ಕಾಂಗ್ರೆಸ್ ಸರ್ಕಾರದ ವಿರುದ್ಧ ಅಲೆ ಸೃಷ್ಟಿಸಿ: ಜಾವಡೇಕರ್
Team Udayavani, Sep 5, 2017, 6:25 AM IST
ಬೆಂಗಳೂರು: “ಮುಂದಿನ ಫೆಬ್ರವರಿಯೊಳಗೆ ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಪ್ರಬಲವಾಗಿ ಆಡಳಿತಾರೂಢ ಕಾಂಗ್ರೆಸ್ ಸೋಲುವ ವಾತಾವರಣ ನಿರ್ಮಾಣ ಮಾಡಬೇಕು. ಆ ನಿಟ್ಟಿನಲ್ಲಿ ಹೋರಾಟಗಳನ್ನು ಇನ್ನಷ್ಟು ತೀವ್ರಗೊಳಿಸಬೇಕು’.
ಇದು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಯೂ ಆಗಿರುವ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು ಪಕ್ಷದ ರಾಜ್ಯ ಘಟಕಕ್ಕೆ ನೀಡಿರುವ ಸೂಚನೆ. ಇದಕ್ಕೆ ಪೂರಕವಾಗಿ ಅಕ್ಟೋಬರ್ ಅಂತ್ಯದವರೆಗೆ ನಡೆಸಬೇಕಾದ ಹೋರಾಟಗಳ ಕುರಿತು ನೀಲನಕ್ಷೆಯೊಂದನ್ನೂ ಜಾವಡೇಕರ್ ಸಮ್ಮುಖದಲ್ಲಿ ರಾಜ್ಯ ಘಟಕ ಸಿದ್ಧಪಡಿಸಿದೆ.
ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ನೇಮಕಗೊಂಡ ಬಳಿಕ ಇದೇ ಮೊದಲ ಬಾರಿ ಸೋಮವಾರ ಮಲ್ಲೇಶ್ವರದಲ್ಲಿರುವ ಪಕ್ಷದ ಕಚೇರಿಯಲ್ಲಿ ಕೋರ್ ಕಮಿಟಿ ಮತ್ತು ರಾಜಕೀಯ ವ್ಯವಹಾರಗಳ ಸಮಿತಿಯೊಂದಿಗೆ ಸಮಾಲೋಚನೆ ನಡೆಸಿದ ಪ್ರಕಾಶ್ ಜಾವಡೇಕರ್, ಚುನಾವಣಾ ಸಿದ್ಧತೆಗಳ ಬಗ್ಗೆ ಪ್ರಾಥಮಿಕ ಸುತ್ತಿನ ಸಭೆ ನಡೆಸಿದರು.
ಇತ್ತೀಚೆಗೆ ಬೆಂಗಳೂರಿಗೆ ಆಗಮಿಸಿದ್ದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ನೀಡಿದ್ದ ಸೂಚನೆಯಂತೆ ಯಾವ್ಯಾವ ಹೋರಾಟಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಶ್ನಿಸಿ ಉತ್ತರ ಪಡೆದ ಅವರು, ಹೋರಾಟದಲ್ಲಿ ಇದೇ ವೇಗ ಮುಂದುವರಿಸಿಕೊಳ್ಳುವಂತೆ ಸಲಹೆ ಮಾಡಿದರು.
ಅಕ್ಟೋಬರ್‌ವರೆಗಿನ ನೀನಲಕ್ಷೆ ಸಿದ್ಧ: ರಾಜ್ಯ ಸರ್ಕಾರದ ಭ್ರಷ್ಟಾಚಾರ, ದುರಾಡಳಿತ, ಹಗರಣಗಳು, ಸಚಿವರ ವಿರುದ್ಧದ ಆರೋಪಗಳು ಸೇರಿದಂತೆ ಸರ್ಕಾರದ ವಿರುದ್ಧ ಮುಂದಿನ ದಿನಗಳಲ್ಲಿ ಹೋರಾಟ ನಡೆಸುವ ಬಗ್ಗೆ ರಾಜಕೀಯ ವ್ಯವಹಾರಗಳ ಸಮಿತಿ ಸದಸ್ಯರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ ಜಾವಡೇಕರ್, ಅಕ್ಟೋಬರ್ ಅಂತ್ಯದವರೆಗೆ ನಡೆಸಬೇಕಾದ ಹೋರಾಟಗಳ ಬಗ್ಗೆ ನೀಲನಕ್ಷೆಯೊಂದನ್ನು ಸಿದ್ಧಪಡಿಸಿದ್ದಾರೆ.
