ನಟ ರಿಷಿ ವಿರುದ್ಧ ಚಿಕ್ಕಮ್ಮನಿಂದಲೇ ದೂರು
Team Udayavani, Oct 15, 2018, 12:43 PM IST
ಬೆಂಗಳೂರು: ಚಿಕ್ಕಮ್ಮನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ “ಆಪರೇಷನ್ ಅಲಮೇಲಮ್ಮ’ ಚಿತ್ರದ ನಾಯಕ ನಟ ರಿಷಿ ವಿರುದ್ಧ ಬಸವೇಶ್ವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರು ಸ್ವೀಕರಿಸಿರುವ ಪೊಲೀಸರು ಗಂಭೀರ ಸ್ವರೂಪವಲ್ಲದ ಪ್ರಕರಣ (ಎನ್‌ಸಿಆರ್) ದಾಖಲಿಸಿದ್ದಾರೆ.
ನಟ ರಿಷಿ, ಅವರ ತಂದೆ ನಾಗರಾಜ್, ತಾಯಿ ಅನಲಾ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ನಟನ ಚಿಕ್ಕಮ್ಮ ಶಾಲಿನಿ ಗೋಪಿನಾಥ್ ದೂರು ನೀಡಿದ್ದಾರೆ. ರಿಷಿ, ಬಸವೇಶ್ವರನಗರದಲ್ಲಿರುವ ತಮ್ಮ ತಾತನ ಮನೆಯಲ್ಲಿ ಪೋಷಕರೊಂದಿಗೆ ವಾಸವಾಗಿದ್ದಾರೆ. ಅ.10ರಂದು ದೂರುದಾರರಾದ ಶಾಲಿನಿ ಗೋಪಿನಾಥ್ ಪಾರ್ಶ್ವವಾಯುವಿನಿಂದ ಬಳಲುತ್ತಿರುವ ತಮ್ಮ ತಂದೆಯನ್ನು ನೋಡೆಲೆಂದು ಮನೆಗೆ ಬಂದಿದ್ದರು.
ಆ ಸಂದರ್ಭದಲ್ಲಿ ಚಿಕ್ಕಮ್ಮನನ್ನು ಮನೆ ಒಳಗೆ ಬಿಡದ ರಿಷಿ ಮತ್ತು ಅವರ ಪೋಷಕರು, ಆಸ್ತಿ ವಿಚಾರವಾಗಿ ಜಗಳ ಮಾಡಿದ್ದಾರೆ. ಖಾಲಿ ಪೇಪರ್‌ಗಳ ಮೇಲೆ ಸಹಿ ಹಾಕಿ ಈ ಆಸ್ತಿಯನ್ನು ತಮ್ಮ ಹೆಸರಿಗೆ ಬರೆದುಕೊಟ್ಟರೆ ಮಾತ್ರ ಮನೆ ಒಳಗೆ ಪ್ರವೇಶ ನೀಡುವುದಾಗಿ ಬೆದರಿಸಿದ್ದಾರೆ ಎಂದು ಆರೋಪಿಸಲಾಗಿದೆ.
ರಿಷಿ ತಮ್ಮ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದು, ಇದರಿಂದ ಆತಂಕಗೊಂಡು ನಾನು ಜೋರಾಗಿ ಕೂಗಿಕೊಂಡಾಗ ರಿಷಿ ತಾಯಿ ಅನಲಾ ನನ್ನ ಬಾಯಿಗೆ ಬಟ್ಟೆ ತುರುಕಿದ್ದಾರೆ. ಆ ವೇಳೆ ರಿಷಿ ಮಾರಕಾಸ್ತ್ರ ತೋರಿಸಿ ಹೆದರಿಸಿ ಖಾಲಿ ಪೇಪರ್‌ಗೆ ಸಹಿ ಮಾಡುವಂತೆ ಒತ್ತಾಯಿಸಿದಲ್ಲದೆ, ಪ್ರಾಣಬೆದರಿಕೆ ಹಾಕಿದ್ದರು ಎಂದು ಶಾಲಿನಿ ದೂರಿನಲ್ಲಿ ಉಲ್ಲೇಖೀಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ನಟ ರಿಷಿ, ಪುನಿತ್ ರಾಜ್‌ಕುಮಾರ್ ನಿರ್ಮಿಸುತ್ತಿರುವ “ಕವಲುದಾರಿ’ ಸಿನಿಮಾದಲ್ಲಿ ನಾಯಕ ನಟನಾಗಿ ಕಾಣಿಸಿಕೊಳ್ಳಲಿದ್ದಾರೆ. ಜತೆಗೆ ತಮಿಳು ನಟ ಧನುಷ್ ನಿರ್ಮಾಣದ ಸಿನಿಮಾದಲೂ ನಟಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
Fraud Case: 3.25 ಕೋಟಿ ವಂಚನೆ ಕೇಸ್; ಐಶ್ವರ್ಯ ದಂಪತಿ ಮತ್ತೆ ಸೆರೆ
Atul Subhash Case: ಪತ್ನಿ ಮೇಲಿನ ಕೇಸ್ ರದ್ದತಿಗೆ ನಿರಾಕರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Yakshagana: ಕಾಲಮಿತಿ, ಕಾಲಗತಿಯ ಕಾಲದ ಯಕ್ಷಗಾನ-ಚಿಂತನೆ
ಜಿ.ಪಂ.,ತಾ.ಪಂ. ಚುನಾವಣೆ ವಿಳಂಬಕ್ಕೆ ಸರಕಾರವೇ ನೇರ ಹೊಣೆ, ನಾವು ಚುನಾವಣೆಗೆ ಸಿದ್ಧ: ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.