಗರ್‌ಹುಕುಂ ಸಾಗುವಳಿ ಸಕ್ರಮ ಸಮಿತಿಯ ಅಧ್ಯಕ್ಷರೂ ಆಗಿರುವ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ತಮ್ಮ ಸಂಬಂಧಿಕರು ಹಾಗೂ ಬೆಂಬಲಿಗರಿಗೆ ಮುಂಜೂರು ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಗರ ವಕ್ತಾರ ಎನ್.ಆರ್.ರಮೇಶ್ ಶುಕ್ರವಾರ ಎಸಿಬಿಗೆ ದೂರು ನೀಡಿದ್ದಾರೆ.
ಶಾಸಕ ಎಂಟಿಬಿ ನಾಗರಾಜ್ ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡು ಕಳೆದ ಐದು ವರ್ಷಗಳಲ್ಲಿ 280 ಕೋಟಿ ರೂ. ಮೌಲ್ಯದ 140 ಎಕರೆ 15 ಗುಂಟೆ ಸರ್ಕಾರಿ ಜಮೀನನ್ನು ಸಂಬಂಧಿಕರು ಹಾಗೂ ಬೆಂಬಲಿಗರಿಗೆ ಮಂಜೂರು ಮಾಡಿಕೊಟ್ಟು ಸರ್ಕಾರದ ಬೊಕ್ಕಸಕ್ಕೆ ನಷ್ಟು ಉಂಟುಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಹೊಸಕೋಟೆ ತಾಲೂಕಿನ ಸೂಲಿಬೆಲೆ, ನಂದಗುಡಿ ಹೋಬಳಿಗಳ ವಿವಿಧ ಗ್ರಾಮಗಳಲ್ಲಿರುವ ಸರ್ಕಾರಿ ಜಮೀನುಗಳ ಪೈಕಿ 140 ಎಕರೆ 15 ಗುಂಟೆ ಜಮೀನನ್ನು ತಮ್ಮ ಅಧ್ಯಕ್ಷತೆಯ ಬಹರ್ ಹುಕುಂ ಸಾಗುವಳಿ ಸಕ್ರಮ ಸಮಿತಿಯ ಮೂಲಕ ಮಂಜೂರು ಮಾಡಿದ್ದಾರೆ.
ಈ ಪೈಕಿ 8 ಎಕರೆ 37 ಗುಂಟೆ ತಮ್ಮ ಸಂಬಂಧಿಕರಿಗೆ ಮತ್ತು 102 ಎಕರೆ 11 ಗುಂಟೆಯನ್ನು ಬೆಂಬಲಿಗರಿಗೆ ಮಂಜೂರು ಮಾಡಿದ್ದಾರೆ. ಹೀಗಾಗಿ ಶಾಸಕರು ಹಾಗೂ ಅಕ್ರಮಕ್ಕೆ ಸಹಕಾರ ನೀಡಿದ ಹೋಸಕೋಟೆ ತಹಸೀಲ್ದಾರ್, ಕಂದಾಯ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ
Bengaluru: ಕಳೆದ ದೀಪಾವಳಿಗಿಂತ ಶೇ.34 ತಗ್ಗಿದ ವಾಯುಮಾಲಿನ್ಯ
Crime: ಶೀಲ ಶಂಕಿಸಿ ಪತ್ನಿ ಕತ್ತು ಸೀಳಿಆತ್ಮಹತ್ಯೆಗೆ ಯತ್ನಿಸಿದ ಪತಿ
Bengaluru; ಶೋಕಿಗಾಗಿ ಸರಗಳ್ಳತನ: 70 ಲಾರಿಗಳ ಮಾಲಿಕ ಸೆರೆ!!
Bengaluru; ಪ್ರತಿಷ್ಠಿತ ಆಸ್ಪತ್ರೆಯ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ವಿಡಿಯೋ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.