ನವೆಂಬರ್ 1ರಿಂದ ಎರಡು ತಿಂಗಳ ಕಾಲ ರಾಜ್ಯಾದ್ಯಂತ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ “ನವಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆ’ ಎಂಬ ರಥಯಾತ್ರೆ ನಡೆಯಲಿದೆ. ಈ ಯಾತ್ರೆ ಮುಗಿಯುವುದರೊಳಗೆ ಜನರಿಯಿಂದ ಕೈಗೊಳ್ಳಬೇಕಾದ ಹೋರಾಟಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಒಟ್ಟಿನಲ್ಲಿ ಫೆಬ್ರವರಿ ಅಂತ್ಯದೊಳಗೆ ರಾಜ್ಯದಲ್ಲಿ ಪ್ರಬಲ ಆಡಳಿತ ವಿರೋಧಿ ಅಲೆ ಸೃಷ್ಟಿಸಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂಬ ವಾತಾವರಣ ಸೃಷ್ಟಿಸಬೇಕು. ಮಾರ್ಚ್ 1ರಿಂದ ಚುನಾವಣಾ ಪ್ರಚಾರ ಸಭೆಗಳನ್ನು ಆರಂಭಿಸಲು ವೇದಿಕೆ ಸಿದ್ಧಪಡಿಸಬೇಕು. ಆ ನಿಟ್ಟಿನಲ್ಲಿ ಪಕ್ಷದ ರಾಜ್ಯ ಘಟಕ ಕೆಲಸ ಮಾಡಬೇಕು ಎಂದು ಜಾವಡೇಕರ್ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಪಕ್ಷ ಸಂಘಟಿಸುವವರಿಗೆ ಮಾತ್ರ ಟಿಕೆಟ್
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವುದು ನಮ್ಮ ಗುರಿ. ಆ ನಿಟ್ಟಿನಲ್ಲಿ ಪಕ್ಷ ಸಂಘಟನೆ ಮಾಡಿ ಗೆಲ್ಲುವ ವಾತಾವರಣ ಸೃಷ್ಟಿಸುವವರಿಗೆ ಮಾತ್ರ ಟಿಕೆಟ್ ನೀಡಲಾಗುವುದು ಎಂದು ಈಗಾಗಲೇ ತೀರ್ಮಾನಿಸಲಾಗಿದೆ. ಹೀಗಾಗಿ ಪಕ್ಷಕ್ಕೆ ಸೇರುವ ಹೊಸಬರಿಗೆ ಟಿಕೆಟ್ ನೀಡುವ ಖಾತರಿ ಕೊಡಬೇಡಿ. ಅವರನ್ನು ಮೊದಲು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಿ. ನಂತರ ಟಿಕೆಟ್ ನೀಡುವ ಬಗ್ಗೆ ತೀರ್ಮಾನಿಸಿ ಎಂದೂ ಸಲಹೆ ಮಾಡಿದರು ಎನ್ನಲಾಗಿದೆ.
ಬೂತ್ ಮಟ್ಟದ ವರದಿ ಕೇಳಿದ ಜಾವಡೇಕರ್
ಬೂತ್ ಮಟ್ಟದಿಂದ ಪಕ್ಷ ಸಂಘಟನೆಗೆ ಕ್ರಮ ಕೈಗೊಳ್ಳಬೇಕು ಎಂದು ಅಮಿತ್ ಶಾ ಅವರ ಸೂಚನೆಯ ಮುಂದುವರಿದ ಭಾಗವಾಗಿ ಪ್ರಕಾಶ್ ಜಾವಡೇಕರ್ ಅವರು ತಮ್ಮ ಮುಂದಿನ ಭೇಟಿ ವೇಳೆ ಬೂತ್ ಮಟ್ಟದ ವರದಿ ನೀಡುವಂತೆ ರಾಜ್ಯ ನಾಯಕರಿಗೆ ಸೂಚಿಸಿದ್ದಾರೆ. ಎಲ್ಲಾ ಬೂತ್‌ಗಳಲ್ಲಿ ಬೂತ್ ಮಟ್ಟದ ಕಮಿಟಿ ರಚಿಸುವುದರ ಜತೆಗೆ ಆ ಸಮಿತಿಗಳು ಪಕ್ಷ ಸಂಘಟನೆ ಮತ್ತು ಸರ್ಕಾರದ ವಿರುದ್ಧ ಜನಜಾಗೃತಿ ಮೂಡಿಸಲು ಕೈಗೊಂಡಿರುವ ಕ್ರಮಗಳ ಮಾಹಿತಿ ಈ ವರದಿಯಲ್ಲಿರಬೇಕು ಎಂದೂ ತಿಳಿಸಿದ್ದಾರೆ ಎಂದು ಹೇಳಲಾಗಿದೆ.
