ಮುಖ್ಯಮಂತ್ರಿ ವಿರುದ್ಧ ಚು.ಆಯೋಗಕ್ಕೆ ದೂರು
Team Udayavani, Mar 31, 2018, 6:25 AM IST
ಬೆಂಗಳೂರು: ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಗುರುವಾರ ಪ್ರಚಾರದ ವೇಳೆ ಆರತಿ ಬೆಳಗಿ ಸ್ವಾಗತಿಸಿದ ಮಹಿಳೆಯರು ಹಾಗೂ ಅರ್ಚಕರಿಗೆ ತಲಾ 2000 ರೂ. ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀತಿ ಸಂಹಿತೆ ಉಲ್ಲಂಘಿಸಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬಿಜೆಪಿ ಚುನಾವಣಾ ಆಯೋಗಕ್ಕೆ ಶುಕ್ರವಾರ ದೂರು ನೀಡಿದೆ.
ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ನೇತೃತ್ವದ ನಿಯೋಗ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ್ದು, ಗುರುವಾರ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ ಮುಖ್ಯಮಂತ್ರಿಗಳು ತಮಗೆ ಆರತಿ ಬೆಳಗಿ ಸ್ವಾಗತಿಸಿದ ಇಬ್ಬರು ಮಹಿಳೆಯರಿಗೆ ತಲಾ 2000 ರೂ.ನೀಡಿದ್ದಾರೆ.
ಹಾಗೆಯೇ ಪ್ರತಿ ಗ್ರಾಮಗಳಲ್ಲಿನ ದೇವಾಲಯಗಳಿಗೆ ಭೇಟಿ ನೀಡಿದಾಗ ಪೂಜೆ ನೆರವೇರಿಸಿದ ಅರ್ಚಕರಿಗೂ 2000 ರೂ.ನೀಡಿದ್ದಾರೆಂದು ಆರೋಪಿಸಿದ್ದಾರೆ. ಇದು ಪ್ರಜಾಪ್ರತಿನಿಧಿ ಕಾಯ್ದೆ ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 171ರ ಅಡಿ ಲಂಚ ನೀಡಿದಂತಾಗಿದ್ದು, ಮಾಧ್ಯಮಗಳಲ್ಲಿ ಪ್ರಸಾರವಾದರೂ ಈವರೆಗೆ ಕ್ರಮ ಕೈಗೊಂಡಿಲ್ಲ. ಕೂಡಲೇ ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಕೋರಿದ್ದಾರೆ. ಬಿಜೆಪಿ ಶಾಸಕಾಂಗ ಪಕ್ಷದ ಕಾರ್ಯಾಲಯ ಕಾರ್ಯದರ್ಶಿ ಸಿ.ಟಿ.ಸುರೇಶ್, ರಾಜ್ಯ ಬಿಜೆಪಿ ಸಾಮಾಜಿಕ ಜಾಲತಾಣದ ಸಹ ಸಂಚಾಲಕ ಸಿದ್ದು ಪುಂಡಿಕಾಳ, ಪ್ರಶಾಂತ್ ಮಾಕನೂರ, ಪ್ರದೀಪ್ ಕಾಡಾದೆ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.