ಇವರನ್ನು ಕೆಂಪೇಗೌಡ ಪ್ರಶಸ್ತಿಗೆ ಪರಿಗಣಿಸಿ!
Team Udayavani, Jul 26, 2018, 12:09 PM IST
ಬೆಂಗಳೂರು: “ಇವರು ಉತ್ತಮ ಸಾಧನೆ ಮಾಡಿದ್ದಾರೆ. ಇವರನ್ನು ಕೆಂಪೇಗೌಡ ಪ್ರಶಸ್ತಿಗೆ ಪರಿಗಣಿಸಿ’. ಹೀಗೆ, ಮಾಜಿ ಪ್ರಧಾನಿಗಳಿಂದ ಹಿಡಿದು ಹಾಲಿ ಮುಖ್ಯಮಂತ್ರಿ, ಸಚಿವರವರೆಗೆ ಎಲ್ಲರೂ ಬಿಬಿಎಂಪಿಗೆ ಶಿಫಾರಸು ಪತ್ರಗಳನ್ನು ಕಳಿಸುತ್ತಿದ್ದಾರೆ.
ಪಾಲಿಕೆ ವತಿಯಿಂದ ಕೆಂಪೇಗೌಡ ಜಯಂತಿ ಆಚರಣೆಗೆ ಸಿದ್ಧತೆ ನಡೆದಿದ್ದು, ಜಯಂತಿ ಅಂಗವಾಗಿ ಪಾಲಿಕೆಯಿಂದ ನೀಡುವ ಕೆಂಪೇಗೌಡ ಪ್ರಶಸ್ತಿ ಆಕಾಂಕ್ಷಿಗಳು ಪ್ರಭಾವಿಗಳಿಂದ ಶಿಫಾರಸು ತರುತ್ತಿದ್ದು, ತಮ್ಮನ್ನು ಪ್ರಶಸ್ತಿಗೆ ಪರಿಗಣಿಸುವಂತೆ ಕೋರುವವರ ಸಂಖ್ಯೆ ಹೆಚ್ಚಾಗುತ್ತಿದೆ.
ಈಗಾಗಲೇ ಪ್ರಶಸ್ತಿಗೆ 420ಕ್ಕೂ ಹೆಚ್ಚು ಜನರಿಂದ ಅರ್ಜಿಗಳು ಬಂದಿವೆ. ಆ ಪೈಕಿ ಹಲವರನ್ನು ಪ್ರಶಸ್ತಿಗೆ ಪರಿಗಣಿಸುವಂತೆ ಮಾಜಿ ಪ್ರಧಾನಿ, ಹಾಲಿ ಸಿಎಂ, ಸಚಿವರು, ಶಾಸಕರು ಹಾಗೂ ಪಾಲಿಕೆ ಸದಸ್ಯರು ಶಿಫಾರಸು ಪತ್ರಗಳನ್ನು ಪಾಲಿಕೆಗೆ ಕಳಿಸಿದ್ದಾರೆ. ಹಿನ್ನೆಲೆಯಲ್ಲಿ ಈ ಬಾರಿ ಪ್ರಶಸ್ತಿಗಳ ಸಂಖ್ಯೆ 200 ದಾಟುವ ಸಾಧ್ಯತೆಯಿದೆ.
ನಗದು ಬಹುಮಾನಕ್ಕೆ ಕತ್ತರಿ: ಕಳೆದ ವರ್ಷ 244 ಮಂದಿಗೆ ಕೆಂಪೇಗೌಡ ಪ್ರಶಸ್ತಿ ನೀಡಲಾಗಿತ್ತು. ಈ ವರ್ಷ ಎಷ್ಟು ಸಾಧಕರಿಗೆ ಪ್ರಶಸ್ತಿ ನೀಡಬೇಕು ಎಂಬುದನ್ನು ಬಿಬಿಎಂಪಿ ಇನ್ನೂ ನಿರ್ಧರಿಸಿಲ್ಲ. ಆದರೆ, ಮೂಲಗಳ ಪ್ರಕಾರ ಈ ಬಾರಿಯೂ ಪ್ರಶಸ್ತಿ ಪುರಸ್ಕೃತ ಸಂಖ್ಯೆ 200 ದಾಟುವ ಸಾಧ್ಯತೆಯಿದ್ದು, ನಗದು ಬಹುಮಾನ ಕಡಿಮೆಯಾಗುವ ಸಾಧ್ಯತೆಯಿದೆ.
