ರಾಜಧಾನಿಯಲ್ಲಿ ಕೈ-ಕಮಲ ಸಮಬಲ
Team Udayavani, May 16, 2018, 11:14 AM IST
ಬೆಂಗಳೂರು: ಬಿಬಿಎಂಪಿ ಹಾಗೂ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ 26 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 13, ಬಿಜೆಪಿ 11 ಕ್ಷೇತ್ರಗಲ್ಲಿ ಗೆಲುವು ಸಾಧಿಸಿದ್ದು, ಉಳಿದ ಎರಡು ಕ್ಷೇತ್ರಗಳಲ್ಲಿ ಜೆಡಿಎಸ್ ನಗೆ ಬೀರಿದೆ.
2013ರ ಚುನಾವಣೆಗೆ ಹೋಲಿಸಿದರೆ ಬಿಜೆಪಿ ಹಾಗೂ ಜೆಡಿಎಸ್ ತಲಾ ಒಂದೊಂದು ಸ್ಥಾನ ಕಳೆದುಕೊಂಡಿದ್ದು, ಕಾಂಗ್ರೆಸ್ ಯಥಾಸ್ಥಿತಿ ಕಾಯ್ದುಕೊಂಡಿದೆ. ಅದರಂತೆ ಚಿಕ್ಕಪೇಟೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದರೆ, ಬಿಜೆಪಿಯ ಭದ್ರಕೋಟೆ ಹೆಬ್ಟಾಳದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ.
ಶಾಂತಿನಗರದ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ವಾಸುದೇವ ಮೂರ್ತಿ ವಿರುದ್ಧ ಹಾಲಿ ಶಾಸಕ ಎನ್.ಎ.ಹ್ಯಾರೀಸ್ 5,500 ಮತಗಳ ಅಂತರದಿಂದ ಜಯಗಳಿಸಿದ್ದು, ಗಾಂಧಿನಗರ ಕ್ಷೇತ್ರದಲ್ಲಿ ದಿನೇಶ್ ಗುಂಡೂರಾವ್ ಬಿಜೆಪಿಯ ಅಭ್ಯಥಿ ಎ.ಆರ್.ಸಪ್ತಗಿರಿಗೌಡರನ್ನು 10,070 ಮತಗಳಿಂದ ಮಣಿಸಿದ್ದಾರೆ.
ರಾಜಾಜಿನಗರದಲ್ಲಿ ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಗೆಲುವಿನ ಓಟ ಮುಂದುವರಿಸಿದ್ದು, ಮಾಜಿ ಮೇಯರ್ ಜಿ.ಪದ್ಮಾವತಿ ವಿರುದ್ಧ 9,453 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಜೆಡಿಎಸ್‌ನಿಂದ ಹೊರಬಂದು ಕಾಂಗ್ರೆಸ್ ಅಭ್ಯರ್ಥಿಯಾಗಿ ಚಾಮರಾಜಪೇಟೆಯಿಂದ ಸ್ಪರ್ಧಿಸಿದ್ದ ಜಮೀರ್ ಅಹಮದ್ ಖಾನ್ ಬಿಜೆಪಿಯ ಎಂ.ಲಕ್ಷ್ಮೀನಾರಾಯಣ ವಿರುದ್ಧ 33,137 ಮತಗಳ ಅಂತರದಿಂದ ಗೆದ್ದಿದ್ದಾರೆ.
ಮಹಾಲಕ್ಷ್ಮೀ ಬಡಾವಣೆಯಲ್ಲಿ ಜೆಡಿಎಸ್ ಹಾಲಿ ಶಾಸಕ ಕೆ.ಗೋಪಾಲಯ್ಯ ಒಟ್ಟು 88,218 ಮತಗಳನ್ನು ಪಡೆದಿದ್ದು, ಸಮೀಪದ ಬಿಜೆಪಿ ಅಭ್ಯರ್ಥಿ ಎನ್.ಎಲ್.ನರೇಂದ್ರಬಾಬು ಅವರನ್ನು 41,100 ಮತಗಳ ಅಂತರದಿಂದ ಸೋಲಿಸಿದ್ದಾರೆ. ಇನ್ನು ಮಲ್ಲೇಶ್ವರದಲ್ಲಿ ಬಿಜೆಪಿಯ ಅಶ್ವತ್ಥನಾರಾಯಣ ಅವರು 83,130 ಮತಗಳನ್ನು ಪಡೆದು, ಕಾಂಗ್ರೆಸ್ ಕೆಂಗಲ್ ಶ್ರೀಪಾದರೇಣು ಅವರನ್ನು 54 ಸಾವಿರ ಮತಗಳ ಅಂತರದಿಂದ ಪರಾಭವಗೊಳಿಸಿದ್ದಾರೆ.
ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಇದೇ ಮೊದಲ ಬಾರಿ ಬಿಜೆಪಿಯ ಉದಯ್ ಗರುಡಾಚಾರ್ ಕಾಂಗ್ರೆಸ್‌ನ ಆರ್.ವಿ.ದೇವರಾಜ್‌ರನ್ನು 7,934 ಮತಗಳಿಂದ ಸೋಲಿಸಿದ್ದಾರೆ. ಸಿ.ವಿ.ರಾಮನ್ ನಗರದಲ್ಲಿ ಬಿಜೆಪಿಯ ಎಸ್.ರಘು ಅವರು 58,887 ಮತಗಳನ್ನು ಪಡೆಯುವ ಮೂಲಕ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದು, ಸಮೀಪದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮೇಯರ್ ಆದ ಆರ್.ಸಂಪತ್‌ರಾಜ್ ಅವರನ್ನು 12,227 ಮತಗಳಿಂದ ಪರಾಭವಗೊಳಿಸಿದ್ದಾರೆ.
ಬ್ಯಾಟರಾಯನಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಕೃಷ್ಣಭೈರೇಗೌಡ ಅವರು ಬಿಜೆಪಿಯ ಎ.ರವಿ ವಿರುದ್ಧ 5,671 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಗೋವಿಂದರಾಜನಗರದಲ್ಲಿ ಕಾಂಗ್ರೆಸ್‌ನ ಪ್ರಿಯಾಕೃಷ್ಣ ಅವರನ್ನು ಬಿಜೆಪಿಯ ವಿ.ಸೋಮಣ್ಣ ಅವರು 11,760 ಮತಗಳ ಅಂತರದಿಂದ ಸೋಲಿಸಿದ್ದು, ಪಕ್ಕದ ವಿಜಯನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಎಂ.ಕೃಷ್ಣಪ್ಪ ಅವರು ಬಿಜೆಪಿಯ ಎಚ್.ರವೀಂದ್ರ ಅವರ ವಿರುದ್ಧ 2,775 ಮತಗಳಿಂದ ಗೆಲುವು ಸಾಧಿಸಿದ್ದಾರೆ.
ಬಸವನಗುಡಿಯಲ್ಲಿ ಬಿಜೆಪಿಯ ರವಿಸುಬ್ರಹ್ಮಣ್ಯ ಅವರು ಸಮೀಪದ ಪ್ರತಿಸ್ಪರ್ಧಿ ಜೆಡಿಎಸ್‌ನ ಬಾಗೇಗೌಡ ವಿರುದ್ಧ 38,009 ಮತಗಳಿಂದ ಗೆಲುವು ಸಾಧಿಸಿದ್ದಾರೆ. ಇನ್ನು ಪದ್ಮನಾಭನಗರದಲ್ಲಿ ಮಾಜಿ ಡಿಸಿಎಂ ಆರ್.ಅಶೋಕ್ ಅವರು ಜೆಡಿಎಸ್‌ನ ವಿ.ಕೆ.ಗೋಪಾಲ್‌ರನ್ನು 32,166 ಮತಗಳಿಂದ ಸೋಲಿಸಿದ್ದಾರೆ. ಹೊರವಲಯದ ಬೊಮ್ಮನಹಳ್ಳಿಯಲ್ಲಿ ಬಿಜೆಪಿಯ ಸತೀಶ್‌ರೆಡ್ಡಿ ಭಾರಿ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು, ಕಾಂಗ್ರೆಸ್‌ನ ಸುಷ್ಮಾ ರಾಜಗೋಪಾಲರೆಡ್ಡಿ ಅವರನ್ನು 47,162 ಮತಗಳಿಂದ ಪರಾಭವಗೊಳಿಸಿದ್ದಾರೆ.
ಮಹದೇವಪುರ ಕ್ಷೇತ್ರದಲ್ಲಿ ಬಿಜೆಪಿಯ ಅರವಿಂದ ಲಿಂಬಾವಳಿ ಅವರು ಕಾಂಗ್ರೆಸ್ ಅಭ್ಯರ್ಥಿ ಎ.ಸಿ.ಶ್ರೀನಿವಾಸ್‌ರನ್ನು 17,784 ಮತಗಳಿಂದ ಪರಾಭವಗೊಳಿಸುವ ಮೂಲಕ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. ಆನೇಕಲ್‌ನಲ್ಲಿ ಕಾಂಗ್ರೆಸ್‌ನ ಬಿ.ಶಿವಣ್ಣ ಅವರು ಎರಡನೇ ಅವಧಿಗೆ ಆಯ್ಕೆಯಾಗಿದ್ದು, ಬಿಜೆಪಿ ಅಭ್ಯರ್ಥಿ ಎ.ನಾರಾಯಣಸ್ವಾಮಿ 8,027 ಮತಗಳ ಅಂತರದಿಂದ ಸೋತಿದ್ದಾರೆ.
