ಕಾಂಗ್ರೆಸ್ ಸೇರುವುದಾಗಿ ಘೋಷಿಸಿದ ಜೆಡಿಎಸ್ ರೆಬೆಲ್ ಶಾಸಕರು
Team Udayavani, Mar 4, 2017, 3:50 AM IST
ಬೆಂಗಳೂರು:ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಹಿನ್ನೆಲೆಯಲ್ಲಿ ಜೆಡಿಎಸ್‌ನಿಂದ ಅಮಾನತುಗೊಂಡಿರುವ ಏಳು ಶಾಸಕರು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿ, ಕಾಂಗ್ರೆಸ್ ಸೇರುವುದಾಗಿ ತಿಳಿಸಿದರು.
ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ನಾವೆಲ್ಲರೂ ಒಟ್ಟಿಗೆ ಇದ್ದು ಕಾಂಗ್ರೆಸ್ ಸೇರುವುದು ಖಚಿತ ಎಂದು ಹೇಳಿದರು.
ಮಾಜಿ ಸಚಿವ ಜಮೀರ್ ಅಹಮದ್, ಜೆಡಿಎಸ್‌ಗೆ ನಾವು ಬೇಡ ಎಂದ ಮೇಲೆ ನಮ್ಮ ರಾಜಕೀಯ ದಾರಿ ನಾವು ನೋಡಿಕೊಳ್ಳಬೇಕಲ್ಲವೇ? ಹೀಗಾಗಿ, ಕಾಂಗ್ರೆಸ್‌ಗೆ ಸೇರುತ್ತಿದ್ದೇವೆ ಎಂದು ತಿಳಿಸಿದರು.
ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ, ಏಳು ಶಾಸಕರು ಒಟ್ಟಿಗಿದ್ದು ಸಿದ್ದರಾಮ್ಯಯ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದೇವೆ. ಇದಕ್ಕೆ ಎಐಸಿಸಿ ರಾಜ್ಯ ಉಸ್ತುವಾರಿ ದಿಗ್ವಿಜಯ್‌ಸಿಂಗ್ ಒಪ್ಪಿಗೆ ಸಹ ಸಿಕ್ಕಿದೆ ಎಂದು ಹೇಳಿದರು.
ಚುನಾವಣೆ ಹತ್ತಿರ ಬಂದಾಗ ನಾವು ಕಾಂಗ್ರೆಸ್ ಸೇರುತ್ತೇವೆ. ನಮಗೆಲ್ಲರಿಗೂ ನಮ್ಮದೇ ಕ್ಷೇತ್ರಗಳಲ್ಲಿ ಟಿಕೆಟ್ ಕೊಡುವ ಭರವಸೆ ಸಿಕ್ಕಿದೆ. ನಾನು ಯಾವುದೇ ಕಾರಣಕ್ಕೂ ಬಿಜೆಪಿ ಸೇರುವುದಿಲ್ಲ ಎಂದು ತಿಳಿಸಿದರು.
ಮಾಜಿ ಸಚಿವ ಚೆಲುವರಾಯಸ್ವಾಮಿ, ನಾವು ನೂರಕ್ಕೆ ನೂರರಷ್ಟು ಜೆಡಿಎಸ್ ಪಕ್ಷದಲ್ಲಿಲ್ಲ. ನಾವು ಯಾವ ಪಕ್ಷಕ್ಕೆ ಹೋದರೂ ಟಿಕೆಟ್ ಖಚಿತ. ಯಾವಾಗ ಕಾಂಗ್ರೆಸ್ ಸೇರಬೇಕು ಎಂಬುದು ಇನ್ನೂ ನಿರ್ಧರಿಸಿಲ್ಲ. ಯುಗಾದಿ ನಂತರ ಕ್ಷೇತ್ರದ ಮತದಾರರ ಸಭೆ ನಡೆಸಿ ಅಧಿಕೃತವಾಗಿ ಘೋಷಿಸುತ್ತೇವೆ. ಆ ನಂತರ ನಮ್ಮ ಪಕ್ಷ ಸೇರ್ಪಡೆ ಪ್ರಕ್ರಿಯೆ ನಡೆಯಲಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಬಗ್ಗೆ ನಮಗೆ ಅತೀವ ಗೌರವವಿದೆ ಎಂದು ಹೇಳಿದರು.
ಸಮಾಲೋಚನೆ
ಇದಕ್ಕೂ ಮುನ್ನ ಏಳು ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸುಮಾರು ಹೊತ್ತು ಚರ್ಚಿಸಿದರು. ಮುಂದಿನ ವಿಧಾನಸಭೆ ಚುನಾವಣಾ ರಣತಂತ್ರದ ಬಗ್ಗೆಯೂ ಪ್ರಸ್ತಾಪವಾಯಿತು. ಈಗಿನಿಂದಲೇ ಚುನಾವಣಾ ತಯಾರಿ ಮಾಡಿಕೊಳ್ಳುವಂತೆ ಸಿದ್ದರಾಮಯ್ಯ ಏಳು ಶಾಸಕರಿಗೆ ಸೂಚಿಸಿದರು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.