ಕಾಂಗ್ರೆಸ್, ಬಿಜೆಪಿ ಸರಣಿ ಸಭೆ ಇಂದು
Team Udayavani, Sep 16, 2017, 7:35 AM IST
ಬೆಂಗಳೂರು: ವಿಧಾನ ಸಭೆ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡಿರುವ ಕಾಂಗ್ರೆಸ್ಮತ್ತು ಬಿಜೆಪಿಯ ರಾಜ್ಯ ಉಸ್ತುವಾರಿಗಳು ಮೇಲಿಂದ ಮೇಲೆ ಪೈಪೋಟಿಗೆ ಬಿದ್ದವರಂತೆ ತಮ್ಮ ತಮ್ಮ ಪಕ್ಷಗಳ ಮುಖಂಡರ ಸಭೆಗಳನ್ನು ನಡೆಸಿ ಚುನಾವಣೆ ಎದುರಿಸಲು ಈಗಿನಿಂದಲೇ ಭಾರಿ ಸಿದ್ದತೆ ಆರಂಭಿಸಿದ್ದಾರೆ.
ಶನಿವಾರ 16 ರಂದು ಕಾಂಗ್ರೆಸ್ ಉಸ್ತುವಾರಿಯಾದ ಕೆ.ಸಿ.ವೇಣುಗೋಪಾಲ ಪಕ್ಷದ ಕಚೇರಿಯಲ್ಲಿ ದಿನವಿಡೀ ವಿವಿಧ ಘಟಕಗಳ, ಬೆಂಗಳೂರು ನಗರ ಶಾಸಕರ ಸಭೆಯನ್ನು ಕರೆದಿದ್ದರೆ, ಬಿಜೆಪಿಯ ರಾಜ್ಯ ಚುನಾವಣಾ ಉಸ್ತುವಾರಿಯಾಗಿ ಜವಾಬ್ದಾರಿ ವಹಿಸಿಕೊಂಡಿರುವ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಸಹ ಪಕ್ಷದ ಹಾಲಿ ಹಾಗೂ ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಸದರ ಸಭೆಯನ್ನು ಕರೆದಿದ್ದಾರೆ.
ಎರಡೂ ಪಕ್ಷಗಳ ಉಸ್ತುವಾರಿಗಳು ಎಡೆಬಿಡದೇ ಸಭೆಗಳನ್ನು ನಡೆಸಿ ಚುನಾವಣೆ ಕಾರ್ಯತಂತ್ರಗಳನ್ನು ರೂಪಿಸತೊಡಗಿರುವುದು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ರಾಜಕೀಯ ಚಟುವಟಿಕೆಗಳನ್ನು ಮತ್ತಷ್ಟು ಚುರುಕುಗೊಳಿಸಿದ್ದು, ರಾಜ್ಯ ನಾಯಕರುಗಳನ್ನು ಕಾರ್ಯ ಪ್ರವೃತ್ತರನ್ನಾಗಿಸಿದೆ.
ಶನಿವಾರ ಬೆಳಿಗ್ಗೆ 11 ಗಂಟೆಗೆ ಪಕ್ಷದ ಮಾಧ್ಯಮ ಘಟಕ, ಸೊಸಿಯಲ್ ಮಿಡಿಯಾ ಹಾಗೂ ಐಟಿ ಸೆಲ್ಗಳ ಕಾರ್ಯಚಟುವಟಿಕೆಗಳನ್ನು ಪರಿಶೀಲನೆ ಮಾಡಲಿದ್ದಾರೆ. ಅಲ್ಲದೇ ಮುಂದಿನ ದಿನಗಳಲ್ಲಿ ಮಾಧ್ಯಮ ಹಾಗೂ ಸಾಮಾಜಿಕ ಜಾಲ ತಾಣಗಳ ಬಳಕೆ ಕುರಿತಂತೆ ಸಲಹೆಗಳನ್ನು ನೀಡಲಿದ್ದಾರೆ. ನಂತರ ಬಿಬಿಎಂಪಿ ಕಾರ್ಪೊರೇಟರ್ಗಳು ಮತ್ತು 2015 ರ ಬಿಬಿಎಂಪಿ ಕಾಂಗ್ರೆಸ್ ಅಭ್ಯರ್ಥಿಗಳ ಸಭೆ ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.