ಹೊಸ ಬಜೆಟ್‌ ಖಚಿತ; ಸಿಎಂ ದೃಢ ನಿರ್ಧಾರ


Team Udayavani, Jun 17, 2018, 6:00 AM IST

new-budget.jpg

ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಹೊಸ ಬಜೆಟ್‌ ಮಂಡಿಸುವುದು ಹಾಗೂ ರೈತರ ಸಾಲ ಮನ್ನಾ ವಿಚಾರದಲ್ಲಿ ದೃಢ ನಿರ್ಧಾರಕ್ಕೆ ಬಂದಿರುವ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ರಾಜ್ಯ ಕಾಂಗ್ರೆಸ್‌ ನಾಯಕರ ಭಿನ್ನ ರಾಗ ಹಿನ್ನೆಲೆಯಲ್ಲಿ ನೇರವಾಗಿ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಒಪ್ಪಿಗೆ ಪಡೆಯಲು ಮುಂದಾಗಿದ್ದಾರೆ.

ಈ ಹಿಂದೆ ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮಂಡಿಸಿದ್ದು ಇದೀಗ ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್‌ ಪಕ್ಷವೂ ಭಾಗಿಯಾಗಿರುವುದರಿಂದ ಮತ್ತೂಂದು ಬಜೆಟ್‌ ಮಂಡಿಸುವುದು ಬೇಡ. ಆರ್ಥಿಕ ಸ್ಥಿತಿಗತಿ ನೋಡಿಕೊಂಡು ಸಾಲ ಮನ್ನಾ ತೀರ್ಮಾನ ಕೈಗೊಳ್ಳುವುದು ಸೂಕ್ತ ಎಂಬುದು ರಾಜ್ಯ ಕಾಂಗ್ರೆಸ್‌ ನಾಯಕರ ಅದರಲ್ಲೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿಲುವು. ಇತ್ತೀಚೆಗೆ ನಡೆದ ಸಮನ್ವಯ ಸಮಿತಿಯಲ್ಲೂ ಇದೇ ಪ್ರತಿಪಾದನೆ ಮಾಡಿದ್ದಾರೆ.

ಆದರೆ, ನನ್ನ ನೇತೃತ್ವದ ಸರ್ಕಾರದಲ್ಲಿ ಬಜೆಟ್‌ ಮಂಡಿಸದಿದ್ದರೆ ಅದಕ್ಕೆ ಅರ್ಥವೇ ಇರುವುದಿಲ್ಲ. ಬದಲಾಗಿ ಸಾಲ ಮನ್ನಾ ಸೇರಿದಂತೆ ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟಿರುವ ಭರವಸೆಗಳನ್ನು ಬಜೆಟ್‌ನಲ್ಲೇ ಘೋಷಿಸಬೇಕು ಎಂದು ಎಂಬುದು ಎಚ್‌.ಡಿ.ಕುಮಾರಸ್ವಾಮಿ ವಾದ.

ಸಮ್ಮಿಶ್ರ ಸರ್ಕಾರದ ಆಯುಷ್ಯ ಒಂದು ವರ್ಷ ಎಂಬ ಮಾತುಗಳು ಇವೆ. ಲೋಕಸಭೆ ಚುನಾವಣೆ ನಂತರ ಏನಾಗುವುದೋ ಗೊತ್ತಿಲ್ಲ.  ಡಿಸೆಂಬರ್‌ಗೆ ಲೋಕಸಭೆ ಚುನಾವಣೆ ನಡೆಯುವ ಸಾಧ್ಯತೆಯೂ ಇಲ್ಲದಿಲ್ಲ. ಮುಖ್ಯಮಂತ್ರಿಯಾಗಿ ಹಣಕಾಸು ಸಚಿವನೂ ನಾನೇ ಆಗಿದ್ದೇನೆ. ಹಿಂದೆ ಮುಖ್ಯಮಂತ್ರಿಯಾಗಿದ್ದಾಗಲೂ ನಾನು ಬಜೆಟ್‌ ಮಂಡಿಸಿರಲಿಲ್ಲ. ಹೀಗಾಗಿ,  ಈ ಬಾರಿ ಬಜೆಟ್‌ ಮಂಡಿಸಲೇಬೇಕು. ಸಾಲ ಮನ್ನಾ ಸೇರಿ ಜೆಡಿಎಸ್‌ನ ಪ್ರಣಾಳಿಕೆಯ ಭರವಸೆಗಳು ಬಜೆಟ್‌ನಲ್ಲಿ ದಾಖಲಾಗಬೇಕು ಎಂಬುದು ಕುಮಾರಸ್ವಾಮಿಯವರ ಬಯಕೆ ಎಂದು ಹೇಳಲಾಗಿದೆ.

ಆದರೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೂಂದು ಬಜೆಟ್‌ನ ಅಗತ್ಯವಿಲ್ಲ ಎಂದು ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಅವರಿಗೆ ಹೇಳಿದ್ದರು. ಇದನ್ನು ಸಮನ್ವಯ ಸಮಿತಿ ಸಭೆಯಲ್ಲೂ ಪ್ರಸ್ತಾಪಿಸಲಾಗಿತ್ತು. ಮತ್ತೂಂದೆಡೆ ಸಿದ್ದರಾಮಯ್ಯ ಅವರು ಬಹಿರಂಗವಾಗಿಯೂ ಅದನ್ನು ವ್ಯಕ್ತಪಡಿಸಿದ್ದಾರೆ.

ಹೀಗಾಗಿ, ರಾಜ್ಯದ ಕಾಂಗ್ರೆಸ್‌ ನಾಯಕರು ಬಜೆಟ್‌ ಮಂಡನೆಗೆ ತಕರಾರು ತೆಗೆದದರೆ ನೇರವಾಗಿ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿಯವರ ಜತೆಯೇ ಮಾತನಾಡಿ ಬಜೆಟ್‌ ಮಂಡನೆಗೆ ಒಪ್ಪಿಗೆ ಪಡೆಯಲು ನಿರ್ಧರಿಸಿದ್ದಾರೆ. ಇದಕ್ಕೆ ಪೂರ್ವಭಾವಿಯಾಗಿ ಹಿರಿಯ ನಾಯಕ ಗುಲಾಂ ನಬಿ ಆಜಾದ್‌ ಅವರ ಜತೆ ಮಾತನಾಡಿದ್ದಾರೆ ಎಂದು ಹೇಳಲಾಗಿದೆ.

ಸದ್ಯಕ್ಕೆ ಲೋಕಸಭೆ ಚುನಾವಣೆವರೆಗೂ ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳುವ ಅನಿವಾರ್ಯತೆಯಲ್ಲಿರುವ ಹಾಗೂ ಜೆಡಿಎಸ್‌ ಜತೆಗಿನ ಮೈತ್ರಿಯಿಂದಾಗಿ ರಾಷ್ಟ್ರೀಯ ಮಟ್ಟದಲ್ಲಿ ಎಸ್‌ಪಿ, ಬಿಎಸ್‌ಪಿ, ಟಿಟಿಡಿ, ಟಿಆರ್‌ಎಸ್‌, ಟಿಎಂಸಿ, ಬಿಜೆಡಿ, ಆರ್‌ಜೆಡಿ, ಎಡಪಕ್ಷಗಳಿಗೆ ಹತ್ತಿರವಾಗಿರುವ ಕಾಂಗ್ರೆಸ್‌ ಜೆಡಿಎಸ್‌ನ ಯಾವುದೇ ಮಾತಿಗೂ ನಿರಾಕರಿಸುವ ಸಾಧ್ಯತೆಯೂ ಇಲ್ಲ.

ಅಷ್ಟೇ ಅಲ್ಲದೆ ಸಚಿವ ಸ್ಥಾನ ವಂಚಿತ ಕಾಂಗ್ರೆಸ್‌ ನಾಯಕರು ಅಸಮಾಧಾನಗೊಂಡಾಗ ಖುದ್ದು ರಾಹುಲ್‌ಗಾಂಧಿ ದೂರವಾಣಿ ಕರೆ ಮಾಡಿ ನೀವೂ ಅತೃಪ್ತಿ ನಿವಾರಣೆಗೆ ನಿಮ್ಮದೇ ಆದ ಪ್ರಯತ್ನ ಮಾಡಿ ಎಂದೂ ಹೇಳಿದ್ದರು. ಅಲ್ಲಿಂದ ಕರೆ ಬಂದ ನಂತರವೇ ಕುಮಾರಸ್ವಾಮಿ ಎಂ.ಬಿ.ಪಾಟೀಲ್‌ ಅವರ ನಿವಾಸಕ್ಕೆ ಹೋಗಿದ್ದು. ಸತೀಶ್‌ ಜಾರಕಿಹೊಳಿ ಎಚ್‌.ಡಿ.ಕುಮಾರಸ್ವಾಮಿ ನಿವಾಸಕ್ಕೂ ಬಂದಿದ್ದು. ಅಷ್ಟರ ಮಟ್ಟಿಗೆ ಕುಮಾರಸ್ವಾಮಿ-ರಾಹುಲ್‌ಗಾಂಧಿ ಸ್ನೇಹ ಚಿಗುರೊಡೆದಿದೆ.