ಕೊನೇ ಕ್ಷಣದಲ್ಲಿ ಆಗಮಿಸಿದ ಪಿಯೂಷ್ ಗೋಯೆಲ್
ಖಾತೆ ಬದಲಾವಣೆಯಾಗಿದ್ದರಿಂದ ರಾಜ್ಯ ಬಿಜೆಪಿ ಸಹ ಚುನಾವಣಾ ಉಸ್ತುವಾರಿಯೂ ಆಗಿರುವ ಕೇಂದ್ರ ಸಚಿವ ಪಿಯೂಷ್ ಗೋಯೆಲ್ ಅವರು ಸೋಮವಾರದ ಸಭೆಗೆ ಬರುವುದಿಲ್ಲ ಎಂದು ಹೇಳಲಾಗಿತ್ತಾದರೂ ಕೊನೇ ಕ್ಷಣದಲ್ಲಿ ಅವರು ಹಾಜರಾಗುವ ಮೂಲಕ ಅಚ್ಚರಿ ಮೂಡಿಸಿದರು.
ಚುನಾವಣಾ ಸಿದ್ಧತೆ ಕುರಿತ ಸಭೆಗೆ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್ ಮಾತ್ರ ಬರುತ್ತಾರೆ. ಪಿಯೂಷ್ ಗೋಯೆಲ್ ಅವರು ಆಗಮಿಸುತ್ತಿಲ್ಲ ಎಂಬ ಸಂದೇಶ ಭಾನುವಾರ ರಾತ್ರಿ ರಾಜ್ಯ ಬಿಜೆಪಿ ಕಚೇರಿಗೆ ಬಂದಿತ್ತು. ಆದರೆ, ಚುನಾವಣಾ ಸಹ ಉಸ್ತುವಾರಿಯಾಗಿ ಇದು ಮೊದಲ ಸಭೆಯಾಗಿದ್ದರಿಂದ ಅದರಿಂದ ತಪ್ಪಿಸಿಕೊಳ್ಳುವುದು ಬೇಡ ಎಂಬ ಕಾರಣಕ್ಕೆ ಗೋಯೆಲ್ ಅವರು ಸೋಮವಾರ ಬೆಳಗ್ಗೆ ಬೆಂಗಳೂರಿಗೆ ಬರುವ ನಿರ್ಧಾರ ಪ್ರಕಟಿಸಿದರು ಎನ್ನಲಾಗಿದೆ.
ಅದರಂತೆ ಸಭೆಗಳಿಗೆ ಹಾಜರಾಗಲು ಹೊರಟ ಕೇಂದ್ರ ಸಚಿವ ಅನಂತ್‌ಕುಮಾರ್ ಅವರೊಂದಿಗೆ ಹೊರಟಾಗಲೇ ಅವರು ಬರುತ್ತಿರುವ ಬಗ್ಗೆ ರಾಜ್ಯ ನಾಯಕರಿಗೆ ಮಾಹಿತಿ ಸಿಕ್ಕಿತು. ತಕ್ಷಣ ವಿಮಾನ ನಿಲ್ದಾಣಕ್ಕೆ ತೆರಳಿದ ನಾಯಕರು ಗೋಯೆಲ್ ಅವರನ್ನು ಸ್ವಾಗತಿಸಿ ಬರಮಾಡಿಕೊಂಡರು. ನಂತರ ಬಿಜೆಪಿ ಕಚೇರಿಗೆ ಆಗಮಿಸಿದ ಪಿಯೂಷ್ ಗೋಯೆಲ್ ಅವರು ಸ್ವಲ್ಪ ಹೊತ್ತು ಮಾತ್ರ ಸಭೆಯಲ್ಲಿದ್ದು ದೆಹಲಿಗೆ ವಾಪಸಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.