ಕಾಂಗ್ರೆಸ್ ಶಾಸಕರಿಗೆ ಹಣದ ಆಮಿಷ ಒಡ್ಡಿಲ್ಲ: ಬಿಎಸ್‌ವೈ
Team Udayavani, Jun 12, 2018, 7:00 AM IST
ಬೆಂಗಳೂರು: ಕಾಂಗ್ರೆಸ್ ಶಾಸಕರಿಗೆ 50 ರಿಂದ 100 ಕೋಟಿ ರೂ. ಆಮಿಷ ಒಡ್ಡಲಾಗಿತ್ತು ಎಂಬ ಆರೋಪಕ್ಕೆ ತೀಕ್ಷ್ಮ ಪ್ರತಿಕ್ರಿಯೆ ನೀಡಿರುವ ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ, ಸಿದ್ದರಾಮಯ್ಯ ಅವರೇ ನೀವು ಮತ್ತು ನಿಮ್ಮ ಪಕ್ಷ ಹೀನಾಯ ಸೋಲು ಅನುಭವಿಸಿದರೂ ನಿಮ್ಮ ದುರಂಹಕಾರ ಅಡಗಿಲ್ಲ ಏಕೆ ಎಂದು ಪ್ರಶ್ನಿಸಿದ್ದಾರೆ.
ಬಾದಾಮಿಯಲ್ಲಿ ಸಿದ್ದರಾಮಯ್ಯ ಮಾಡಿದ್ದ ಆರೋಪಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಅವರು, ನಮ್ಮ ಪಕ್ಷವು ಯಾವುದೇ ಶಾಸಕರಿಗೆ ಹಣದ ಆಮಿಷ ಒಡ್ಡಿಲ್ಲ. ನಿಮ್ಮ ಆತ್ಮ ಸಾಕ್ಷಿ ಮತ್ತು ಜನತೆಯ ಅಭಿಮತಕ್ಕೆ ಅನುಗುಣವಾಗಿ ನನ್ನನ್ನು
ಬೆಂಬಲಿಸಿ ಎಂದು ಕೇಳಿದ್ದೆ ಎಂದು ಹೇಳಿದ್ದಾರೆ.
ಚಾಮುಂಡೇಶ್ವರಿಯಲ್ಲಿ ಸೋಲಿನ ಭೀತಿಯಿಂದಲೇ ಬಾದಾಮಿಗೆ ಹೋಗಿ ಅಲ್ಲಿ 1600 ಮತಗಳ ಪ್ರಯಾಸದ ಗೆಲುವು ಸಾಧಿಸಿದ್ದು ದೊಡ್ಡ ಸಾಧನೆ ಏನಲ್ಲ. ಜೆಡಿಎಸ್‌ನ ದೇವೇಗೌಡ-ಕುಮಾರಸ್ವಾಮಿ ಅಡಿಯಾಳಾಗಿ ಜನತೆ ಅಭಿಮತಕ್ಕೆ ವಿರುದ್ಧ ಸರ್ಕಾರ ರಚಿಸಿದ್ದೀರಿ. ನಿಮ್ಮ ಯಾವ ಸ್ವಾಭಿಮಾನದ ಸಂಕೇತ ಎಂದು ಪ್ರಶ್ನಿಸಿದ್ದಾರೆ.
ಆಮಿಷವೊಡ್ಡಿದ್ದ ಬಿಎಸ್‌ವೈ’
ಬಾದಾಮಿ: “ಯಡಿಯೂರಪ್ಪ ಅವರು ನಮ್ಮ ಜೊತೆ ಬನ್ನಿ ಎಂದು ಶಾಸಕರಿಗೆ 50, 100 ಕೋಟಿ ಕೊಡುತ್ತೇವೆ ಎನ್ನುತ್ತಿದ್ದರು. ಆದರೆ, ಇನ್ನೊಂದೆಡೆ ಕಪ್ಪುಹಣ ಬ್ಯಾನ್ ಮಾಡುತ್ತೇವೆ ಎಂದು ಪ್ರಧಾನಿ ಮೋದಿ ಹೇಳುತ್ತಾರೆ.
ಬೆಂಬಲ ಕೊಟ್ಟ ಶಾಸಕರಿಗೆ ಹಣವನ್ನು ಚೆಕ್ ಮೂಲಕ ಕೊಡುತ್ತಿದ್ದರಾ’ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಎಸ್‌ವೈ ವಿರುದ್ಧ ಹರಿಹಾಯ್ದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಬಿಜೆಪಿಯ ಆಮಿಷಗಳಿಗೆ ನಮ್ಮ ಶಾಸಕರು ಬಲಿಯಾಗಲಿಲ್ಲ. ರಾಜ್ಯದಲ್ಲಿ ನಮ್ಮ ಸೋಲಿಗೆ ಮೋದಿ, ಅಮಿತ್ ಶಾ, ಬಿಎಸ್‌ವೈ ಮಾಡಿದ ಅಪಪ್ರಚಾರ ಕಾರಣ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Illegal immigrants; ಬಂಧಿತ ಪಾಕ್ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?
Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್ ಪದವಿ ಕೊಡಲಿದೆ ವಿಟಿಯು!
MUST WATCH
ಹೊಸ ಸೇರ್ಪಡೆ
ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…
Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್ ಕುಮಾರ್ ರೈ ಭೇಟಿ
Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.