ಡಿ.ಕೆ.ಶಿವಕುಮಾರ್‌ಗೆ ತಾತ್ಕಾಲಿಕ ರಿಲೀಫ್
Team Udayavani, Aug 3, 2018, 6:15 AM IST
ಬೆಂಗಳೂರು: ಆದಾಯ ತೆರಿಗೆ ವಿಚಾರಣೆ ಸಂದರ್ಭದಲ್ಲಿ ಸುಳ್ಳು ಮಾಹಿತಿ ಹಾಗೂ ಸಾಕ್ಷ್ಯಾನಾಶ ಪಡಿಸಿದ ಆರೋಪ ಹೊತ್ತಿದ್ದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಪ್ರಕರಣದ ವಿಚಾರಣೆ ನಡೆಸಿದ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಗುರುವಾರ ಸಚಿವ ಡಿ.ಕೆ.ಶಿವಕುಮಾರ್, ಉದ್ಯಮಿ ಸುನಿಲ್ ಕುಮಾರ್ ಶರ್ಮಾ, ಆಂಜನೇಯ ಮತ್ತು ರಾಜೇಂದ್ರ ಅವರುಗಳಿಗೆ ತಲಾ 50 ಸಾವಿರ ಬಾಂಡ್ ಶ್ಯೂರಿಟಿ ನೀಡುವಂತೆ ಸೂಚಿಸಿ ಷರತ್ತು ಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಸೆ.20ಕ್ಕೆ ವಿಚಾರಣೆ ಮುಂದೂಡಿದೆ.
ಆದಾಯ ತೆರಿಗೆ ಇಲಾಖೆ ವಿಚಾರಣೆ ವೇಳೆ ಸುಳ್ಳು ಮಾಹಿತಿ ಹಾಗೂ ಸಾûಾ$Â ನಾಶ ಆರೋಪದ ಮೇಲೆ ಐಟಿ ಅಧಿಕಾರಿಗಳು ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್ ಆ.2ರಂದು ಖುದ್ದು ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಸಹೋದರ, ಸಂಸದ ಡಿ.ಕೆ.ಸುರೇಶ್ ಜತೆ ಆಗಮಿಸಿದ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಇತರೆ ಆರೋಪಿಗಳು ನ್ಯಾಯಾಧೀಶರ ಎದುರು ಹಾಜರಾದರು.
ಈ ವೇಳೆ ಆರೋಪಿಗಳ ಪರ ವಕೀಲ ಬಿ.ವಿ.ಆಚಾರ್ಯ ವಾದ ಮಂಡಿಸಿ, ಶಿವಕುಮಾರ್ ವಿರುದ್ಧ ಐಟಿ ಅಧಿಕಾರಿಗಳು ದಾಖಲಿಸಿರುವ ದೂರಿಗೆ ಮೊದಲು ಸಕ್ಷಮ ಪ್ರಾಧಿಕಾರ ಹಾಗೂ ಆದಾಯ ತೆರಿಗೆ ಇಲಾಖೆಯ ಆಯುಕ್ತರಿಂದ ಪೂರ್ವಾನುಮತಿ ಪಡೆಯಬೇಕಿತ್ತು.
ಆದರೆ, ಐಟಿ ಅಧಿಕಾರಿಗಳು ಇಲಾಖೆಯ ನಿರ್ದೇಶಕರಿಂದ ಅನುಮತಿ ಪಡೆದು ಖಾಸಗಿ ದೂರು ದಾಖಲಿಸಿದ್ದಾರೆ. ಜತೆಗೆ ಪ್ರಕರಣದ ಮತ್ತೂಬ್ಬ ಆರೋಪಿ ಸಚಿನ್ ನಾರಾಯಣ್ ಪ್ರಕರಣ ರದ್ದು ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ಪ್ರಕರಣದ ವಿಚಾರಣೆಗೆ ತಡೆ ನೀಡಿದೆ. ಹೀಗಾಗಿ ಶಿವಕುಮಾರ್ ಹಾಗೂ ಇತರೆ ಆರೋಪಿಗಳಿಗೆ ಜಾಮೀನು ಮಂಜೂರು ಮಾಡುವಂತೆ ಮನವಿ ಮಾಡಿದರು.
