ಸಮಾವೇಶದಲ್ಲಿ ಎನ್‌ಸಿಸಿ ಕ್ಯಾಡೆಟ್‌ಗಳು ಭಾಗವಹಿಸಿದ್ದಕ್ಕೆ ದೂರು
Team Udayavani, Sep 15, 2017, 11:49 AM IST
ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಖಂಡಿಸಿ ಮಂಗಳವಾರ ಬೆಂಗಳೂರಿನಲ್ಲಿ ನಡೆದ ಪ್ರತಿರೋಧ ಸಮಾವೇಶದಲ್ಲಿ ನಗರದ ಸೇಂಟ್ ಜೋಸೆಫ್ ಕಾಲೇಜಿನ ಎನ್‌ಸಿಸಿ ವಿದ್ಯಾರ್ಥಿಗಳು ಎನ್‌ಸಿಸಿ ಸಮವಸ್ತ್ರ ಧರಿಸಿ ಪಾಲ್ಗೊಂಡಿರುವ ಬಗ್ಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್‌ಗೆ ದೂರು ನೀಡಲಾಗಿದೆ.
ನಗರದ ಸಿಟಿಜನ್ಸ್ ಫಾರ್ ಡೆಮಾಕ್ರಸಿ ಸಂಘಟನೆ ಈ ಕುರಿತು ದೂರು ನೀಡಿದ್ದು, ಎನ್‌ಸಿಸಿ ಕಾಯ್ದೆ ಪ್ರಕಾರ ರಾಜಕೀಯ ಪ್ರತಿಭಟನೆಗಳಲ್ಲಿ ಎನ್‌ಸಿಸಿ ಕೆಡೆಟ್‌ಗಳು ಸಮವಸ್ತ್ರ ಧರಿಸಿ ಭಾಗವಹಿಸುವಂತಿಲ್ಲ. ಆದರೆ, ರಾಜಕೀಯ ಪ್ರತಿಭಟನೆಯಾದ ಪ್ರತಿರೋಧ ಸಮಾವೇಶದಲ್ಲಿ ಸೇಂಟ್ ಜೋಸೆಫ್ ಕಾಲೇಜಿನ ಎನ್‌ಸಿಸಿ ಕೆಡೆಟ್‌ಗಳು ಭಾಗವಹಿಸಿದ್ದಾರೆ. ಆದ್ದರಿಂದ ಈ ಬಗ್ಗೆ ತನಿಖೆಗೆ ಆದೇಶಿಸಬೇಕು. ಜತೆಗೆ ಕಾಲೇಜು ಆಡಳಿತ ಮಂಡಳಿ ಮತ್ತು ಎನ್‌ಸಿಸಿ ಅಧಿಕಾರಿ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದೆ.
ಎನ್‌ಸಿಸಿ ಕೆಡೆಟ್‌ಗಳು ಪ್ರತಿಭಟನೆಯಲ್ಲಿ ಕೆಲ ರಾಜಕೀಯ ಪಕ್ಷಗಳೊಂದಿಗೆ ಸೇರಿ ಭಾಗವಹಿಸಿದ ಬಗ್ಗೆ ಮತ್ತು ಘೋಷಣೆಗಳನ್ನು ಕೂಗಿದ ಬಗ್ಗೆ ವೀಡಿಯೊ ಸಿ.ಡಿ. ಮತ್ತು ಫೋಟೋಗಳನ್ನು ಕೂಡ ದೂರಿನ ಜತೆ ಕಳುಹಿಸಿಕೊಟ್ಟಿರುವ ಸಿಟಿಜನ್ಸ್ ಫಾರ್ ಡೆಮಾಕ್ರಸಿ ಸಂಘಟನೆ, ಇದರಿಂದ ಎನ್‌ಸಿಸಿಯ ಘನತೆಗೆ ಧಕ್ಕೆಯಾಗಿರುವುದರ ಜತೆಗೆ ಕಾಯ್ದೆಯ ಉಲ್ಲಂಘನೆಯೂ ಆಗಿದೆ ಎಂದು ಆರೋಪಿಸಿದೆ.
ಮಂಗಳವಾರ ನಡೆದ ಪ್ರತಿರೋಧ ಸಮಾವೇಶ ಕೇಂದ್ರ ಸರ್ಕಾರದ ವಿರುದ್ಧವಾಗಿದ್ದು, ಇದರಲ್ಲಿ ಕಾಂಗ್ರೆಸ್, ಸಿಪಿಎಂ, ಸಿಪಿಐ, ಪಿಎಫ್ಐ, ಎಸ್‌ಡಿಪಿಐ ಮುಂತಾದ ಸಂಘಟನೆಗಳು ಭಾಗವಹಿಸಿದ್ದವು. ಅದರಲ್ಲೂ ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಎಸ್‌ಡಿಪಿಐ ಸಂಘಟನೆಗಳ ಹಲವು ಕಾರ್ಯಕರ್ತರು ವಿವಿಧ ನ್ಯಾಯಾಲಯಗಳಿಂದ ಶಿಕ್ಷೆಗೊಳಗಾಗಿದ್ದಾರೆ ಎಂಬ ಅಂಶವನ್ನೂ ದೂರಿನಲ್ಲಿ ಹೇಳಲಾಗಿದೆ.
ಅಷ್ಟೇ ಅಲ್ಲದೆ, ಎನ್‌ಸಿಸಿ ಎಂಬುದು ಭಾರತೀಯ ಸೇನೆಯ ಪ್ರವೇಶಕ್ಕೆ ಮೆಟ್ಟಿಲು. ಎನ್‌ಸಿಸಿ ಕೆಡೆಟ್‌ಗಳು ಸೇನೆಗೆ ಸೇರುವ ಅವಕಾಶವುಳ್ಳವರು ಎಂದು ಜನ ಭಾವಿಸಿದ್ದಾರೆ. ಆದರೆ, ಸೇಂಟ್ ಜೋಸೆಫ್ ಕಾಲೇಜಿನ ಎನ್‌ಸಿಸಿ ಕೆಡೆಟ್‌ಗಳು ರಾಜಕೀಯ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮೂಲಕ ಈ ಭಾವನೆಗೆ ಘಾಸಿಯುಂಟುಮಾಡಿದ್ದಾರೆ.
ಕಾಲೇಜಿನ ಆಡಳಿತ ಮಂಡಳಿ ಮತ್ತು ಎನ್‌ಸಿಸಿ ವಿಭಾಗದ ಈ ಅಜಾಗರೂಕತೆಯಿಂದಾಗಿ ಎನ್‌ಸಿಸಿ ಮಾರ್ಗಸೂಚಿಗಳು ಉಲ್ಲಂಘನೆಯಾಗಿವೆ. ಆದ್ದರಿಂದ ಕಾಲೇಜಿನ ಆಡಳಿತ ಮಂಡಳಿ ಮತ್ತು ಎನ್‌ಸಿಸಿ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ
Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್
Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್; ಬೆಳಗಾವಿಗೆ ವಂದೇ ಭಾರತ್ ವಿಸ್ತರಣೆಗೆ ಮನವಿ
Bengaluru: 54 ಪಾಲಿಕೆ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ
Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.