ಕರಾವಳಿ ಮೀನುಗಾರರನ್ನು ಸೆಳೆಯಲು ಕಾಂಗ್ರೆಸ್ ತಂತ್ರ
Team Udayavani, Oct 17, 2017, 11:59 AM IST
ಬೆಂಗಳೂರು: ಕರಾವಳಿ ಭಾಗದ ಮೀನುಗಾರರ ಸಮುದಾಯದ ಕಾಂಗ್ರೆಸ್‌ನತ್ತ ಸೆಳೆದುಕೊಳ್ಳಲು ಕೆಪಿಸಿಸಿ ಕಾರ್ಯತಂತ್ರ ರೂಪಿಸಿದ್ದು, ಈ ಹಿನ್ನೆಲೆಯಲ್ಲಿ ನವೆಂಬರ್21ರಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಉಪಸ್ಥಿತಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಮೀನುಗಾರರ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ.
ಕರಾವಳಿಯಲ್ಲಿ ಬಿಜೆಪಿ ಬೆಂಬಲಿತ ಮೀನುಗಾರರ ಸಂಖ್ಯೆ ಹೆಚ್ಚಾಗಿರುವುದನ್ನು ಅರಿತ ಕಾಂಗ್ರೆಸ್, ಮೀನುಗಾರರ ನಡುವೆ ಪಕ್ಷ ಸಂಘಟನೆ ಮಾಡಿ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕರಾವಳಿಯಲ್ಲಿ ಹೆಚ್ಚು ಸೀಟು ಗೆಲ್ಲಲು ಬೇಕಾದ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಈ ನಿಟ್ಟಿನಲ್ಲಿ ಕರ್ನಾಟಕ ಪ್ರದೇಶ ಮೀನುಗಾರರ ಕಾಂಗ್ರೆಸ್ ಸಮಿತಿಯ ಮೊದಲ ಸಭೆ ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ನಡೆದು ಕರಾವಳಿಯ ಮೀನುಗಾರರನ್ನು ಅಗ್ರಸಂಖ್ಯೆಯಲ್ಲಿ ಕಾಂಗ್ರೆಸ್‌ಗೆ ಸೆಳೆಯುವ ನಿಟ್ಟಿನಲ್ಲಿ ಕಾರ್ಯಕಾರಣಿಯಲ್ಲಿ ಸಮಾಲೋಚನೆ ನಡೆಯಿತು.
ಅಖೀಲ ಭಾರತ ಮೀನುಗಾರರ ಕಾಂಗ್ರೆಸ್‌ನ ಅಧ್ಯಕ್ಷ ಟಿ.ಎನ್.ಪ್ರತಾಪನ್, ರಾಜ್ಯಾಧ್ಯಕ್ಷ ಯು.ಆರ್.ಸಭಾಪತಿ, ಮೀನುಗಾರ ಸಮಿತಿಯ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ನವೆಂಬರ್ 21ರಂದು ವಿಶ್ವ ಮೀನುಗಾರರ ದಿನಾಚರಣೆ ಇದೆ. ಅಂದೇ ಉತ್ತರ ಕನ್ನಡ ಜಿಲ್ಲೆಯ ಕುಮಾಟದಲ್ಲಿ ಮೀನುಗಾರರ ಬೃಹತ್ ಸಮಾವೇಶ ಆಯೋಜಿಸಲಿದ್ದೇವೆ. ಸಮಾವೇಶಕ್ಕೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಆಗಮಿಸಲಿದ್ದಾರೆ ಎಂದು ತಿಳಿಸಿದರು.
ಅಖೀಲ ಭಾರತ ಕಾಂಗ್ರೆಸ್‌ನಲ್ಲಿ ಮೀನುಗಾರರ ಘಟಕ ಅಸ್ಥಿತ್ವಕ್ಕೆ ಬಂದಿದೆ. ಹೀಗಾಗಿ ಕೆಪಿಸಿಸಿಯಲ್ಲೂ ಅದರ ಘಟಕ ಆರಂಭಿಸಿದ್ದು, ಮಾಜಿ ಶಾಸಕರಾದ ಯು.ಆರ್.ಸಭಾಪತಿಯವರು ಅದರ ನೇತೃತ್ವ ವಹಿಸಿದ್ದಾರೆ. ಅದರ ಮೊದಲ ಕಾರ್ಯಕಾರಣಿ ನಡೆದಿದೆ. ಮೀನುಗಾರರ ಸಮಸ್ಯೆ, ಸಂಘಟನೆ ಸೇರಿದಂತೆ ಹಲವು ವಿಷಯದ ಚರ್ಚೆ ನಡೆದಿದ್ದು, ಘಟಕದ ಸಭೆ ನಡೆಸಿ ಮೀನುಗಾರರ ಸಮಾವೇಶ ಮಾಡುವ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದರು.
