ಬಿಜೆಪಿಯಿಂದ ರಮ್ಯಾ ವಿರುದ್ಧ ದೂರು
Team Udayavani, Feb 8, 2018, 12:28 PM IST
ಬೆಂಗಳೂರು: ಐಟಿ ಕಾಯ್ದೆ ಮತ್ತು ಫೇಸ್‌ಬುಕ್ ನಿಯಮ ಉಲ್ಲಂಘಿಸಿ ಸಾಮಾಜಿಕ ಜಾಲ ತಾಣದಲ್ಲಿ ನಕಲಿ ಖಾತೆ ತೆರೆಯಲು ಉತ್ತೇಜನ ನೀಡಿದ ಆರೋಪದ ಮೇಲೆ ಎಐಸಿಸಿ ಸಮಾಜಿಕ ಜಾಲತಾಣ ಮತ್ತು ಡಿಜಿಟಲ್ ಕಮ್ಯೂನಿಕೇಷನ್ ಮುಖ್ಯಸ್ಥೆ ದಿವ್ಯಸ್ಪಂದನಾ (ನಟಿ ರಮ್ಯಾ) ವಿರುದ್ಧ ಬಿಜೆಪಿ ಐಟಿ ಘಟಕದಿಂದ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ.
ರಮ್ಯಾ ಅವರು ಕಾಂಗ್ರೆಸ್ ಕಾರ್ಯಕರ್ತರಿಗೆ ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ತೆರೆಯುವುದು ಹೇಗೆ ಎಂಬುದನ್ನು ಹೇಳಿಕೊಡುತ್ತಿರುವ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಕಲಿ ಖಾತೆ ಹೇಗೆ ತೆರೆಯುವ ಮತ್ತು ಅದರ ನಿರ್ವಹಣೆ ಹೇಗೆ ಎಂಬುದನ್ನು ಕಾರ್ಯಕರ್ತರಿಗೆ ತಿಳಿಸುತ್ತಿರುವ ಮಾಹಿತಿ ವಿಡಿಯೋದಲ್ಲಿ ಸ್ಪಷ್ಟವಾಗಿದೆ. ಇದು 2000ನೇ ಸಾಲಿನ ಐಟಿ ಕಾಯ್ದೆ ಮತ್ತು ಫೇಸ್‌ಬುಕ್ ನೀತಿ ನಿಯಮಗಳಿಗೆ ವಿರುದ್ಧವಾಗಿದೆ.
ಎಐಸಿಸಿ ಸಮಾಜಿಕ ಜಾಲತಾಣ ಮತ್ತು ಡಿಜಿಟಲ್ ಕಮ್ಯೂನಿಕೇಷನ್ ಮುಖ್ಯಸ್ಥೆಯಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ರಮ್ಯಾ ಸಮಾಜವನ್ನು ದಾರಿತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅವರ ವಿರುದ್ಧ ಕಾನೂನಿನನ್ವಯ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ದೂರಿನಲ್ಲಿ ಕೋರಲಾಗಿದೆ.
ರಾಜ್ಯ ಬಿಜೆಪಿ ವಕ್ತಾರರಾದ ಸುರೇಶ್ ಕುಮಾರ್, ಡಾ.ವಾಮನ್ ಆಚಾರ್ಯ, ಸಹ ವಕ್ತಾರರಾದ ಎಸ್.ಪ್ರಕಾಶ್, ಮಾಳವಿಕಾ ಅವಿನಾಶ್, ಸಿ.ಮಂಜುಳಾ, ಬಿಜೆಪಿ ಸಮಾಜಿಕ ಜಾಲತಾಣ ನಿರ್ವಾಹಕ ಬಾಲಾಜಿ ಇತರರು ಬುಧವಾರ ನಗರ ಪೊಲೀಸ್ ಆಯುಕ್ತ ಸುನಿಲ್ ಕುಮಾರ್ ಸಿಂಗ್ ಅವರಿಗೆ ಈ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
MUST WATCH
ಹೊಸ ಸೇರ್ಪಡೆ
Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.