ಕಾಂಗ್ರೆಸ್‌ನಿಂದ ಬಿಜೆಪಿ ವಿರುದ್ಧ ಧರಣಿ; ಕೇಸು
ಯಶವಂತಪುರ ಪೊಲೀಸ್ ಠಾಣೆ ಎದುರು ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ
Team Udayavani, Oct 28, 2020, 11:58 AM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಚುನಾವಣಾ ಪ್ರಚಾರಕ್ಕೆ ಬಿಜೆಪಿ ಕಾರ್ಯಕರ್ತರು ಹಾಗೂ ಆರ್.ಆರ್.ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರ ಬೆಂಬಲಿಗರು ಅಡ್ಡಿಪಡಿಸಿದ್ದು, ಅವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ರಾತ್ರಿ ಯಶವಂತಪುರ ಠಾಣೆ ಎದರು ಪ್ರತಿಭಟಿಸಿದ್ದು, ಪ್ರಕರಣ ದಾಖಲಾಗಿದೆ.
ಸುಮಾರು 100ಕ್ಕೂ ಅಧಿಕ ಮಂದಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಶಾಂತಿಯುತವಾಗಿ ಪ್ರಚಾರ ನಡೆಸುತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಚುನಾವಣಾ ಪ್ರಚಾರಕ್ಕೆ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿದರು. ಅದಕ್ಕೆ ಜೆ.ಕೆ.ವೆಂಕಟೇಶ್ ಅವರ ಕೈವಾಡವಿದೆ. ಕೂಡಲೇ ಅವರನ್ನು ಬಂಧಿಸ ಬೇಕು ಎಂದು ಪ್ರತಿಭಟನಾಕಾ ರರು ಒತ್ತಾಯಿಸಿದರು. ಪೊಲೀಸರು ಮನವೊಲಿಸಲು ಯತ್ನಿಸಿದ್ದು, ಆರೋಪಿತರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ..
ಬಿಜೆಪಿ ವಿರುದ್ಧ ಕೈ ದೂರು : ರಾಜರಾಜೇಶ್ವರಿ ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಒಂದೇ ವರ್ಷದಲ್ಲಿ 35 ಕೋಟಿ ಹೆಚ್ಚಳವಾಗಿದ್ದು, ಶಿರಾ ಕ್ಷೇತ್ರದಲ್ಲಿ ಬಿಜೆಪಿ ಸಾರ್ವಜನಿಕರಿಗೆ ಹಣ ಹಂಚಿಕೆ ಆಮಿಷ ಒಡ್ಡುತ್ತಿದೆ ಎಂದು ಆರೋಪಿಸಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ಆಯೋಗಕ್ಕೆ ದೂರು ನೀಡಿದ ನಂತರ ಮಾಧ್ಯಮ ಗಳೊಂದಿಗೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಬಿಜೆಪಿ ನಾಯಕರು ಶಿರಾದಲ್ಲಿ ಮತದಾರರಿಗೆ ಹಣ ಹಂಚುವಾಗ ಸಾರ್ವಜನಿಕರೇ ವಿಡಿಯೋ ಮಾಡಿದ್ದಾರೆ. ಹಣ ಹಂಚುವುದಷ್ಟೇ ಅಲ್ಲದೇ ಬಿಜೆಪಿ ಅಭ್ಯರ್ಥಿ ಆಯ್ಕೆಯಾದರೆ ಮಾತ್ರ ಅಭಿ ವೃದ್ಧಿ ಮಾಡಲಾಗುವುದು ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮ ಕೈಗೊ ಳ್ಳುವಂತೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ ಎಂದು ಹೇಳಿದರು.
