ಸಿದ್ದು ಮೇಲೆ “ಕೈ’ ಶಾಸಕರಿಗೇ ವಿಶ್ವಾಸವಿಲ್ಲ


Team Udayavani, Nov 26, 2019, 3:07 AM IST

siddu-mele

ಬೆಂಗಳೂರು: ಕಾಂಗ್ರೆಸ್‌ ಹೈಕಮಾಂಡ್‌ ಮೇಲೆ ಒತ್ತಡ ಹೇರಿ, ಬ್ಲಾಕ್‌ಮೇಲ್‌ ಮಾಡಿ ಸಿದ್ದರಾಮಯ್ಯ, ವಿಧಾನಸಭೆ ಪ್ರತಿಪಕ್ಷ ನಾಯಕರಾಗಿದ್ದಾರೆ. ಕಾಂಗ್ರೆಸ್‌ನಲ್ಲಿ ಶಾಸಕಾಂಗ ಪಕ್ಷ ನಾಯಕನ ಆಯ್ಕೆಗೆ ರಹಸ್ಯ ಮತದಾನ ನಡೆದರೆ ಸಿದ್ದರಾಮಯ್ಯಗೆ ಶಾಸಕರು ಮತ ಹಾಕುವುದಿಲ್ಲ. ಬೇಕಾದರೆ ಶಾಸಕರಿಂದ ರಹಸ್ಯ ಮತದಾನ ನಡೆಯಲಿ ಎಂದು ಸಂಸದೆ ಶೋಭಾ ಕರಂದ್ಲಾಜೆ ಸವಾಲು ಹಾಕಿದರು.

ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಸೋಮ ವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್‌ ಶಾಸಕರೇ ಸಿದ್ದರಾಮಯ್ಯರನ್ನು ನಾಯಕ ಎಂದು ಒಪ್ಪಿಕೊಂಡಿಲ್ಲ. ಹೀಗಾಗಿ ಅವರು ಏಕಾಂಗಿ ಯಾಗಿ ಪ್ರಚಾರ ಮಾಡುತ್ತಿದ್ದಾರೆ. ಏಕೋಪಾ ಧ್ಯಾಯ ಶಾಲೆ ಮುಖ್ಯೋಪಾಧ್ಯಾಯರಂತಿದ್ದು, ಯಾವ ನಾಯಕರು ಅವರೊಂದಿಗಿಲ್ಲ. ಸರ್ಕಾರದ ಪತನಕ್ಕೆ ಕಾರಣರಾದ ಅವರು, ಕಾಂಗ್ರೆಸ್‌ನ ಪತನ ಕ್ಕೂ ಕಾರಣರಾಗಲಿದ್ದಾರೆ ಎಂದು ಹೇಳಿದರು.

ಕಳೆದ 2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನ ಗೆದ್ದರೂ ಅಧಿಕಾರ ಹಿಡಿಯಲು ಸಾಧ್ಯವಾಗಲಿಲ್ಲ. ಹೀಗಾಗಿ ಮೂರನೇ ಸ್ಥಾನದಲ್ಲಿದ್ದ ಜೆಡಿಎಸ್‌ ಮೂರನೇ ಬಾರಿಗೆ ಸರ್ಕಾರ ರಚಿಸಿತು. ಮೂರನೇ ಬಾರಿಯೂ ಆಡಳಿತ ನಡೆಸುವಲ್ಲಿ ಜೆಡಿಎಸ್‌ ವಿಫ‌ಲವಾಯಿತು. ಮೈತ್ರಿ ಸರ್ಕಾರ ಉಳಿಸಲು ಈಗಲ್ಟನ್‌ ರೆಸಾರ್ಟ್‌ನಲ್ಲಿ ಇದೇ ಭೈರತಿ ಬಸವರಾಜು, ಎಸ್‌.ಸೋಮಶೇಖರ್‌, ಎಂಟಿಬಿ ನಾಗರಾಜ್‌ ರಕ್ಷಕರಾಗಿದ್ದು.