ಶಿವಾಜಿನಗರದಲ್ಲಿ ಕಾಂಗ್ರೆಸ್‌ನ ರೋಷನ್ ಬೇಗ್ 59,742 ಮತಗಳನ್ನು ಪಡೆಯುವ ಮೂಲಕ ಬಿಜೆಪಿಯ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿರುದ್ಧ 15,040 ಮತಗಳ ಅಂತರದಿಂದ ಗೆದ್ದಿದ್ದು, ಹೆಬ್ಟಾಳದಲ್ಲಿ ಭೈರತಿ ಸುರೇಶ್ ಅವರು 74,453 ಮತಗಳನ್ನು ಪಡೆಯುವ ಮೂಲಕ ಬಿಜೆಪಿಯ ವೈ.ಎ.ನಾರಾಯಣಸ್ವಾಮಿ ಅವರನ್ನು 21,140 ಮತಗಳಿಂದ ಮಣಿಸಿದ್ದಾರೆ.
ಪುಲಿಕೇಶಿನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಅಖಂಡ ಶ್ರೀನಿವಾಸ್ ಬರೋಬ್ಬರಿ 81,626 ಮತಗಳ ಅಂತರದಿಂದ ಜೆಡಿಎಸ್‌ನ ಬಿ.ಪ್ರಸನ್ನಕುಮಾರ್ ಅವರನ್ನು ಮಣಿಸಿದ್ದು, ಸರ್ವಜ್ಞನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಕೆ.ಜೆ.ಜಾರ್ಜ್ 53,304 ಮತಗಳ ಅಂತರದಿಂದ ಬಿಜೆಪಿಯ ಎಂ.ಎನ್.ರೆಡ್ಡಿ ಅವರನ್ನು ಸೋಲಿಸಿದ್ದಾರೆ. ಜತೆಗೆ ಬಿಟಿಎಂ ಬಡಾವಣೆಯಲ್ಲಿ ರಾಮಲಿಂಗಾರೆಡ್ಡಿಯವರು ತಮ್ಮ ಗೆಲುವಿನ ಓಟವನ್ನು ಮುಂದುವರಿಸಿದ್ದು, ಬಿಜೆಪಿಯ ಲಲ್ಲೇಶ್ ವಿರುದ್ಧ 20,478 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಯಲಹಂಕ ಕ್ಷೇತ್ರದಲ್ಲಿ ಬಿಜೆಪಿಯ ಎಸ್.ಆರ್.ವಿಶ್ವನಾಥ್ ಅವರು ಜೆಡಿಎಸ್‌ನ ಎ.ಎಂ.ಹನುಮಂತೇಗೌಡ ಅವರ ವಿರುದ್ಧ 42,503 ಮತಗಳಿಂದ ಜಯಭೇರಿ ಬಾರಿಸಿದ್ದು, ಯಶವಂತಪುರದಲ್ಲಿ ಕಾಂಗ್ರೆಸ್‌ನ ಎಸ್.ಟಿ.ಸೋಮಶೇಖರ್ ಅವರು ಜೆಡಿಎಸ್‌ನ ಟಿ.ಎನ್.ಜವರೇಗೌಡ ವಿರುದ್ಧ 10,711 ಮತಗಳಿಂದ ಜಯಗಳಿಸಿದ್ದಾರೆ.
ಇನ್ನು ದಾಸರಹಳ್ಳಿ ಕ್ಷೇತ್ರದಲ್ಲಿ ಜೆಡಿಎಸ್‌ನ ಆರ್.ಮಂಜುನಾಥ್ ಅವರು ಬಿಜೆಪಿಯ ಶಾಸಕ ಎಸ್.ಮುನಿರಾಜು ಅವರನ್ನು 10,675 ಮತಗಳಿಂದ ಸೋಲಿಸಿದ್ದು, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಎಂ.ಕೃಷ್ಣಪ್ಪ ಕಾಂಗ್ರೆಸ್‌ನ ಆರ್.ಕೆ.ರಮೇಶ್ ವಿರುದ್ಧ 28,204 ಮತಗಳಿಂದ ಜಯಗಳಿಸಿದ್ದಾರೆ.
ಕೆ.ಆರ್.ಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಬೈರತಿ ಬಸವರಾಜ್ ಅವರು 1,35,404 ಮತ ಪಡೆದು ಬಿಜೆಪಿಯ ನಂದೀಶ್ ರೆಡ್ಡಿ ಅವರನ್ನು 32,729 ಮತಗಳ ಅಂತರದಿಂದ ಸೋಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.