ಬೆಂಗಳೂರು ಖಾದಿ ಪ್ಲಾಜಾ ನಿರ್ಮಾಣ


Team Udayavani, Jan 3, 2018, 12:49 PM IST

siddarama.jpg

ಬೆಂಗಳೂರು: ದೆಹಲಿ ಮಾದರಿಯಲ್ಲಿ ಶೀಘ್ರದಲ್ಲೇ ರಾಜ್ಯದ ಬೆಂಗಳೂರು ಮತ್ತು ಬೆಳಗಾವಿಯಲ್ಲಿ “ಖಾದಿ ಪ್ಲಾಜಾ’ ನಿರ್ಮಿಸಲಾಗುವುದು ಎಂದು ಸಣ್ಣ ಕೈಗಾರಿಕೆ ಸಚಿವೆ ಡಾ.ಗೀತಾ ಮಹದೇವ ಪ್ರಸಾದ್‌ ತಿಳಿಸಿದರು.

ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಹಮ್ಮಿಕೊಂಡ ಒಂದು ತಿಂಗಳ ರಾಷ್ಟ್ರಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತುಪ್ರದರ್ಶನ ಹಾಗೂ ಮಾರಾಟ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಖಾದಿ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ವ್ಯವಸ್ಥೆ ಜತೆಗೆ ಮಧ್ಯವರ್ತಿಗಳ ಹಾವಳಿಯಿಂದ ಮುಕ್ತಗೊಳಿಸುವ ನಿಟ್ಟಿನಲ್ಲಿ ಖಾದಿ ಪ್ಲಾಜಾ ನಿರ್ಮಿಸಲು ಉದ್ದೇಶಿಸಲಾಗಿದೆ. ಕೇಂದ್ರದ 7.5 ಕೋಟಿ ಹಾಗೂ ರಾಜ್ಯದ 2.5 ಕೋಟಿ ರೂ. ವೆಚ್ಚದಲ್ಲಿ ಎರಡು ಕಡೆಗಳಲ್ಲಿ ಪ್ಲಾಜಾ ತೆರೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಗಾಂಧೀಜಿ ಅವರ ಗ್ರಾಮ ಸ್ವರಾಜ್ಯ ಪರಿಕಲ್ಪನೆ ಸಾಕಾರಗೊಳಿಸಲು ಮಂಡಳಿ ಶ್ರಮಿಸುತ್ತಿದ್ದು, 90 ಸಾವಿರಕ್ಕೂ ಅಧಿಕ ಜನರಿಗೆ ಉದ್ಯೋಗ ಕಲ್ಪಿಸಿದೆ. ಕಳೆದ ಐದು ವರ್ಷಗಳಲ್ಲಿ 27 ಖಾದಿ ವಸ್ತು ಪ್ರದರ್ಶನಗಳನ್ನು ರಾಜ್ಯಾದ್ಯಂತ ಮಾಡಿದ್ದು, ನಾಲ್ಕು ರಾಷ್ಟ್ರಮಟ್ಟದ ಖಾದಿ ಉತ್ಸವಗಳನ್ನು ನಡೆಸಿದೆ. ಖಾದಿ ಉತ್ಪನ್ನಗಳು ಇತ್ತೀಚಿನ ದಿನಗಳಲ್ಲಿ ವಿನೂತನ ವಿನ್ಯಾಸಗಳಲ್ಲಿ ಮೂಡಿಬರುತ್ತಿವೆ. ಶೀಘ್ರದಲ್ಲೇ ಖಾದಿ ಉತ್ಪನ್ನಗಳಿಗೆ ಬ್ರ್ಯಾಂಡ್‌ ಕೂಡ ನೀಡಲಾಗುವುದು ಎಂದು ತಿಳಿಸಿದರು. 

ಮಲತಾಯಿ ಧೋರಣೆ: ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌. ದೊರೆಸ್ವಾಮಿ ಮಾತನಾಡಿ, ಸರ್ಕಾರದ ಕೈಗಾರಿಕಾ ಇಲಾಖೆಯು ಖಾದಿ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಖಾಸಗಿ ಕಾರ್ಖಾನೆಗಳನ್ನು ಬೆಳೆಸುವುದರಲ್ಲೇ ಆ ಇಲಾಖೆ ನಿರತವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಖಾದಿ ಬೆಳೆಸುವ ಬಗ್ಗೆ ಕೈಗಾರಿಕಾ ಇಲಾಖೆಗೆ ಶ್ರದ್ಧೆ ಇಲ್ಲ. ಆದ್ದರಿಂದ ಖಾದಿ ಉತ್ಪನ್ನಗಳಿಗಾಗಿಯೇ ಪ್ರತ್ಯೇಕ ಇಲಾಖೆ ರೂಪಿಸಬೇಕು. ಕೈಗಾರಿಕಾ ಇಲಾಖೆ ಹಂಗು ಇದಕ್ಕೆ ಬೇಡ ಎಂದು ಅಭಿಪ್ರಾಯಪಟ್ಟ ಅವರು, ಸರ್ಕಾರವೇ ದಂಗಾಗುವ ರೀತಿಯಲ್ಲಿ ಖಾದಿಯನ್ನು ಬೆಳೆಸಬೇಕು ಎಂದರು. 