ವಾದ ಆಲಿಸಿದ ನ್ಯಾ ಎಂ.ಎಸ್.ಆಳ್ವಾ, ಶಿವಕುಮಾರ್ ಸೇರಿ ಐವರು ಆರೋಪಿಗಳಿಗೆ ತಲಾ 50 ಸಾವಿರ ಬಾಂಡ್ ನೀಡುವಂತೆ ಷರತ್ತು ವಿಧಿಸಿ ಮಧ್ಯಂತರ ಜಾಮೀನು ಮಂಜೂರು ಮಾಡಿದರು. ಇದೇ ವೇಳೆ ಮುಂದಿನ ವಿಚಾರಣೆ ವೇಳೆಗೆ ಹೈಕೋರ್ಟ್‌ನ ಅರ್ಜಿಯ ವಸ್ತುಸ್ಥಿತಿ ತಿಳಿಸುವಂತೆ ಆದೇಶಿಸಿ ಸೆ.20ಕ್ಕೆ ವಿಚಾರಣೆ ಮುಂದೂಡಿದರು.
2017ರಲ್ಲಿ ಶಿವಕುಮಾರ್ ಮನೆ ಮತ್ತು ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಈ ವೇಳೆ ತಮ್ಮ ಆದಾಯ ಕುರಿತು ಮಾಹಿತಿ ನೀಡಲು ಐಟಿ ಅಧಿಕಾರಿಗಳು ಶಿವಕುಮಾರ್‌ಗೆ ಸಮನ್ಸ್ ಜಾರಿ ಮಾಡಿದ್ದರು. ವಿಚಾರಣೆಗೆ ಹಾಜರಾದ ಶಿವಕುಮಾರ್ ಹಾಗೂ ಇತರರು ಸುಳ್ಳು ಮಾಹಿತಿ ನೀಡಿರುವುದು ಕಂಡು ಬಂದಿದೆ. ಸಚಿವರು ವಿಚಾರಣೆ ಸಂದರ್ಭದಲ್ಲಿ ನೀಡಿರುವ ಹೇಳಿಕೆಗೂ, ಅವರ ಮನೆ ಮತ್ತು ಕಚೇರಿಗಳಲ್ಲಿ ಪತ್ತೆಯಾದ ದಾಖಲೆಗಳು ತಾಳೆ ಆಗುತ್ತಿಲ್ಲ. ಈ ಮೂಲಕ ಸುಳ್ಳು ಮಾಹಿತಿ ನೀಡಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದು, ಕೆಲ ಸಾಕ್ಷ್ಯಾಗಳನ್ನು ನಾಶ ಪಡಿಸಿದ್ದಾರೆ ಎಂದು ಆರೋಪಿಸಿರುವ ಐಟಿ ಅಧಿಕಾರಿಗಳು ಐಟಿ ಕಾಯ್ದೆ 277, 278, 193, 199, ಹಾಗೂ 120(ಬಿ) ಸೆಕ್ಷನ್‌ಗಳ ಅಡಿ ದೂರು ದಾಖಲಿಸಿದ್ದರು.
ನಾಲ್ಕು ಪ್ರಕರಣಗಳಲ್ಲೂ ರಿಲೀಫ್
ದಾಳಿ ನಡೆಸಿದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸಚಿವ ಶಿವಕುಮಾರ್ ಹಾಗೂ ಇತರರ ವಿರುದ್ಧ ನಾಲ್ಕು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದರು. ಎರಡು ಆರ್ಥಿಕ ವರ್ಷಗಳಲ್ಲಿ ತೆರಿಗೆ ವಂಚನೆ ಆರೋಪದಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು, 3ನೇ ಪ್ರಕರಣ ತಮ್ಮ ಸಂಪೂರ್ಣ ವ್ಯವಹಾರದಲ್ಲಿ ತೆರಿಗೆ ಕುರಿತು ತಪ್ಪು ಮಾಹಿತಿ ನೀಡಿದ ಆರೋಪ. ಹಾಗೂ ಹವಾಲಾ ವ್ಯವಹಾರ ಮತ್ತು ಸುಳ್ಳು ಮಾಹಿತಿ ಹಾಗೂ ಸಾûಾ$Â ನಾಶ ಆರೋಪದಡಿ ನಾಲ್ಕು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದರು. ಇದೀಗ ಎಲ್ಲ ಪ್ರಕರಣಗಳಲ್ಲಿಯೂ ಆರೋಪಿಗಳು ಜಾಮೀನು ಪಡೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.