ಚುನಾವಣೆಗೆ ಸಜ್ಜು: ಮುಂಬರುವ ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿದ್ದೇವೆ. ಆದ್ದರಿಂದಲೇ ಚುನಾವಣಾ ಪ್ರಣಾಳಿಕೆಯ ಸಮಿತಿಯನ್ನು ಹೊಸದಾಗಿ ರಚಿಸಲಾಗಿದೆ. ಜಿಲ್ಲಾ ಘಟಕದಲ್ಲೂ ಸಮಿತಿ ಬದಲಾವಣೆಗೆ ಒತ್ತಡವಿದೆ. ಹೀಗಾಗಿ ಕೆಲವು ಜಿಲ್ಲೆಯಲ್ಲಿ ಬದಲಾವಣೆ ಮಾಡಿದ್ದೇವೆ. ಚುನಾವಣೆಗೆ ಸಂಭವನೀಯ ಅಭ್ಯರ್ಥಿಗಳನ್ನು ಗುರುತಿಸುವ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದೆ. ಅವರಿಗೆ ತಮ್ಮ ಕ್ಷೇತ್ರಗಳಲ್ಲಿ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ಹೇಳಿದರು.
ಸಿ.ಪಿ.ಯೋಗೀಶ್ವರ್ ಸೇರಿದಂತೆ ಕೆಲವರು ಪಕ್ಷ ಬಿಡುವ ಸೂಚನೆ ಇರಲಿಲ್ಲ. ಪಕ್ಷ ಬಿಟ್ಟವರ ಬಗ್ಗೆ ಚಿಂತೆಯೂ ಇಲ್ಲ. ಬಿಜೆಪಿಯಿಂದ ಕಾಂಗ್ರೆಸ್‌ಗೆ ಬರಲಿರುವ ಶಾಸಕರ ದೊಡ್ಡ ಪಟ್ಟಿಯೇ ಇದೆ. ಮೊದಲ ಹಂತದಲ್ಲಿ ಬಿಜೆಪಿಯಿಂದ 20 ಶಾಸಕರು ಕಾಂಗ್ರೆಸ್‌ಗೆ ಸೇರಲು ಸಜ್ಜಾಗಿದ್ದಾರೆ ಎಂದು “ಬಾಂಬ್’ಸಿಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Los Angeles: ಹತೋಟಿಗೆ ಬಾರದ ಕಾಡ್ಗಿಚ್ಚು, ಸಾವಿರಾರು ಮನೆಗಳು ಆಹುತಿ, ಮೃತರ ಸಂಖ್ಯೆ 16ಕ್ಕೆ
Champions Trophy: ನ್ಯೂಜಿಲ್ಯಾಂಡ್ ತಂಡ ಪ್ರಕಟ; ತಂಡಕ್ಕೆ ಮರಳಿದ ಮೂವರು ಘಟಾನುಘಟಿಗಳು
Bengaluru Crime: ಪ್ರಿಯಕರ ಆತ್ಮಹತ್ಯೆ: ಪ್ರೇಯಸಿಯೂ ನೇಣಿಗೆ ಶರಣು
Shivamogga: ಖ್ಯಾತ ಫೋಟೋ ಜರ್ನಲಿಸ್ಟ್ ಗೆ ಹೃದಯಾಘಾತ, ನಿಧನ
ಕೌನ್ ಬನೇಗಾ ಕರೋಡ್ ಪತಿ: 50 ಲಕ್ಷ ರೂ.ಗೆದ್ದ ಬಾಗಲಕೋಟೆಯ ರಮಜಾನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.