ಈ ಹಿನ್ನೆಲೆಯಲ್ಲಿ ಸಮ್ಮಿಶ್ರ ಸರ್ಕಾರದ ನಾಯಕತ್ವ ವಹಿಸಿರುವ ತಮಗೆ ಹೊಸ ಬಜೆಟ್‌ ಮಂಡಿಸಲು ರಾಜ್ಯ ನಾಯಕರು ತಕರಾರು ತೆಗೆದರೆ ನೇರವಾಗಿ ರಾಹುಲ್‌ಗಾಂಧಿ ಜತೆಯೇ ಮಾತನಾಡಿ ಬಜೆಟ್‌ ಮಂಡಿಸಲು ಮುಂದಾಗಿದ್ದಾರೆ. ಯಾವುದೇ ಕಾರಣಕ್ಕೂ ಬಜೆಟ್‌ ಮಂಡಿಸುವ ಪ್ರಸ್ತಾಪ ಕೈ ಬಿಡಲು ಸಾಧ್ಯವಿಲ್ಲ. ನೀವು ಸಿದ್ಧತೆ ಮಾಡಿಕೊಳ್ಳಿ ಎಂದು ಹಣಕಾಸು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಂಪನ್ಮೂಲ ಕ್ರೂಢೀಕರಣ ಸಂಬಂಧ ಸೂಕ್ತ ಕಾರ್ಯಯೋಜನೆ ರೂಪಿಸುವಂತೆ  ಆರ್ಥಿಕ ಸಲಹೆಗಾರ ನಿವೃತ್ತ ಐಎಎಸ್‌ ಅಧಿಕಾರಿ ಡಾ.ಎಸ್‌.ಸುಬ್ರಹ್ಮಣ್ಯ ಅವರಿಗೂ ತಿಳಿಸಿದ್ದಾರೆ ಎಂದು ಹೇಳಲಾಗಿದೆ.

ಸಾಲ ಮನ್ನಾಗೆ 53 ಸಾವಿರ ಕೋಟಿ ರೂ. ಬೇಕು ಎಂಬ ಅಭಿಪ್ರಾಯ ಮೊದಲು ಇತ್ತಾದರೂ ಅಂಕಿ-ಅಂಶ, ಕೆಲವೊಂದು ಷರತ್ತು ಹಿನ್ನೆಲೆಯಲ್ಲಿ 20 ಸಾವಿರ ಕೋಟಿ ರೂ.ವರೆಗೆ ಹಾಗೂ ಉಳಿದ ಯೋಜನೆಗಳಿಗೆ 10 ರಿಂದ 15 ಸಾವಿರ ಕೋಟಿ ರೂ.ವರೆಗೆ ಹೊರೆ ಬೀಳಬಹುದು.  ಹೀಗಾಗಿ,  ಈಗಿನ ಬಜೆಟ್‌ನ ಗಾತ್ರದಲ್ಲಿ 25 ಸಾವಿರ ಕೋಟಿ ರೂ.ವರೆಗೆ ಹೆಚ್ಚಳವಾಗಬಹುದು. ಅದರಲ್ಲೂ ಬೇರೆ ಬೇರೆ ಇಲಾಖೆಗಳ ಅನಗತ್ಯ ಹಾಗೂ ಐದು ವರ್ಷಗಳಲ್ಲಿ ಜಾರಿ ಮಾಡಲು ಸಾಧ್ಯವಾಗದೇ ಇರುವ ಕಾರ್ಯಕ್ರಮಗಳನ್ನು ಕೈ ಬಿಟ್ಟರೆ ಮತ್ತೂ ಬಜೆಟ್‌ ಗಾತ್ರ ಕಡಿಮೆಯಾಗುತ್ತದೆ ಎಂದು ಆರ್ಥಿಕ ಸಲಹೆಗಾರರು ಕುಮಾರಸ್ವಾಮಿಯವರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಹೀಗಾಗಿ, ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿಯವರಿಗೆ ಈ ಎಲ್ಲ ಅಂಶಗಳನ್ನು ವಿವರಿಸಿ ಅಲ್ಲಿಂದಲೇ ಒಪ್ಪಿಗೆ ಪಡೆದು ರಾಜ್ಯ ನಾಯಕರನ್ನು ಸುಮ್ಮನಾಗಿಸಲು ನಿರ್ಧರಿಸಿದ್ದಾರೆ. ಈ ಮೂಲಕ ರಾಜ್ಯದ ಕಾಂಗ್ರೆಸ್‌ ನಾಯಕರಿಗೂ ನಾನು ನೇರವಾಗಿ ಹೈಕಮಾಂಡ್‌ ಜತೆ ಮಾತನಾಡಬಲ್ಲೆ ಎಂಬ ಸಂದೇಶ ರವಾನಿಸುವುದು ಇದರ ಹಿಂದಿದೆ ಎಂದು ಹೇಳಲಾಗಿದೆ.

