ಅಶೋಕ್ ವಿರುದ್ಧ ಬಿಜೆಪಿ ಹೈ ಕಮಾಂಡ್ಗೆ ದೂರು?
Team Udayavani, Nov 4, 2017, 11:00 AM IST
ಬೆಂಗಳೂರು: ಬಿಜೆಪಿಯ ಪರಿವರ್ತನಾ ಯಾತ್ರೆಗೆ ನಿರೀಕ್ಷಿತ ಪ್ರಮಾಣದಲ್ಲಿ ಕಾರ್ಯಕರ್ತರು ಬಾರದ ಹಿನ್ನೆಲೆಯಲ್ಲಿ ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ವಿರುದ್ಧ ಬಿಜೆಪಿ ಹೈಕಮಾಂಡ್ಗೆ ರಾಜ್ಯ ನಾಯಕರು ದೂರು ನೀಡಿದ್ದಾರೆ ಎನ್ನಲಾಗಿದೆ.
ಬೆಂಗಳೂರು ಮಹಾನಗರ ಬಿಜೆಪಿ ಉಸ್ತುವಾರಿಯೂ ಆಗಿರುವ ಆರ್.ಅಶೋಕ್ ಅವರಿಗೆ ನವ ಕರ್ನಾಟಕ ಪರಿವರ್ತನಾ ಯಾತ್ರೆಗೆ ನಗರದ 28 ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರನ್ನು ಸೇರಿಸುವ ಜವಾಬ್ದಾರಿ ಜತೆಗೆ ಪರಿವರ್ತನಾ ಯಾತ್ರೆಯ ಉದ್ಘಾಟನಾ ಕಾರ್ಯಕ್ರಮದ ಉಸ್ತುವಾರಿ ವಹಿಸಲಾಗಿತ್ತು. ಆದರೆ ಕಾರ್ಯಕರ್ತರನ್ನು ಸೇರಿಸಲು ಅಶೋಕ್ ವಿಫಲರಾಗಿದ್ದಾರೆ ಎಂದು ರಾಷ್ಟ್ರಾಧ್ಯಕ್ಷ ಅಮಿತ್ ಶಾಗೆ ದೂರಿತ್ತಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರದಲ್ಲಿ 12 ಮಂದಿ ಬಿಜೆಪಿಯ ಶಾಸಕರು ಹಾಗೂ 3 ಲೋಕಸಭಾ ಕ್ಷೇತ್ರದಲ್ಲೂ ಬಿಜೆಪಿ ಸಂಸದರೇ ಇದ್ದಾರೆ. ಒಂದೊಂದು ಕ್ಷೇತ್ರದಿಂದ 10 ಸಾವಿರ ಕಾರ್ಯಕರ್ತರು ಬಂದಿದ್ದರೂ 1 ಲಕ್ಷ ದಾಟುತಿತ್ತು.
ಆದರೆ ಕಾರ್ಯಕ್ರಮ ವೇಳೆ ಅಮಿತ್ ಶಾ ಖಾಲಿ ಕುರ್ಚಿ ಇರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ, ರಾಜ್ಯ ನಾಯಕರನ್ನು ಕೇಳಿದಾಗ, ಕಾರ್ಯಕ್ರಮದ ಉಸ್ತುವಾರಿಯನ್ನು ಆರ್.ಅಶೋಕ್ಗೆ ನೀಡಲಾಗಿದ್ದು, ಅವರ ಆಸಕ್ತಿ ವಹಿಸಿ ಕೆಲಸ ಮಾಡಿಲ್ಲ ಎಂದು ರಾಜ್ಯ ನಾಯಕರೊಬ್ಬರು ಅಮಿತ್ಶಾರಿಗೆ ಹೇಳಿದ್ದಾರೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.