ಬೆದರಿಸಿ ಮತ ಪಡೆವ ಯತ್ನ: ದಿನೇಶ್ :
ಬೆಂಗಳೂರು: ಆರ್.ಆರ್.ನಗರದಲ್ಲಿ ಮುನಿರತ್ನ ದಬ್ಟಾಳಿಕೆ ಹಾಗೂ ಬೆದರಿಸಿ ಜನರಿಂದ ಮತ ಪಡೆಯಲು ಪ್ರಯತ್ನ ನಡೆಸು ತ್ತಿದ್ದಾರೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಆರ್.ಆರ್.ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರವಾಗಿ ಪ್ರಚಾರ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರದಲ್ಲಿ ಆರ್.ಆರ್.ನಗರ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಲಾಗಿದ್ದು, ಅದರಿಂದ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. ಈಗ ಅವರು ಯಾವ ರೀತಿ ಮೋಸ ಮಾಡಿ ದ್ರೋಹ ಮಾಡಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಠಾಣೆ ಮುಂದೆ ಹೈಡ್ರಾಮಾ: ಪೊಲೀಸ್ ಠಾಣೆಯಲ್ಲಿ ಮಂಗಳವಾರ ತಡರಾತ್ರಿ ವರೆಗೂ ಹೈಡ್ರಾಮ ನಡೆಯಿತು. ವಿರೋಧ ಪಕ್ಷದ ಮುಖಂಡ ಸಿದ್ದರಾಮಯ್ಯ ಭಾಷಣಕ್ಕೆ ಅಡ್ಡಿ ಪಡಿಸಿದ ಮಾಜಿ ಕಾರ್ಪೊರೇಟರ್ ಜಿ.ಕೆ.ವೆಂಕಟೇಶ್ ಬಂಧನಕ್ಕೆ ಆಗ್ರಹಿಸಿ ಕೈ ಕಾರ್ಯಕರ್ತರು ಪ್ರತಿಭಟಣೆ ನಡೆಸಿದರು. ಅಲ್ಲದೆ ಬಿಜೆಪಿ ಕಾರ್ಯತರ ಬಂಧನ ಆಗುವವರೆಗೂ ಸ್ಥಳದಿಂದ ಬೇರೆಡೆ ಹೋಗಲು ನಿರಾಕರಿಸಿದರು. ಇದೇ ವೇಳೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ಧರಣಿ ಕೂರಲು ಮುಂದಾದರು.
ಈ ವೇಳೆ ಸಂಸದ ಡಿ.ಕೆ.ಸುರೇಶ್ ಯಶವಂತಪುರ ಠಾಣೆಗೆ ಆಗಮಿಸಿ ಬಿಜೆಪಿ ಕಾರ್ಯಕರ್ತರ ಬಂಧನಕ್ಕೆ ಒತ್ತಾಯಿಸಿದರು. ಬಿಜೆಪಿ ಕಾರ್ಯಕರ್ತರು ಪದೇ ಪದೆ ಶಾಂತಿ ಕದಡುವ ಕೆಲಸ ಮಾಡುತ್ತಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿದರು. ಇದೇ ವೇಳೆ ಎಸಿಪಿ ರೀನಾ ಸುವರ್ಣ ಅವರೊಂದಿಗೆ ಡಿ.ಕೆ.ಸುರೇಶ್ ಚರ್ಚೆ ನಡೆಸಿದರು.
ಕಾಂಗ್ರೆಸ್ ಮುನಿರತ್ನನ ಗೂಂಡಾಗಳಿಗೆ ಹೆದರುವುದಿಲ್ಲ. ಇದೇ ರೀತಿ ಮುಂದುವರೆದರೆ, ಬಿಜೆಪಿಯವರುಪ್ರಚಾರ ಕಾರ್ಯಕ್ರಮ ನಡೆಸಲು ಬಿಡುವುದಿಲ್ಲ. ಮುನಿರತ್ನ ರನ್ನು ಬಂಧಿಸದಿದ್ದರೆ ಠಾಣೆ ಎದುರು ಪ್ರತಿ ಭಟನೆ ನಡೆಸಬೇಕಾಗುತ್ತದೆ. ನ. 3 ರಂದು ತಕ್ಕ ಉತ್ತರ ನೀಡುತ್ತಾರೆ.– ಸಿದ್ದರಾಮಯ್ಯ, ಮಾಜಿ ಸಿಎಂ
ಕಾಂಗ್ರೆಸ್‌ನಿಂದ ದೂರು ಸಲ್ಲಿಕೆಯಾಗಿದೆ. ನೀತಿ ಸಂಹಿತೆ ಪ್ರಕಾರ ದೂರನ್ನು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಐಟಿ ಇಲಾಖೆಗೆ ವರ್ಗಾಯಿಸಲಾಗಿದೆ. ದೂರನ್ನು ತನಿಖೆಗೆ ಒಳಪಡಿಸಲಾಗಿದೆ. – ಸಂಜೀವ ಕುಮಾರ್, ರಾಜ್ಯ ಮುಖ್ಯ ಚುನಾವಣಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.