ಆದರೆ ಅಧಿಕಾರ ಸಿಕ್ಕಾಗ ಕುಟುಂಬಕ್ಕೆ ಸೀಮಿತವಾಗುವ ಜೆಡಿಎಸ್‌ ನಡೆಯಿಂದ ಬೇಸರಗೊಂಡು ರಾಜೀನಾಮೆ ನೀಡಿದರು. ಆದರೆ ಇದೀಗ ಎಚ್‌ಡಿಕೆ, ಬಿಜೆಪಿ ಅಭ್ಯರ್ಥಿಗಳ ಬಗ್ಗೆ ವಿನಾಕಾರಣ ಆರೋಪಿಸುತ್ತಿದ್ದಾರೆ. ಇನ್ನಾದರೂ ವೈಯಕ್ತಿಕ ಟೀಕೆ-ಟಿಪ್ಪಣಿ ಮಾಡುವುದನ್ನು ಬಿಟ್ಟು ಅವರು ಅಭಿವೃದ್ಧಿ ಕಾರ್ಯ, ಕೊಡುಗೆಗಳ ಆಧಾರದಲ್ಲಿ ಪ್ರಚಾರ ನಡೆಸಲಿ ಎಂದು ತಿಳಿಸಿದರು.

ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ಸೇರಿದಾಗಿನಿಂದ ತಾವೊಬ್ಬ ಹಿಂದುಳಿದ ವರ್ಗಗಳ ಚಾಂಪಿಯನ್‌ ಎಂಬಂತೆ ವರ್ತಿಸುತ್ತಿದ್ದಾರೆ. ಅವರನ್ನು ಪಕ್ಷಕ್ಕೆ ಕರೆತಂದ ಎಚ್‌.ವಿಶ್ವನಾಥ್‌ ಅವರು ಪಕ್ಷ ಬಿಟ್ಟು ಹೋಗುವಂತೆ ಮಾಡಿದರು. ಮತ್ತೂಬ್ಬ ಹಿಂದುಳಿದ ವರ್ಗದ ನಾಯಕ ಎ. ಕೃಷ್ಣಪ್ಪ ಅವರು ಪಕ್ಷ ಬಿಡುವಂತೆ ಮಾಡಿದರು. ಇದೀಗ ವಾಲ್ಮೀಕಿ ಸಮುದಾಯದ ಬಿ.ಶ್ರೀರಾಮುಲುರನ್ನು ಸಿದ್ದರಾಮಯ್ಯ ಟಾರ್ಗೆಟ್‌ ಮಾಡುತ್ತಿದ್ದಾರೆ. ಶ್ರೀರಾಮುಲು ಅವರ ಜನಪ್ರಿಯತೆ ಸಹಿಸದೆ ಹಗುರವಾಗಿ ಮಾತನಾಡುತ್ತಿದ್ದಾರೆ ಎಂದು ಹೇಳಿದರು.

ಹಿಂದುಳಿದ ವರ್ಗದ ನಾಯಕರು, ಪರಿಶಿಷ್ಟ ಜಾತಿ, ಪಂಗಡದ ನಾಯಕರನ್ನು ಅವಮಾನ ಮಾಡುವುದೇ ಸಿದ್ದರಾಮಯ್ಯ ಜಾಯಮಾನ. ಕಾಂಗ್ರೆಸ್‌ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ್‌, ಬಿ.ಕೆ.ಹರಿಪ್ರಸಾದ್‌, ವೀರಪ್ಪ ಮೊಯಿಲಿ, ಕೆ.ಎಚ್‌.ಮುನಿಯಪ್ಪ, ಎಚ್‌.ಕೆ.ಪಾಟೀಲ್‌ ಎಲ್ಲಿದ್ದಾರೆ. ಸಿದ್ದರಾಮಯ್ಯ ಅವರು ಮತ್ತೆ ಹಿಂದುಳಿದ ವರ್ಗದವರ ದಾರಿ ತಪ್ಪಿಸಲು ನೋಡುತ್ತಿದ್ದು, ಈ ಬಾರಿ ಸಾಧ್ಯವಿಲ್ಲ ಎಂದು ತಿಳಿಸಿದರು. ರಾಜ್ಯ ಬಿಜೆಪಿ ಮಾಧ್ಯಮ ಸಂಚಾಲಕ ಎ.ಎಚ್‌.ಆನಂದ್‌, ಸಹ ವಕ್ತಾರ ಅನ್ವರ್‌ಮಾಣಿಪ್ಪಾಡಿ ಉಪಸ್ಥಿತರಿದ್ದರು.

