ಸಮ್ಮಿಶ್ರ ಸರ್ಕಾರಕ್ಕೆ ಸಮನ್ವಯ ಸಮಿತಿ ರಚನೆ
Team Udayavani, May 20, 2018, 6:05 AM IST
ಬೆಂಗಳೂರು: “ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಸುಗಮವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಲು ಸಮನ್ವಯ ಸಮಿತಿ ರಚಿಸಲಾಗುವುದು’ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಶನಿವಾರ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಆಹ್ವಾನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಸುಭದ್ರವಾಗಿರುವಂತೆ ನೋಡಿಕೊಳ್ಳುವುದರೊಂದಿಗೆ ಅವಧಿ ಪೂರ್ಣಗೊಳಿಸಲು ಮತ್ತು ಯಾವ ರೀತಿ ಕಾರ್ಯವೈಖರಿ ಇರಬೇಕು ಎಂಬುದನ್ನು ಈ ಸಮನ್ವಯ ಸಮಿತಿ ತೀರ್ಮಾನಿಸಲಿದೆ. ಕಾಂಗ್ರೆಸ್ ನಾಯಕರೊಂದಿಗೆ ಚರ್ಚಿಸಿ ಸಮನ್ವಯ ಸಮಿತಿ ರಚಿಸಲಾಗುವುದು ಎಂದು ಹೇಳಿದರು.
ಮೂಲಗಳ ಪ್ರಕಾರ ಈ ಸಮನ್ವಯ ಸಮಿತಿಗೆ ಸಿದ್ದರಾಮಯ್ಯ ಅಧ್ಯಕ್ಷರಾಗಿರಲಿದ್ದಾರೆ.ಜೆಡಿಎಸ್-ಕಾಂಗ್ರೆಸ್ ಸರ್ಕಾರ ರಚನೆಯಾದ ಮೇಲೂ ಬಿಜೆಪಿ ಆಪರೇಷನ್ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸಲು ಅಥವಾ ವಿಶ್ವಾಸಮತ ಸಾಬೀತುಪಡಿಸ ದಂತೆ ಅಡ್ಡಿಪಡಿಸಲು ಪ್ರಯತ್ನಿಸಲಿದೆ.ಆದರೆ, ಅವರ ಆಟ ನಡೆಯುವುದಿಲ್ಲ.ನಮಗೆ ಬಿಜೆಪಿ ಬಳಸುವ ಐಟಿ, ಇಡಿ ಅಸOಉಗಳ ಬಗ್ಗೆ ಯಾವುದೇ ಭಯವಿಲ್ಲ. ಅದಕ್ಕೆಲ್ಲ ಹೇಗೆ ಅಂತ್ಯ ಕಾಣಿಸಬೇಕು ಎಂಬುದು ಗೊತ್ತಿದೆ ಎಂದರು.
ಪ್ರಮಾಣವಚನ ಸ್ವೀಕಾರಕ್ಕೆ ಆಹ್ವಾನ: ಬುಧವಾರ ನಡೆಯುವ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಪ್ರಾದೇಶಿಕ ಪಕ್ಷಗಳ ಪ್ರಮುಖರನ್ನು ಆಹ್ವಾನಿಸಲಾಗುತ್ತದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರರಾವ್, ಬಿಎಸ್‌ಪಿ ಅಧಿನಾಯಕಿ ಮಾಯಾವತಿ,ಅಖೀಲೇಶ್ ಯಾದವ್ ಅವರನ್ನು ಆಹ್ವಾನಿಸಲಾಗುವುದು ಎಂದು ತಿಳಿಸಿದರು.
ಬುಧವಾರ ಪ್ರಮಾಣವಚನ: ಸೋಮವಾರ ರಾಜೀವ್ ಗಾಂಧಿ ಪುಣ್ಯತಿಥಿ ಇರುವುದರಿಂದ ಕಾಂಗ್ರೆಸ್ ನಾಯಕರು
ಲಭ್ಯರಿರುವುದಿಲ್ಲ. ಹೀಗಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಲು ಕುಮಾರಸ್ವಾಮಿ ತೀರ್ಮಾನಿಸಿದ್ದಾರೆ. ಎಚ್‌ಡಿಕೆ ಜೊತೆ ಎರಡು ಪಕ್ಷಗಳ ಕೆಲವು ಶಾಸಕರು ಪ್ರತಿಜ್ಞಾ ವಿಧಿ ಸ್ವೀಕರಿಸಲಿದ್ದಾರೆ.
ಇಂದು ಸೋನಿಯಾ ಭೇಟಿ ಮಾಡಲಿರುವ ಎಚ್‌ಡಿಕೆ
ಬುಧವಾರ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ
ಭಾನುವಾರ ದೆಹಲಿಗೆ ತೆರಳಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಅವರನ್ನು ಭೇಟಿ ಮಾಡುವ ಸಾಧ್ಯತೆಯಿದೆ.
