ಕೋವಿಡ್‌ ಆರೈಕೆ ಕೇಂದ್ರ ದರ ನಿಗದಿಯಲ್ಲಿ ಗೊಂದಲ


Team Udayavani, Jul 24, 2020, 7:12 AM IST

ಕೋವಿಡ್‌ ಆರೈಕೆ ಕೇಂದ್ರ ದರ ನಿಗದಿಯಲ್ಲಿ ಗೊಂದಲ

ಬೆಂಗಳೂರು: ದೇಶದ ಅತೀ ದೊಡ್ಡ ಕೋವಿಡ್‌ ಆರೈಕೆ ಕೇಂದ್ರ ಎಂದೇ ಖ್ಯಾತಿ ಗಳಿಸಿರುವ ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನಾ ಕೇಂದ್ರದ (ಬಿಐಇಸಿ)ದ ಸಮಸ್ಯೆ ಈಗ ಮತ್ತೂಂದು ತಿರುವು ಪಡೆದುಕೊಂಡಿದೆ. ಇದೀಗ ಈ ಕೇಂದ್ರದ ಮೂಲಸೌಕರ್ಯ ವಿಚಾರದಲ್ಲಿ ಬಿಬಿಎಂಪಿ ಹಾಗೂ ಗುತ್ತಿಗೆದಾರರ ನಡುವೆ ಕೆಲವು ವಸ್ತುಗಳ ಖರೀದಿಯಲ್ಲಿ ಹಗ್ಗಜಗ್ಗಾಟ ಶುರುವಾಗಿದೆ.

ಈ ಸಂಬಂಧ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಗುತ್ತಿಗೆದಾರ ಪತ್ರ ಬರೆದು ಬಿಬಿಎಂಪಿ ನಿಗದಿಪಡಿಸಿರುವ ಬೆಲೆ ವಸ್ತುಗಳನ್ನು ನೀಡಲು ಸಾಧ್ಯವಿಲ್ಲ ಎಂದು ಗುತ್ತಿಗೆದಾರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಿಐಇಸಿಯಲ್ಲಿ 10,100 ಹಾಸಿಗೆ ಸಾಮರ್ಥ್ಯದ ಕೋವಿಡ್ ಆರೈಕೆ ಕೇಂದ್ರ ನಿರ್ಮಾಣ ಮಾಡಲಾಗಿದ್ದು, ಕೇಂದ್ರದಲ್ಲಿ ಸೋಂಕಿತರ ಮೂಲಸೌಕರ್ಯಕ್ಕೆಂದು ಹಾಸಿಗೆ, ಮಂಚ, ಫ್ಯಾನ್‌, ಶೌಚಾಲಯ ಮತ್ತು ಸ್ನಾನದ ಕೊಠಡಿ (ತಾತ್ಕಾಲಿಕ)ವ್ಯವಸ್ಥೆಗೆ 26 ವಸ್ತುಗಳನ್ನು ಬಾಡಿಗೆ ಆಧಾರದ ಮೇಲೆ ದಿನಕ್ಕೆ 800 ಬಾಡಿಗೆಗೆ ನೀಡುವಂತೆ ನಾಲ್ವರು ಗುತ್ತಿಗೆದಾರರಿಗೆ ಬಿಬಿಎಂಪಿ ಕಾರ್ಯದೇಶ ನೀಡಿತ್ತು. ಗುತ್ತಿಗೆದಾರರು 6,500 ಹಾಸಿಗೆ ವ್ಯವಸ್ಥೆಗೆ ನಿರ್ಮಾಣ ಶುರು ಮಾಡಿದ್ದರು.

