ವಿಜ್ಞಾನ, ತಂತ್ರಜ್ಞಾನದಿಂದ ಸಮಗ್ರ ಅಭಿವೃದ್ಧಿ
Team Udayavani, Oct 15, 2018, 12:43 PM IST
ಬೆಂಗಳೂರು: ವಿಜ್ಞಾನ ಮತ್ತು ತಂತ್ರಜ್ಞಾನದ ಕೊಡುಗೆಯಿಂದ ಆಹಾರ ಉತ್ಪಾದನೆ, ವಿದೇಶಿ ರಫ್ತು ಹಾಗೂ ಬಾಹ್ಯಾಕಾಶ ವಿಜ್ಞಾನ ಸೇರಿದಂತೆ ಹಲವು ಕ್ಷೇತ್ರದಲ್ಲಿ ಭಾರತ ಉನ್ನತ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ಐಎಸ್‌ಸಿಎ ಅಧ್ಯಕ್ಷ ಡಾ. ಮನೋಜ್ ಕುಮಾರ್ ಹೇಳಿದರು. ಆಕ್ಸ್‌ಫರ್ಡ್ ವಿಜ್ಞಾನ ಕಾಲೇಜು ಮತ್ತು ಇಂಡಿಯನ್ ಸೈನ್ಸ್ ಕಾಂಗ್ರೆಸ್ ಹಮ್ಮಿಕೊಂಡಿದ್ದ “ಭವಿಷ್ಯದ ಭಾರತ: ವಿಜ್ಞಾನ ತಂತ್ರಜ್ಞಾನದ ಸುಸ್ಥಿರ ಅಭಿವೃದ್ಧಿ’ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.
ವಿಜ್ಞಾನ ತಂತ್ರಜ್ಞಾನದ ಅಭಿವೃದ್ಧಿಯಿಂದ ಭಾರತ ಬಾಹ್ಯಾಕಾಶ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡಿದೆ. ಗರಿಷ್ಠ ಮಟ್ಟದ ಉಪಗ್ರಹಗಳನ್ನು ಉಡಾವಣೆ ಮಾಡುವ ಸಾಮರ್ಥ್ಯ ಹೊಂದಿದೆ. ಸೂಪರ್ ಕಂಪ್ಯೂಟರ್‌ಗಳ ಬಳಕೆ ಮತ್ತು ತಯಾರಿಕೆ, ವೈದ್ಯಕೀಯ ಹಾಗೂ ಕೈಗಾರಿಕಾ ಕ್ಷೇತ್ರದಲ್ಲೂ ಬೆಳವಣಿಗೆ ಸಾಧಿಸಿದೆ ಎಂದರು.
ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ದೇಶ ಈಗ ಸಾಗುತ್ತಿರುವ ವೇಗವನ್ನೇ ಕಾಯ್ದುಕೊಳ್ಳಬೇಕು. ಸ್ಪರ್ಧಾತ್ಮಕತೆಗೆ ತಕ್ಕಂತೆ ಪರಿವರ್ತನಾಶೀಲರಾಗಬೇಕು. ವಿಜ್ಞಾನದ ಆವಿಷ್ಕಾರಗಳಿಗೆ ಸಂಪನ್ಮೂಲದ ಸದ್ಬಳಕೆಯೂ ಆಗಬೇಕು ಎಂದು ಹೇಳಿದರು. ಐಎಸ್‌ಸಿಎನ ಪ್ರೊ.ಅಶೋಕ್ ಕುಮಾರ್, ಡಾ.ವಿಜಯಲಕ್ಷ್ಮೀ, ಆಕ್ಸಪರ್ಡ್ ವಿದ್ಯಾಸಂಸ್ಥೆಯ ಅಧ್ಯಕ್ಷ ಎಸ್.ಎನ್.ವಿ.ಎಲ್. ನರಸಿಂಹರಾಜು ಮೊದಲಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಿನೆಮಾ ಪೋಸ್ಟರ್ ಗಳ ಕೋಣೆಯಲ್ಲಿ-ಹಾಲಿವುಡ್ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ
Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.