ಸಚಿವ ರೇವಣ್ಣ ವಿರುದ್ಧ ಎಸಿಬಿಗೆ ದೂರು

Team Udayavani, Mar 17, 2018, 11:27 AM IST

ACB.jpg

ಬೆಂಗಳೂರು: ಬಸ್‌ಗಳ ಖರೀದಿ ಹಾಗೂ ಅವುಗಳ ನಿರ್ವಹಣೆ ಹೆಸರಿನಲ್ಲಿ 1,577 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಸಾರಿಗೆ ಸಚಿವ ಎಚ್‌.ಎಂ.ರೇವಣ್ಣ  ಮತ್ತು ಸಾರಿಗೆ ಸಂಸ್ಥೆಗಳ ಹಿರಿಯ ಅಧಿಕಾರಿಗಳ ವಿರುದ್ಧ ಬಿಜೆಪಿ ನಗರ ಘಟಕದ ವಕ್ತಾರ ಎನ್‌.ಆರ್‌.ರಮೇಶ್‌ ಶುಕ್ರವಾರ ಎಸಿಬಿಗೆ ದೂರು ನೀಡಿದ್ದಾರೆ.

ಸಾರಿಗೆ ಸಚಿವ ಎಚ್‌.ಎಂ.ರೇವಣ್ಣ, ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಬಿ.ಬಸವರಾಜು, ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಎಸ್‌.ಆರ್‌ ಉಮಾಶಂಕರ್‌, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಪೊನ್ನುರಾಜ್‌, ಎನ್‌.ಇ.ಕೆ.ಆರ್‌.ಟಿ.ಸಿಯ ವ್ಯವಸ್ಥಾಪಕ ನಿರ್ದೇಶಕ ಎಚ್‌.ಎಸ್‌ ಅಶೋಕ್‌ ಆನಂದ್‌, ಎನ್‌ಡಬುಕೆಆರ್‌ಟಿಸಿಯ ವ್ಯವಸ್ಥಾಪಕ ನಿರ್ದೇಶಕ ಪಾಂಡುರಂಗ ಬೊಮ್ಮಯ್ಯ ನಾಯ್ಕ ಅಧಿಕಾರ ದುರುಪಯೋಗಪಡಿಸಿಕೊಂಡು ಭ್ರಷ್ಟಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಸಚಿವ ರೇವಣ್ಣ ಸಾರಿಗೆ ಸಚಿವರಾಗಿ ಅಧಿಕಾರ ಸ್ವೀಕರಿಸಿ ಕೇವಲ ಆರೂವರೆ ತಿಂಗಳಾಗಿದ್ದು, ನಂತರ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ , ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮತ್ತು ಬೆಂಗಳೂರು ಮಹಾ ನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಗಳಿಗೆ ಬಸ್‌ಗಳನ್ನು ಖರೀದಿಸುವ ಸಲುವಾಗಿ 970 ಕೋಟಿಗೂ ಅಧಿಕ ಹಣ ಖರ್ಚು ಮಾಡಲಾಗಿದೆ.

ಇತರೆ ವಾಹನ ನಿರ್ವಹಣೆ ಮತ್ತು ದುರಸ್ಥಿ ಕಾರ್ಯಗಳಿಗೆಂದು 607 ಕೋಟಿ ರೂ.ಗೂ ಅಧಿಕ ಹಣ ಬಳಸಿಕೊಳ್ಳಲಾಗಿದೆ. ಒಟ್ಟಾರೆ ಬಸ್‌ ಖರೀದಿ ಮತ್ತು ನಿರ್ವಹಣೆಗೆ 1,577 ಕೋಟಿ ವ್ಯಯಿಸಲಾಗಿದೆ. ಈ ಹಣದಲ್ಲಿ ಅವ್ಯವಹಾರ ನಡೆದಿದ್ದು, ಸೂಕ್ತ ತನಿಖೆ ನಡೆಸುವಂತೆ ದೂರಿನಲ್ಲಿ ರಮೇಶ್‌ ಒತ್ತಾಯಿಸಿದ್ದಾರೆ.

ಲೋಕಾಯುಕ್ತಕ್ಕೂ ದೂರು: ಇದೇ ವೇಳೆ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಸಂಸ್ಥೆಗಳ ಬಳಕೆಗೆಂದು ಇತ್ತೀಚೆಗೆ ಸ್ವೀಡನ್‌ ದೇಶದ ಸ್ಕ್ಯಾನಿಯಾ ಹೆಸರಿನ 300ಕ್ಕೂ ಅಧಿಕ ಬಸ್‌ಗಳನ್ನು ಖರೀದಿಸಿರುವ ಪ್ರಕ್ರಿಯೆಗಳಲ್ಲೂ ಅವ್ಯವಹಾರ ನಡೆದಿದೆ. ಶೇ.75 ರಷ್ಟು ಪ್ರಮಾಣದ ಬಸ್‌ಗಳಲ್ಲಿ ಸಾಕಷ್ಟು ತೊಂದರೆ ಕಂಡು ಬಂದಿದೆ. ಈ ಬಗ್ಗೆ ತನಿಖೆ ನಡೆಸುವಂತೆ ಸಚಿವರು ಹಾಗೂ ಐವರು ಅಧಿಕಾರಿಗಳ ವಿರುದ್ಧ ಬಿ.ಗಣೇಶ್‌ ಸಿಂಗ್‌ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಟಾಪ್ ನ್ಯೂಸ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

3

Bengaluru: ಕ್ಯಾಬ್‌ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್‌ ಎಂಜಿನಿಯರ್‌ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.