ಐದು ಯೋಜನೆಗೆ ಓಕೆ
ಕಾಂಗ್ರೆಸ್‌ ಸರ್ಕಾರದ ಅನ್ನಭಾಗ್ಯ, ಕ್ಷೀರಭಾಗ್ಯ, ಕ್ಷೀರಧಾರೆ, ವಿದ್ಯಾಸಿರಿ, ಇಂದಿರಾ ಕ್ಯಾಂಟೀನ್‌ ಯೋಜನೆ ಮುಂದುವರಿಸಲು ಕುಮಾರಸ್ವಾಮಿ ಸಹ ಒಪ್ಪಿಸಿದ್ದಾರೆ. ಬಸ್‌ ಪಾಸ್‌ ವಿಚಾರದಲ್ಲಿ ಯೋಚಿಸಬೇಕು ಎಂದು ಹೇಳಿದ್ದಾರೆ. ಜೆಡಿಎಸ್‌ನ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಸಾಲ ಮನ್ನಾ, ಗರ್ಭಿಣಿಯರು, ಹಿರಿಯ ನಾಗರಿಕರು ಹಾಗೂ ಬಡ ಮಹಿಳೆಯರಿಗೆ ಮಾಸಾಶನ, ಯುವಕರಿಗೆ  ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಹೊಸ ನೀತಿ, ಆಟೋ ಚಾಲಕರು, ಗಾರ್ಮೆಂಟ್ಸ್‌ ನೌಕರರು, ಬೀದಿ ಬದಿ ವ್ಯಾಪಾರಿಗಳಿಗೆ ಅಗ್ಗದ ದರದಲ್ಲಿ ವಸತಿ ಯೋಜನೆ ರೂಪಿಸುವುದು ಬಜೆಟ್‌ನಲ್ಲಿ ಸೇರಿಸಬೇಕು ಎಂಬುದು ಅವರ ಉದ್ದೇಶ.

ಜುಲೈ ಮೊದಲ ವಾರ ಅಧಿವೇಶನ ನಡೆಯಲಿದ್ದು, ಹೊಸ ಬಜೆಟ್‌ ಮಂಡಿಸಲಿದ್ದೇನೆ. ಈಗಾಗಲೇ ಸಿದ್ಧತೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಅಲ್ಲದೆ, ನಾನೂ ಇಲಾಖಾವಾರು ಅಧಿಕಾರಿಗಳ ಸಭೆಯನ್ನು ನಡೆಸಲಿದ್ದೇನೆ.
– ಎಚ್‌.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ

ಮತ್ತೂಂದು ಬಜೆಟ್‌ ಅನಗತ್ಯ: ಸಿದ್ದರಾಮಯ್ಯ  
ಬೆಂಗಳೂರು:ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತೂಂದು ಪೂರ್ಣ ಪ್ರಮಾಣದ ಬಜೆಟ್‌ ಮಂಡಿಸುವ ಅಗತ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ. ಹಿಂದಿನ ಕಾಂಗ್ರೆಸ್‌ ಸರ್ಕಾರದಲ್ಲಿ ಮಂಡಿಸಿದ ಬಜೆಟ್‌ನಲ್ಲಿನ ಎಲ್ಲ ಘೋಷಣೆಗಳೂ ಮುಂದುವರೆಯುತ್ತವೆ. ಕುಮಾರಸ್ವಾಮಿ ಹೊಸದಾಗಿ ಯಾವುದಾದರೂ ಕಾರ್ಯಕ್ರಮ ಸೇರಿಸುವುದಾದರೆ ಪೂರಕ ಅಂದಾಜುಗಳಲ್ಲಿ ಸೇರಿಸಬಹುದು. ಜತೆಗೆ ಎರಡೂ ಪಕ್ಷಗಳ ಪ್ರಣಾಳಿಕೆಗಳನ್ನು ಸೇರಿಸಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ರೂಪಿಸಲಾಗುತ್ತಿದೆ. ಅದಕ್ಕಾಗಿ ಸಮಿತಿಯೂ ರಚನೆಯಾಗಿದೆ. ಹೀಗಾಗಿ, ಮತ್ತೂಂದು ಬಜೆಟ್‌ನ ಅಗತ್ಯ ಬರುವುದಿಲ್ಲ ಎಂದು ತಿಳಿಸಿದರು.

ಟಾಪ್ ನ್ಯೂಸ್

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.