ಕಾಂಗ್ರೆಸ್‌ ಸರ್ಕಾರದ ಹಗರಣ ಸೆ.23ಕ್ಕೆ ಬಯಲು ಮಾಡುವೆ : ಬಿಎಸ್‌ವೈ

Team Udayavani, Sep 16, 2017, 7:30 AM IST

BSY-A-800.jpg

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ಸದಸ್ಯರ ಮತ್ತು ಕಾಂಗ್ರೆಸ್‌ ಸಚಿವ, ಶಾಸಕರ ಭ್ರಷ್ಟಾಚಾರದ ದಾಖಲೆಗಳನ್ನು ಸೆ.23ರಂದು ಬಿಡುಗಡೆ ಮಾಡಲಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೊಸ ಬಾಂಬ್‌ ಸಿಡಿಸಿದರು.

ವಿಧಾನ ಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ವಿಧಾನ ಪರಿಷತ್‌ ಸದಸ್ಯರು ನಡೆಸುತ್ತಿರುವ ಆಹೋರಾತ್ರಿ ಪ್ರತಿಭಟನೆಗೆ ಶುಕ್ರವಾರ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸೇರಿದಂತೆ ಕಾಂಗ್ರೆಸ್‌ ಸಚಿವರು ಮತ್ತು ಶಾಸಕರು ಮಾಡಿರುವ ಎಲ್ಲಾ ಹಗರಣದ ಮಾಹಿತಿ ನಮ್ಮ ಬಳಿ ಇದೆ, ದಾಖಲೆ ಸಮೇತವಾಗಿ ಬಹಿರಂಗಪಡಿಸಲಿದ್ದೇವೆ ಎಂದು ಗುಡುಗಿದರು.

ಭ್ರಷ್ಟಾಚಾರ ರಹಿತ, ಪಾರದರ್ಶಕ ಆಡಳಿತ ನೀಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಗಲು ದರೋಡೆ ಮಾಡಿರುವುದಕ್ಕೆ ಅಧಿಕೃತ ದಾಖಲೆ ಇದೆ. ಕಾಂಗ್ರೆಸ್‌ ಸರ್ಕಾರ ಭ್ರಷ್ಟಾಚಾರಕ್ಕೆ ಹೊರತಾಗಿಲ್ಲ ಎನ್ನುವುದಕ್ಕೆ ಪುಷ್ಠಿ ನೀಡುವಂತೆ ತನಿಖೆ ನಡೆಸಬೇಕಾದ ಸಂಸ್ಥೆಗಳನ್ನೇ ಮುಚ್ಚಿಹಾಕಿದ್ದಾರೆ. ಇನ್ನು ಕೆಲವು ತನಿಖಾ ಸಂಸ್ಥೆಗಳನ್ನು ಮುಖ್ಯಮಂತ್ರಿಯವರು ತಮ್ಮ ಅಧೀನದಲ್ಲಿ ಇಟ್ಟುಕೊಂಡಿದ್ದಾರೆ ಎಂದು ಆರೋಪಿಸಿದರು.

ಸಚಿವ, ಶಾಸಕರ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ದಾಖಲೆ ಇಟ್ಟುಕೊಂಡೇ ಹೇಳಿಕೆ ನೀಡುತ್ತಿದ್ದೇನೆ. ಯಾವುದಕ್ಕೂ ತಲೆಕಡೆಸಿಕೊಳ್ಳುವುದಿಲ್ಲ. ಈ ಸರ್ಕಾರದ ಭ್ರಷ್ಟಾಚಾರವನ್ನು ಬಯಲು ಮಾಡುವುದೇ ನಮ್ಮ ಗುರಿ. ಕಾಂಗ್ರೆಸ್‌ ಸರ್ಕಾರದಲ್ಲಿ ನಡೆದಿರುವ ಹಗರಣಗಳ ಪ್ರಮುಖ ದಾಖಲೆಗಳನ್ನು ಸಂಗ್ರಹಿಸಲಾಗಿದೆ. ಇನ್ನೂ ಕೆಲವು ದಾಖಲೆಗಳನ್ನು ಸಂಗ್ರಹಿಸುವ ಕೆಲಸ ನಡೆಯುತ್ತಿದೆ. ಎಲ್ಲಾ ದಾಖಲೆಗಳನ್ನು ಕ್ರೋಢೀಕರಿಸಿ ಸಾರ್ವಜನಿಕರ ಮುಂದಿಡಲಿದ್ದೇನೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವ ಸಂಪುಟ ಸದಸ್ಯರು ನಡೆಸಿರುವ ಭ್ರಷ್ಟಾಚಾರವನ್ನು ಅಧಿಕಾರಿಗಳ ನೆರವಿನಿಂದ ಮುಚ್ಚಿಹಾಕುತ್ತಿದ್ದಾರೆ. ರಾತ್ರೋರಾತ್ರಿ ಕಡತ ನಾಪತ್ತೆ ಮಾಡಿಸುತ್ತಿದ್ದಾರೆ. ಯಾವುದೇ ಮಾಹಿತಿಯನ್ನು ಬಹಿರಂಗಪಡಿಸದಂತೆ ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ. ಪ್ರಮುಖ ಕಡತಗಳ ನಾಪತ್ತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೇರ ಹೊಣೆ ಎಂದು ದೂರಿದರು.

ಟಾಪ್ ನ್ಯೂಸ್

Rahul Gandhi: ನಾನು ಉದ್ಯಮ ವಿರೋಧಿಯಲ್ಲ, ಏಕಸ್ವಾಮ್ಯದ ವಿರೋಧಿ

Rahul Gandhi: ನಾನು ಉದ್ಯಮ ವಿರೋಧಿಯಲ್ಲ, ಏಕಸ್ವಾಮ್ಯದ ವಿರೋಧಿ

CJI ಜತೆ ಎಐ ಚರ್ಚೆ: ಗಲ್ಲು ಶಿಕ್ಷೆ ಕುರಿತ ಪ್ರಶ್ನೆಗೆ ಎಐ ವಕೀಲನ ಉತ್ತರ!