ಕಳೆದ ವರ್ಷ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಒಂದು ದಿನ ಬಾಕಿ ಇರುವಾಗ 158 ಸಾಧಕರ ಪಟ್ಟಿ ಬಿಡುಗಡೆಗೊಂಡಿತ್ತು. ಆದರೆ, ಸಮಾರಂಭ ಮುಗಿಯುವ ವೇಳೆಗೆ ಪುರಸ್ಕೃತರ ಸಂಖ್ಯೆ 244 ತಲುಪಿತ್ತು. ಕ್ರಿಮಿನಲ್ ಪ್ರಕರಣ ಆರೋಪಿಗಳ ಹೆಸರೂ ಪಟ್ಟಿಯಲ್ಲಿ ಇದ್ದದ್ದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು.
ಪಾಲಿಕೆಯಿಂದ ಪ್ರತಿ ವರ್ಷ ಬೆಂಗಳೂರು ಕರಗ ನಡೆಯುವ ದಿನದಂದು ಕೆಂಪೇಗೌಡ ದಿನಾಚರಣೆ ಆಚರಿಸಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿತ್ತು. ಆದರೆ, ಈ ಬಾರಿ ವಿಧಾನಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಿದ್ದ ಕಾರಣ ಕೆಂಪೇಗೌಡ ದಿನಾಚರಣೆ ಮುಂದೂಡಲಾಗಿತ್ತು.
ಪ್ರಶಸ್ತಿಗೆ ಅರ್ಹರ ಆಯ್ಕೆಗೆ ಮೇಯರ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದು, ಆಡಳಿತ ಪಕ್ಷದ ನಾಯಕ ಶಿವರಾಜ್, ಜೆಡಿಎಸ್ ನಾಯಕಿ ನೇತ್ರಾ ನಾರಾಯಣ್, ವಿರೋಧ ಪಕ್ಷದ ನಾಯಕ ಪದ್ಮನಾಭ ರೆಡ್ಡಿ, ಆಯುಕ್ತ ಮಂಜುನಾಥಪ್ರಸಾದ್ ಸದಸ್ಯರಾಗಿದ್ದಾರೆ.
ಶಿಫಾರಸ್ಸು ಮಾಡಿದ ಪ್ರಮುಖರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕ್ರೀಡಾ ಕ್ಷೇತ್ರದಲ್ಲಿ ಇಬ್ಬರು ಸಾಧಕರಿಗೆ ಪ್ರಶಸ್ತಿ ನೀಡುವಂತೆ ಶಿಫಾರಸು ಪತ್ರ ಕಳುಹಿಸಿದ್ದಾರೆ. ಜತೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ರಂಗಭೂಮಿ ಕ್ಷೇತ್ರದ ಒಬ್ಬ ಸಾಧಕರಿಗೆ ಪ್ರಶಸ್ತಿ ನೀಡುವಂತೆ ತಿಳಿಸಿದ್ದಾರೆ. ಅದೇ ರೀತಿ ಸಚಿವರಾದ ಡಿ.ಕೆ.ಶಿವಕುಮಾರ್, ಜಮೀರ್ ಅಹಮದ್ ಸೇರಿ ಹಲವು ಪ್ರಮುಖರು ಶಿಫಾರಸು ಪತ್ರ ನೀಡಿದ್ದಾರೆೆ.
ಜಯಂತಿ ವಿಳಂಬಕ್ಕೆ ಸಿಎಂ ಕಾರಣ: ಮುಖ್ಯಮಂತ್ರಿಯವರ ಸಮಯ ಪಡೆದು ಈ ಹಿಂದೆ ಜು.18ರಂದು ಕೆಂಪೇಗೌಡ ಜಯಂತಿ ಕಾರ್ಯಕ್ರಮ ನಿಗದಿಪಡಿಸಲಾಗಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಸಿಎಂ ಬೇರೊಂದು ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾದ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಬರಲಾಗದು ಎಂದು ಪತ್ರ ಕಳುಹಿಸಿದ್ದರು. ಆ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಮುಂದೂಡಲಾಗಿದ್ದು, ಮುಖ್ಯಮಂತ್ರಿಗಳ ದಿನಾಂಕ ದೊರೆತ ಕೂಡಲೆ ದಿನ ಅಂತಿಮಗೊಳಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.