ಕಾಂಗ್ರೆಸ್‌ ಮುಕ್ತ ಭಾರತಕ್ಕೆ ಈಶಾನ್ಯ ರಾಜ್ಯಗಳ ಜನರ ಸ್ಪಂದನೆ


Team Udayavani, Mar 4, 2018, 6:25 AM IST

180303kpn91.jpg

ಬೆಂಗಳೂರು : ತ್ರಿಪುರಾ, ನಾಗಾಲ್ಯಾಂಡ್‌ ಮತ್ತು ಮೇಘಾಲಯದ ಜನರು ಕಾಂಗ್ರೆಸ್‌ ಮುಕ್ತ ಭಾರತದ ಬಿಜೆಪಿ ಆಶಯಕ್ಕೆ ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಈಶಾನ್ಯ ರಾಜ್ಯಗಳ ಚುನಾವಣಾ ಫ‌ಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಧರ್ಮ ಮತ್ತು ಜಾತಿ ಆಧಾರದಲ್ಲಿ ಒಡೆದು ಆಳುವ ಕಾಂಗ್ರೆಸ್‌ ಮತ್ತು ಕಮ್ಯುನಿಸ್ಟ್‌ ಪಕ್ಷಗಳ ನಕಾರಾತ್ಮಕ ರಾಜಕೀಯವನ್ನು ತ್ರಿಪುರ, ಮೇಘಾಲಯ ಹಾಗೂ ನಾಗಾಲ್ಯಾಂಡ್‌ ಜನರು ಸ್ಪಷ್ಟವಾಗಿ ತಿರಸ್ಕರಿಸಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಪರ ಆಡಳಿತವನ್ನು ಬೆಂಬಲಿಸಿದ್ದಾರೆ. ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲೂ ಮತದಾರರು ಇದೇ ರೀತಿಯ ಫ‌ಲಿತಾಂಶಕ್ಕೆ ಕಾರಣೀಭೂತರಾಗಲಿದ್ದಾರೆ ಎಂದರು.

ಈಶಾನ್ಯ ರಾಜ್ಯಗಳ ಫ‌ಲಿತಾಂಶದ ನಂತರ ಕರ್ನಾಟಕದಲ್ಲಿ ಬಿಜೆಪಿಯು 150ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸಿ ಅಧಿಕಾರಕ್ಕೆ ಬರುವುದು ನಿಶ್ಚಿತ. ಈ ಫ‌ಲಿತಾಂಶ ರಾಜ್ಯದ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಇನ್ನಷ್ಟು ಹುರುಪಿನಿಂದ ಕಾರ್ಯನಿರ್ವಹಿಸಲು ಪ್ರೇರಣೆಯಾಗಿದೆ. ಭ್ರಷ್ಟ, ಅದಕ್ಷ ಮತ್ತು ಸಂವೇದನಾಶೀಲ ರಹಿತ ಆಡಳಿತ ನೀಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವನ್ನು ಕಿತ್ತೂಗೆಯಲು ದಿನಗಣನೆ ಆರಂಭವಾಗಿದೆ ಎಂದು ಹೇಳಿದರು.

ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿಗೆ ಬಾರೀ ಯಶಸ್ಸು ದೊರೆಯಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರ ಸಮರ್ಥ ನಾಯಕತ್ವವೇ ಕಾರಣವಾಗಿದೆ. ಕರ್ನಾಟಕದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಈ ಇಬ್ಬರೂ ನಾಯಕರ ಮಾರ್ಗದರ್ಶನ ನಮಗೆ ದೊರೆಯುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದರು.

ಎಡಪಕ್ಷಕ್ಕೆ ತ್ರಿಪುರದಲ್ಲಿ ಏನೂ ಉಳಿದಿಲ್ಲ. ತ್ರಿಪುರ ಸರ್ಕಾರದ ತಪ್ಪು ನಿರ್ಧಾರ ಮತ್ತು ದುರಾಡಳಿತಕ್ಕೆ ವಿರುದ್ಧವಾಗಿ ಅಲ್ಲಿನ ಜನರು ಅಭಿವೃದ್ಧಿಯನ್ನು ಆಯ್ಕೆಮಾಡಿಕೊಂಡಿದ್ದಾರೆ. ಈಶಾನ್ಯ ರಾಜ್ಯಗಳ ಜನತೆಗೆ ಅಭಿನಂದನೆಗಳು.
– ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ

ಟಾಪ್ ನ್ಯೂಸ್

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Uppinangady: ಬಸ್‌ ನಿಲ್ದಾಣದಲ್ಲಿ ಕಳವು

Uppinangady: ಬಸ್‌ ನಿಲ್ದಾಣದಲ್ಲಿ ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

satish jarakiholi

60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

siddanna-2

HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ

ಸಚಿವ ಸತೀಶ್ ಜಾರಕಿಹೊಳಿ

Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-shiv

ಪಟ್ನಾದಲ್ಲಿ ಸುಮಾರು 500 ವರ್ಷಗಳ ಹಿಂದಿನ ದೇಗುಲ ಪತ್ತೆ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-devvvi

ಕಂದಹಾರ್‌ ಹೈಜಾಕ್‌ ವೇಳೆಯ ಪೈಲಟ್‌ ದೇವಿ ಶರಣ್‌ ನಿವೃತ್ತಿ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.