CJI ಜತೆ ಎಐ ಚರ್ಚೆ: ಗಲ್ಲು ಶಿಕ್ಷೆ ಕುರಿತ ಪ್ರಶ್ನೆಗೆ ಎಐ ವಕೀಲನ ಉತ್ತರ!

Supreme Court: ಟ್ರೈನಿ ವೈದ್ಯೆ ಹತ್ಯೆ ಕೇಸು ಬೇರೆ ರಾಜ್ಯಕ್ಕೆ ವರ್ಗಾಯಿಸಲು ಸುಪ್ರೀಂ ನಕಾರ

Supreme Court: ಟ್ರೈನಿ ವೈದ್ಯೆ ಹತ್ಯೆ ಕೇಸು ಬೇರೆ ರಾಜ್ಯಕ್ಕೆ ವರ್ಗಾಯಿಸಲು ಸುಪ್ರೀಂ ನಕಾರ

Maharashtra: ಕ್ವಿಂಟಲ್‌ ಈರುಳ್ಳಿಗೆ5,400 ರೂ.: 5 ವರ್ಷದಲ್ಲೇ ಗರಿಷ್ಠ!

Maharashtra: ಕ್ವಿಂಟಲ್‌ ಈರುಳ್ಳಿಗೆ5,400 ರೂ.: 5 ವರ್ಷದಲ್ಲೇ ಗರಿಷ್ಠ!

Ranji Trophy: ಶ್ರೇಯಸ್‌ ಅಯ್ಯರ್‌ ದ್ವಿಶತಕ

Ranji Trophy: ಶ್ರೇಯಸ್‌ ಅಯ್ಯರ್‌ ದ್ವಿಶತಕ; ಬೃಹತ್‌ ಮೊತ್ತದತ್ತ ಮುಂಬಯಿ

ಕಿಂಗ್‌, ಕಾರ್ಟಿ ಶತಕ ವಿಂಡೀಸ್‌ಗೆ ಏಕದಿನ ಸರಣಿ

WI vs ENG: ಕಿಂಗ್‌, ಕಾರ್ಟಿ ಶತಕ ವಿಂಡೀಸ್‌ಗೆ ಏಕದಿನ ಸರಣಿ

WPL Auction: ಎಲ್ಲಾ ಆರು ತಂಡಗಳು ಉಳಿಸಿಕೊಂಡ ಆಟಗಾರರ ಪಟ್ಟಿ ಇಲ್ಲಿದೆ

WPL Auction: ಎಲ್ಲಾ ಆರು ತಂಡಗಳು ಉಳಿಸಿಕೊಂಡ ಆಟಗಾರರ ಪಟ್ಟಿ ಇಲ್ಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyank

Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ

Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದರಿ: ಮೋದಿಗೆ ಸಿಎಂ ಪ್ರಶ್ನೆ

Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ

Renukaswamy Case: ಪವಿತ್ರಾ ಗೌಡ ಸೇರಿ ನಾಲ್ವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ಪವಿತ್ರಾ ಗೌಡ ಸೇರಿ ನಾಲ್ವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

dk shivakumar

Waqf Land Issue: ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿಕೆ ಶಿವಕುಮಾರ್

Start sugarcane harvesting from November 8: Minister Sivananda Patil appeals to farmers

Sugarcane: ನ.8ರಿಂದ ಕಬ್ಬು ಕಟಾವು ಆರಂಭಿಸಿ: ರೈತರಿಗೆ ಸಚಿವ ಶಿವಾನಂದ ಪಾಟೀಲ ಮನವಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

14

Mangaluru: ದನ ಕಳವು ಪ್ರಕರಣ; ಆರೋಪಿಗಳ ಬಂಧನ

de

Udupi: ಬೈಲಕೆರೆ; ಅಪರಿಚಿತ ಕೊಳೆತ ಶವ ಪತ್ತೆ

Rahul Gandhi: ನಾನು ಉದ್ಯಮ ವಿರೋಧಿಯಲ್ಲ, ಏಕಸ್ವಾಮ್ಯದ ವಿರೋಧಿ

Rahul Gandhi: ನಾನು ಉದ್ಯಮ ವಿರೋಧಿಯಲ್ಲ, ಏಕಸ್ವಾಮ್ಯದ ವಿರೋಧಿ

CJI ಜತೆ ಎಐ ಚರ್ಚೆ: ಗಲ್ಲು ಶಿಕ್ಷೆ ಕುರಿತ ಪ್ರಶ್ನೆಗೆ ಎಐ ವಕೀಲನ ಉತ್ತರ!

CJI ಜತೆ ಎಐ ಚರ್ಚೆ: ಗಲ್ಲು ಶಿಕ್ಷೆ ಕುರಿತ ಪ್ರಶ್ನೆಗೆ ಎಐ ವಕೀಲನ ಉತ್ತರ!

Supreme Court: ಟ್ರೈನಿ ವೈದ್ಯೆ ಹತ್ಯೆ ಕೇಸು ಬೇರೆ ರಾಜ್ಯಕ್ಕೆ ವರ್ಗಾಯಿಸಲು ಸುಪ್ರೀಂ ನಕಾರ

Supreme Court: ಟ್ರೈನಿ ವೈದ್ಯೆ ಹತ್ಯೆ ಕೇಸು ಬೇರೆ ರಾಜ್ಯಕ್ಕೆ ವರ್ಗಾಯಿಸಲು ಸುಪ್ರೀಂ ನಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.