ಈ ಒಪ್ಪಂದದಂತೆ ಬಿಬಿಎಂಪಿ 100 ದಿನಗಳಿಗೆ 10,100 ರೋಗಿಗಳ ಮೂಲಸೌಕರ್ಯಕ್ಕೆ ಬಾಡಿಗೆ ರೂಪದಲ್ಲಿ 240 ಕೋಟಿ ರೂ. ನೀಡಬೇಕಾಗಿತ್ತು. ಇದು ದುಬಾರಿಯಾದ ಹಿನ್ನೆಲೆಯಲ್ಲಿ ಕೆಲವು ವಸ್ತುಗಳನ್ನು ಖರೀದಿ ಮಾಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸೂಚಿಸಿದ್ದರು. ಅದರಂತೆ ಹಾಸಿಗೆ, ಮಂಚ, ಬಕೆಟ್‌, ನೀರಿನ ಮಗ್‌, ಬಿಸಿ ನೀರಿನ ಕ್ಯಾನ್‌ ಹಾಗೂ ಫ್ಯಾನ್‌ ಸೇರಿ 7,500 ರೂ. ಒಳಗೆ ಖರೀದಿಗೆ ಸೂಚನೆ ನೀಡಲಾಗಿತ್ತು. ಈ ಸಂಬಂಧ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚನೆಯಾಗಿತ್ತು. ಸಮಿತಿಯು ಮಾರುಕಟ್ಟೆ ದರದ ಆಧಾರಿಸಿ ಆರು ವಸ್ತುಗಳಿಗೆ 4,800ರೂ. ಖರೀದಿ ಹಾಗೂ ಉಳಿದ 19 ವಸ್ತುಗಳನ್ನು ದಿನಕ್ಕೆ 200 ರೂ. ಬಾಡಿಗೆ ಆದೇಶಿಸಿದ್ದರು. ಆದರೆ, ಈ ದರಕ್ಕೆ ಹಾಸಿಗೆ, ಮಂಚ ಸೇರಿ ಆರು ವಸ್ತುಗಳನ್ನು ಸರಬರಾಜು ಮಾಡುವುದಕ್ಕೆ ಸಾಧ್ಯವಿಲ್ಲ. ಮುಖ್ಯಮಂತ್ರಿ ಅವರು ಹೇಳಿದಂತೆ 7,500 ರೂ. ಬಿಡುಗಡೆ ಮಾಡುವಂತೆ ಗುತ್ತಿಗೆದಾರರು ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

ಕೋವಿಡ್‌ ಆರೈಕೆ ಕೇಂದ್ರ ಶೀಘ್ರ ಸೇವೆಗೆ ಮುಕ್ತ : ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರ (ಬಿಐಇಸಿ)ದಲ್ಲಿ ಕೋವಿಡ್‌ ಆರೈಕೆ ಕೇಂದ್ರದಲ್ಲಿ 5 ಸಾವಿರ ಸೋಂಕಿತರು (ಸೋಂಕಿನ ತೀವ್ರತೆ ಇಲ್ಲದವರಿಗೆ) ಹಾಸಿಗೆಗಳು ಲಭ್ಯವಿದ್ದು, ಸಾವಿರ ಹಾಸಿಗೆಗಳನ್ನು ರೋಗಿಗಳ ಆರೈಕೆಗೆ ಶೀಘ್ರ ಮುಕ್ತಗೊಳಿಸುತ್ತೇವೆ ಎಂದು ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ್‌ ಪ್ರಸಾದ್‌ ತಿಳಿಸಿದರು. ಬಿಐಇಸಿಗೆ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಬಿಐಇಸಿ ಕೋವಿಡ್‌ ಆರೈಕೆ ಕೇಂದ್ರದಲ್ಲಿ ಒಟ್ಟು 6500 ಹಾಸಿಗೆ ಸೌಲಭ್ಯವಿದೆ. ಇದರಲ್ಲಿ ಐದು ಸಾವಿರ ಹಾಸಿಗೆ ಸಿದ್ಧವಾಗಿವೆ. ಇನ್ನು ನಗರದ ವಿವಿಧ

ಪ್ರದೇಶದಲ್ಲಿ ಎಂಟು ಆರೈಕೆ ಕೇಂದ್ರ ಕಾರ್ಯನಿರ್ವಹಿಸುತ್ತಿದ್ದು, 2,624 ಹಾಸಿಗೆ ವ್ಯವಸ್ಥೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ವಲಯ ಮತ್ತು ವಾರ್ಡ್‌ ವಾರು ಕೋವಿಡ್ ಆರೈಕೆ ಕೇಂದ್ರ ಪ್ರಾರಂಭಿಸುತ್ತೇವೆ ಎಂದರು.

ಮುಖ್ಯಮಂತ್ರಿ ಅವರು ರಚನೆ ಮಾಡಿದ ಅಧಿಕಾರಿಗಳ ಸಮಿತಿ ಖರೀದಿ ಮಾಡುವ ವಸ್ತುಗಳ ಬೆಲೆಯ ಬಗ್ಗೆ ಈಗಾಗಲೇ ಮಾರುಕಟ್ಟೆಯಲ್ಲಿ ಸರ್ವೇ ಮಾಡಿ 4,800 ರೂ. ಎಂದು ದರ ನಿಗದಿ ಮಾಡಿಯಾಗಿದೆ. ಸಮಿತಿ ಆದೇಶದಂತೆ ಬಿಬಿಎಂಪಿ ಹಣ ಪಾವತಿ ಮಾಡಲಿದೆ. ಇದಕ್ಕಿಂತ ಹೆಚ್ಚಿನ ದರ ನೀಡಲು ಸಾಧ್ಯವಿಲ್ಲ. ಎನ್‌. ಮಂಜುನಾಥ್‌ ಪ್ರಸಾದ್‌, ಬಿಬಿಎಂಪಿ ಆಯುಕ್ತ

ಟಾಪ್ ನ್ಯೂಸ್

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.