ರಾಹುಲ್‌ಗಾಂಧಿ ಸದಸ್ಯತ್ವ ರದ್ದು: ಕಾಂಗ್ರೆಸ್ ಪ್ರತಿಭಟನೆ
Team Udayavani, Jul 8, 2023, 7:50 AM IST
ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲು ಕೇಂದ್ರ ಸರಕಾರ ಮಾಡುತ್ತಿರುವ ಹುನ್ನಾರ ಖಂಡಿಸಿ ಶುಕ್ರವಾರ ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ ಮುಂಭಾಗ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಬಳಿಕ ವಿಧಾನಸೌಧ ಮುಂಭಾಗ ಗಾಂಧಿ ಪ್ರತಿಮೆ ಮುಂದೆಯೂ ಕಾಂಗ್ರೆಸ್ ಶಾಸಕರು, ಸಚಿವರು ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಲೋಕಸಭೆ ಚುನಾವಣೆಯಲ್ಲಿ 7 ಲಕ್ಷ ಮತಗಳ ಅಂತರದಲ್ಲಿ ಗೆದ್ದಿರುವ ರಾಹುಲ್ ಗಾಂಧಿ ಅವರ ಅನರ್ಹತೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕರಾಳ ಅಧ್ಯಾಯ. ನಮ್ಮ ರಾಜ್ಯದಲ್ಲಿ ಮಾಡಿದ ಭಾಷಣ ಇಟ್ಟುಕೊಂಡು ಬಿಜೆಪಿ ಕುತಂತ್ರ ಮಾಡಿದೆ. ನ್ಯಾಯಾಲಯದಲ್ಲಿ ನ್ಯಾಯ ಸಿಗುವ ನಿರೀಕ್ಷೆ ಇತ್ತು. ತೀರ್ಪಿನ ವಿಚಾರವಾಗಿ ನಾವು ಮಾತನಾಡುವುದಿಲ್ಲ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಪ್ರಧಾನಿ ಆಗಬಹುದಿತ್ತು. ಆದರೆ, ದೇಶಕ್ಕೆ ಆರ್ಥಿಕ ತಜ್ಞ ಅಗತ್ಯವಿದೆ ಎಂದು ಅಧಿಕಾರ ತ್ಯಾಗ ಮಾಡಿದರು. ರಾಹುಲ್ ಗಾಂಧಿ ಭಾರತ ಜೋಡೋ ಯಾತ್ರೆ ಮೂಲಕ ಬೆಲೆ ಏರಿಕೆ, ನಿರುದ್ಯೋಗದ ಬಗ್ಗೆ ಧ್ವನಿ ಎತ್ತಿ ಭಾರತ ಒಂದುಗೂಡಿಸಲು ಪ್ರಯತ್ನಿಸಿದರು. ಅದರಿಂದ ಅವರಿಗೆ ಸಿಕ್ಕ ಜನಬೆಂಬಲ ಸಹಿಸದೆ ಬಿಜೆಪಿ ಅವರ ಸದಸ್ಯತ್ವ ಅನರ್ಹಗೊಳಿಸಲಾಗಿದೆ ಎಂದು ಆರೋಪಿಸಿದರು.
ಪ್ರತಿಭಟನೆ ವೇಳೆ ಗೃಹ ಸಚಿವ ಡಾ| ಜಿ. ಪರಮೇಶ್ವರ, ಕೆ.ಎಚ್. ಮುನಿಯಪ್ಪ, ಎನ್.ಎಸ್. ಬೋಸರಾಜು, ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಎನ್. ಚಂದ್ರಪ್ಪ, ಶಾಸಕರಾದ ರಂಗನಾಥ್, ಶ್ರೀನಿವಾಸ್, ನಂಜೇಗೌಡ, ತನ್ವೀರ್ ಸೇs…, ಶಿವಣ್ಣ ಹಾಗೂ ಇತರರು ಇದ್ದರು.
ಬಿಜೆಪಿ ಒಡೆದ ಮನೆ
ಬಿಜೆಪಿ ಸೋಲಿನಿಂದ ಹತಾಶರಾಗಿ ಒಡೆದ ಮನೆ ಆಗಿದೆ. ಅವರಿಗೆ ವಿಪಕ್ಷದ ನಾಯಕನ ಆಯ್ಕೆ ಮಾಡುವ ಸಾಮರ್ಥ್ಯ ಇಲ್ಲವಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕುಟುಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ
ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್ ನಕಾರ
Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್
Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
Udupi: ಗೀತೋತ್ಸವದ ಮಂಗಳೋತ್ಸವ ; ಉಪೇಂದ್ರ ಸೇರಿ ಗಣ್ಯರು ಭಾಗಿ
Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ
PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.