60 ಸಾವಿರಕ್ಕೂ ಅಧಿಕ ಜನರಿಗೆ ಉದ್ಯೋಗ ಕಲ್ಪಿಸಿರುವುದಾಗಿ ಮಂಡಳಿ ಹೇಳಿಕೊಳುತ್ತಿದೆ. ಆದರೆ, 50 ವರ್ಷಗಳು ಕಳೆದರೂ ಉದ್ಯೋಗಿಗಳ ಸಂಖ್ಯೆ ಒಂದು ಲಕ್ಷ ಕೂಡ ದಾಟಿಲ್ಲ. ಒಟ್ಟಾರೆ ಜವಳಿ ಕ್ಷೇತ್ರದಲ್ಲಿ ಖಾದಿ ಉತ್ಪನ್ನಗಳು ಶೇ. 1ರಷ್ಟು ಮಾತ್ರ ತಯಾರಾಗುತ್ತಿವೆ. ಇದೇನು ..ಪ್ರಗತಿಯೇ? ನಮ್ಮವರಿಗೆ ಸ್ವಾಭಿಮಾನ ಇದೆಯೇ? ವಿದೇಶಿಗರು ನಮ್ಮ ಕಾಟನ್‌ ಬಟ್ಟೆ ಕೇಳಿ ಪಡೆಯುತ್ತಾರೆ. ಆದರೆ, ನಾವು ಖರೀದಿಸುತ್ತಿಲ್ಲ. ನಾಚಿಕೆ ಆಗಬೇಕು ಎಂದು ದೊರೆಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ನಕಲಿ ಖಾದಿಗೆ ಪ್ರತಿಬಂಧಕ; ಪಾಪು: ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪ (ಪಾಪು) ಮಾತನಾಡಿ, ಮಿಲ್‌ ಬಟ್ಟೆಗಳು ಖಾದಿ ಭಂಡಾರದ ಹೆಸರಲ್ಲಿ ಮಾರಾಟ ಆಗುತ್ತಿವೆ. ಇದಕ್ಕೆ ಸರ್ಕಾರ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು. ಮಿಲ್‌ ಬಟ್ಟೆಗಳನ್ನು ಮಾರಾಟ ಮಾಡುವ ಅಂಗಡಿಗಳಿಗೆ ಪರವಾನಗಿ ನೀಡುವಾಗ ಈ ಸಂಬಂಧ ಸ್ಪಷ್ಟ ಪ್ರತಿಬಂಧಕಗಳನ್ನು ವಿಧಿಸಬೇಕು ಎಂದು ಹೇಳಿದರು. 

ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌, ಮೇಯರ್‌ ಸಂಪತ್‌ ರಾಜ್‌, ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಯಲುವಹಳ್ಳಿ ಎನ್‌. ರಮೇಶ್‌ ಮಾತನಾಡಿದರು. ನಿರ್ದೇಶಕ ಸೋಮಶೇಖರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯವಿಭವ ಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು. 

“ರಾಜಕಾರಣಿಗಳಿಗೆ ಖಾದಿ ಹಾಕಿಸಿ’: “ಮೊದಲು ನಮ್ಮ ರಾಜಕಾರಣಿಗಳಿಗೆ ಖಾದಿ ಬಟ್ಟೆ ಧರಿಸುವ ಮನೋಭಾವ ಬೆಳೆಸುವ ಅವಶ್ಯಕತೆ ಇದೆ’ ತಮಿಳುನಾಡಿನ ಡಿಎಂಕೆ, ಎಐಎಡಿಎಂಕೆ ಪಕ್ಷದ ನಾಯಕರು ಖಾದಿ ಬಟ್ಟೆ ಧರಿಸುತ್ತಾರೆ. ಆದರೆ, ರಾಜ್ಯದಲ್ಲಿ ಸ್ವತಃ ಕಾಂಗ್ರೆಸ್‌ ನಾಯಕರೇ ಖಾದಿ ಧರಿಸುವುದಿಲ್ಲ. ಉಳಿದ ಪಕ್ಷಗಳ ನಾಯಕರದ್ದು ದೂರದ ಮಾತು. ಆದ್ದರಿಂದ ಮೊದಲು ರಾಜಕಾರಣಿಗಳಿಗೆ ಖಾದಿ ಬಟ್ಟೆ ಹಾಕಿಸಬೇಕು ಎಂದು ಎಚ್‌.ಎಸ್‌. ದೊರೆಸ್ವಾಮಿ ತಿಳಿಸಿದರು. 

ಒಂದು ತಿಂಗಳ ಮಾರಾಟ: ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ಒಂದು ತಿಂಗಳ ಕಾಲ ರಾಷ್ಟ್ರಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತುಪ್ರದರ್ಶನ ಹಾಗೂ ಮಾರಾಟ ನಡೆಯುತ್ತಿದೆ. ಇಲ್ಲಿ ಖಾದಿಗೆ ಸಂಬಂಧಿಸಿದ ಜುಬ್ಬ, ಸೀರೆ, ವಸ್ತ್ರಗಳು ಮತ್ತು ಇತರ ಗ್ರಾಮೋದ್ಯೋಗ ವಸ್ತುಗಳು ದೊರೆಯಲಿದೆ. ಖಾದಿ ಉತ್ಪನ್ನಗಳು ವಿನೂತನ ವಿನ್ಯಾಸ ಮತ್ತು ಆಕರ್ಷಕ ಬಣ್ಣ ಗಳ ವಸ್ತ್ರಗಳು ಇಲ್ಲಿ ಲಭ್ಯವಿದೆ.

ಟಾಪ್ ನ್ಯೂಸ್

ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Nigeria: ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Man arrested for giving Coast Guard information to Pakistan for Rs 200

Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

1-horoscope

Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

16-cm

Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ

15-ccb

Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್‌ ಸಾಧ್ಯತೆ

14-fruad

Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Nigeria: ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Man arrested for giving Coast Guard information to Pakistan for Rs 200

Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.