ರಾಜ್ಯದಲ್ಲಿ ಅತಂತ್ರ ಪರಿಸ್ಥಿತಿ ಬರುವ ಮುನ್ಸೂಚನೆ ಸಿಗುತ್ತಿದ್ದಂತೆ ಸೋನಿಯಾ ಗಾಂಧಿ ಅವರು ಜೆಡಿಎಸ್
ವರಿಷ್ಠ ಎಚ್.ಡಿ.ದೇವೇಗೌಡರನ್ನು ಸಂಪರ್ಕಿಸಿ ಸಮ್ಮಿಶ್ರ ಸರ್ಕಾರ ರಚಿಸುವ ಬಗ್ಗೆ ಪ್ರಸ್ತಾಪಿಸಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರ ರಚಿಸಲು ಜೆಡಿಎಸ್‌ಗೆ ಬೆಂಬಲ ನೀಡಿದ್ದಕ್ಕೆ ಅಭಿನಂದನೆ ಸಲ್ಲಿಸುವ ಸಲುವಾಗಿ ಸೋನಿಯಾ ಗಾಂಧಿ ಅವರನ್ನು ಕುಮಾರಸ್ವಾಮಿ ಭೇಟಿ ಮಾಡಿ ಜತೆಗೆ ಪ್ರಮಾಣ ವಚನಕ್ಕೆ ಆಹ್ವಾನ ನೀಡಲಿದ್ದಾರೆ.ಇದೇ ವೇಳೆ ರಾಹುಲ್ ಗಾಂಧಿ ಅವರೊಂದಿಗೂ ಚರ್ಚಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಡಿಸಿಎಂ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ ಲಿಂಗಾಯತರ ಪೈಪೋಟಿ
ಬೆಂಗಳೂರು: ವಿಧಾನಸಭೆಯಲ್ಲಿ ಯಡಿಯೂರಪ್ಪ ಬಹುಮತ ಸಾಬೀತು ಪಡಿಸಲು ವಿಫಲವಾದ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಉಪ ಮುಖ್ಯಮಂತ್ರಿ ಸ್ಥಾನದ ಬೇಡಿಕೆ ಹೆಚ್ಚಾಗುತ್ತಿದೆ. ದಲಿತ, ಲಿಂಗಾಯತ ಹಾಗೂ ಅಲ್ಪ ಸಂಖ್ಯಾತ ಸಮುದಾಯದ ಮುಖಂಡರು ತಮ್ಮ ಸಮುದಾಯಕ್ಕೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಪಕ್ಷದ ನಾಯಕರ ಮೇಲೆ ಒತ್ತಡ ಹೇರಲು ಆರಂಭಿಸಿದ್ದಾರೆ. ಪಕ್ಷದ ಮೂಲಗಳ ಪ್ರಕಾರ ದಲಿತ ಸಮುದಾಯದವರಿಗೆ ಉಪ ಮುಖ್ಯಮಂತ್ರಿ ಸ್ಥಾನ ದೊರೆಯುತ್ತದೆಂಬ ಚರ್ಚೆ ನಡೆಯುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಅವರಿಗೆ ಉಪ ಮುಖ್ಯಮಂತ್ರಿ ಮಾಡಲಾಗುತ್ತದೆ ಎಂಬ ಮಾತು ಕೇಳಿ ಬರುತ್ತಿದೆ.
ಇದರ ಜತೆಗೆ ಲಿಂಗಾಯತ ಸಮುದಾಯದವರಿಗೂ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂಬ ಬೇಡಿಕೆ ಕೇಳಿ ಬರುತ್ತಿದೆ. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡಿರುವುದರಿಂದ ಲಿಂಗಾಯತ ಸಮುದಾಯ ಮುನಿಸಿಕೊಳ್ಳುವುದನ್ನು ತಪ್ಪಿಸಲು ಹಾಗೂ ಕಾಂಗ್ರೆಸ್ ಲಿಂಗಾಯತರ ವಿರೋಧಿ ಎನ್ನುವುದನ್ನು ತಪ್ಪಿಸಲು
ವೀರಶೈವ ಲಿಂಗಾಯತ ಸಮುದಾಯದ ಹಿರಿಯ ನಾಯಕರಾಗಿರುವ ಶಾಮನೂರು ಶಿವಶಂಕರಪ್ಪ ಅಥವಾ ಎಂ.ಬಿ. ಪಾಟೀಲರಿಗೆ ಡಿಸಿಎಂ ಸ್ಥಾನ ನೀಡಬೇಕೆಂದು ವೀರಶೈವ ಲಿಂಗಾಯತ ಮಹಾಸಭೆ ಆಗ್ರಹಿಸಿದೆ. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್‌ಗೆ ಮನವಿ ಸಲ್ಲಿಸಲು ಅಖೀಲ ಭಾರತ ವೀರಶೈವ ಮಹಾಸಭೆ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Padubidri: ಅಪರಿಚಿತ ವಾಹನ ಢಿಕ್ಕಿ; ಪಾದಚಾರಿಗೆ ತೀವ್ರ ಗಾಯ
Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ
Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು
Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು
Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.