ರಾಮಲಿಂಗಾರೆಡ್ಡಿ ವಿರುದ್ಧ ದೂರು
Team Udayavani, Jun 12, 2018, 11:44 AM IST
ಬೆಂಗಳೂರು: ಕ್ಷೇತ್ರದ ಮತದಾರರಲ್ಲದ ರಾಜಕೀಯ ಮುಖಂಡರು ಮತದಾನ ಮುಗಿಯುವ 48 ಗಂಟೆ ಮೊದಲು ಕ್ಷೇತ್ರದಿಂದ ಹೊರಹೋಗಬೇಕು ಎಂಬ ನಿಯಮವಿದೆ. ಆದರೆ ಜಯನಗರ ಕ್ಷೇತ್ರದ ಮತದಾರರಲ್ಲದ ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರು ಸೋಮವಾರ ಹಲವು ಮತಗಟ್ಟೆಗೆ ಭೇಟಿ ನೀಡುವ ಮೂಲಕ ನಿಯಮ ಉಲ್ಲಂ ಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡರು ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.
ರಾಮಲಿಂಗಾರೆಡ್ಡಿ ಅವರು ಜಯನಗರ ಕ್ಷೇತ್ರದ ಮತದಾರರಲ್ಲ. ಆದರೂ ಕ್ಷೇತ್ರದ ಹಲವೆಡೆ ಸಂಚರಿಸಿ ಮತಗಟ್ಟೆಗಳಿಗೂ ಭೇಟಿ ನೀಡಿದ್ದಾರೆ. ಜವಾಬ್ದಾರಿಯುತ ಸಚಿವ ಸ್ಥಾನಗಳನ್ನು ನಿಭಾಯಿಸಿದ ಅನುಭವವಿರುವ ಹಿರಿಯ ನಾಯಕರಾದ ರಾಮಲಿಂಗಾರೆಡ್ಡಿ ಅವರು ಕಾನೂನಿನ ಅರಿವಿದ್ದರೂ ನಿಯಮ ಉಲ್ಲಂ ಸಿದ್ದಾರೆ ಎಂದು ಬಿಜೆಪಿ ವಕ್ತಾರ ಅಶ್ವತ್ಥನಾರಾಯಣ ಅವರು ಜಯನಗರ ಕ್ಷೇತ್ರ ಚುನಾವಣಾಧಿಕಾರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಅವರ ಉಪಸ್ಥಿತಿಯು ಸಹಜವಾಗಿಯೇ ಚುನಾವಣಾ ಕಾರ್ಯ ನಿರತ ಅಧಿಕಾರಿ, ಸಿಬ್ಬಂದಿ ಮೇಲೆ ಪ್ರಭಾವ ಬೀರುತ್ತದೆ. ಕೂಡಲೇ ಅವರ ವಾಹನ ಜಪ್ತಿ ಮಾಡಿ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆಯಡಿ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.