ಸೇಠ್ ಕೊಲೆ ಯತ್ನಕ್ಕೆ ಸಿದ್ದರಾಮಯ್ಯ ಕಾರಣ-ಆರೋಪ: ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ನಡೆಯಲು ಸಿದ್ದರಾಮಯ್ಯ ಅವರೇ ಕಾರಣ. ಕೆಎಫ್ಡಿ, ಎಸ್‌ಡಿಪಿಐ, ಪಿಎಫ್ಐನ ಕೊಲೆ ಆರೋಪಿಗಳ ಪ್ರಕರಣಗಳನ್ನು ಸಿದ್ದರಾಮಯ್ಯ ಹಿಂಪಡೆದಿದ್ದರು. ಟಿಪ್ಪು ಜಯಂತಿ ಆಚರಿಸಿ ಎಂದು ಮುಸಲ್ಮಾನರು ಕೇಳದಿದ್ದರೂ ಸಂಘರ್ಷ ಸೃಷ್ಟಿಸಲು, ಕೇವಲ ಮತ ಬ್ಯಾಂಕ್‌ ಲಾಭಕ್ಕಾಗಿ ಸಿದ್ದರಾಮಯ್ಯ ಟಿಪ್ಪು ಜಯಂತಿ ಆಚರಣೆಗೆ ಅವಕಾಶ ನೀಡಿದರು. ಸಮಾಜದಲ್ಲಿ ಭಯ, ಗೊಂದಲ ಸೃಷ್ಟಿಸುವ ಕೆಎಫ್ಡಿ, ಎಸ್‌ಡಿಪಿಐ, ಪಿಡಿಎಫ್ನಂತಹ ಸಂಘಟನೆಗಳು° ನಿಷೇಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಶೋಭಾ ಕರಂದ್ಲಾಜೆ ಹೇಳಿದರು.

ಶರತ್‌ ಸ್ಪರ್ಧೆ ಹಿಂದೆ ಯಾರ ಕುಮ್ಮಕ್ಕಿದೆ ಗೊತ್ತಿಲ್ಲ-ಸಂಸದೆ: ಬಿ.ಎನ್‌.ಬಚ್ಚೇಗೌಡ ಬಿಜೆಪಿಗೆ ಸೇರಿದಾಗ ಟಿಕೆಟ್‌ ನೀಡಿ ಸಚಿವರನ್ನಾಗಿ ಮಾಡಲಾಗಿತ್ತು. ನಂತರ ಲೋಕಸಭೆಗೆ ಟಿಕೆಟ್‌ ನೀಡಿ ಸಂಸದರನ್ನಾಗಿ ಮಾಡಲಾಗಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಪರಾಭವಗೊಂಡ ಶರತ್‌ ಬಚ್ಚೇಗೌಡರಿಗೆ ಪ್ರಮುಖ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಲಾಗಿತ್ತು. ಬಚ್ಚೇ ಗೌಡರ ಕುಟುಂಬಕ್ಕೆ ಪಕ್ಷ ಅನ್ಯಾಯ ಮಾಡಿಲ್ಲ. ಹಾಗಿದ್ದರೂ ಯಾರ ಕುಮ್ಮಕ್ಕಿನಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ದ್ದಾರೆ ಎಂಬುದು ಗೊತ್ತಿಲ್ಲ ಎಂದು ಹೇಳಿದರು.

2014ರಲ್ಲಿ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಲ್ಲಿ ಬಚ್ಚೇಗೌಡರನ್ನು ಸೋಲಿಸ ಲೆಂದೇ ಎಚ್‌ಡಿಕೆ ಚುನಾವಣೆಗೆ ಧುಮುಕಿದ್ದರು. ಇದೀಗ ಶರತ್‌ ಬಚ್ಚೇಗೌಡ ಅವರಿಗೆ ಜೆಡಿಎಸ್‌ ಬೆಂಬಲ ಸೂಚಿಸಿದೆ. ಜೆಡಿಎಸ್‌ಗೆ ಅಭ್ಯರ್ಥಿ ಸಿಕ್ಕಿಲ್ಲ ಎಂದು ಬೆಂಬಲ ನೀಡಿದ್ದಾರೋ ಅಥವಾ ಕಾಂಗ್ರೆಸ್‌, ಜೆಡಿಎಸ್‌ನಲ್ಲಿ ಒಳ ಒಪ್ಪಂದ ನಡೆಯುತ್ತಿದೆಯೋ ಗೊತ್ತಿಲ್ಲ. ಅವರು ಬೆಂಬಲ ನೀಡಿರುವುದು ಉಳಿಸಲೋ, ಮುಗಿಸಲೋ ಎಂಬುದು ಗೊತ್ತಿಲ್ಲ. ಎಲ್ಲ ಬೆಳವಣಿಗೆಯನ್ನೂ ಹೈಕಮಾಂಡ್‌ ಗಮನಿಸುತ್ತಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.