ಬೇಹುಗಾರಿಕೆ ಪ್ರಕರಣ: ಪಾಕಿಸ್ಥಾನಕ್ಕೆ ಕರೆ ಹೋಗಿರುವುದು ಸತ್ಯ
ಆರೋಪಿ ಜತೆ ಕೇರಳ, ಕರ್ನಾಟಕದ ವ್ಯಕ್ತಿಗಳ ಸಂಪರ್ಕ
Team Udayavani, Jun 23, 2022, 12:33 PM IST
ಬೆಂಗಳೂರು: ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಸೇರಿ ವಿದೇಶಗಳಿಂದ ಬರುತ್ತಿದ್ದ ಅಂತಾರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿ ಪರಿವರ್ತಿಸುತ್ತಿದ್ದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕೇರಳ ಮೂಲದ ಸರ್ಫೂದ್ದಿನ್‌ನನ್ನು ಸಿಸಿಬಿ ಪೊಲೀಸರು 10 ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದ್ದಾರೆ.
ಹೆಸರಘಟ್ಟದಲ್ಲಿ ನೆಲೆಸಿದ್ದ ಆರೋಪಿ ಕೇರಳ ಮೂಲದ ವ್ಯಕ್ತಿಯೊಬ್ಬನ ಸೂಚನೆ ಮೇರೆಗೆ ಹೆಸರುಘಟ್ಟದ ಭವನೇಶ್ವರಿನಗರ, ಸಿದ್ದೇಶ್ವರ ಲೇಔಟ್, ಚಿಕ್ಕಸಂದ್ರ ಸೇರಿ ನಾಲ್ಕು ಕಡೆ ಕರೆಗಳ ಪರಿವರ್ತನೆಯ ಪರಿಕರಗಳನ್ನು ಇಟ್ಟುಕೊಂಡಿದ್ದ. ಈ ಮೂಲಕ ಭಾರತೀಯ ಸಂಪರ್ಕ ಇಲಾಖೆಗೆ ಕೋಟ್ಯಂತರ ರೂ. ವಂಚಿಸುತ್ತಿದ್ದ. ಭಾರತೀಯ ಸೇನೆಯ ಗುಪ್ತಚರ ಇಲಾಖೆ ಮತ್ತು ಸಿಸಿಬಿ ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿತ್ತು.
ಕರೆಗಳ ಬಗ್ಗೆ ಮಾಹಿತಿ ಸಂಗ್ರಹ
ಪ್ರಾಥಮಿಕ ವಿಚಾರಣೆಯಲ್ಲಿ ಆರೋಪಿಗೆ ಎಲ್ಲಿಂದ ಕರೆಗಳು ಬರುತ್ತಿದ್ದವು? ಯಾರಿಗೆ ಹೋಗುತ್ತಿತ್ತು? ಎಂಬ ಮಾಹಿತಿ ಇಲ್ಲ. ಆದರೆ, ಯಾರ ಸಹಕಾರದಿಂದ ಈ ರೀತಿಯ ಉಪಕರಣಗಳನ್ನು ಅಳವಡಿಸಲಾಗಿದೆ? ಜತೆಗೆ ಸಾವಿರಾರು ರೂ. ಸಿಮ್ ಕಾರ್ಡ್‌ಗಳನ್ನು ಯಾರಿಂದ ಪಡೆಯಲಾಗಿದೆ? ಎಂಬ ಮಾಹಿತಿ ಸಂಗ್ರಹಿಸಬೇಕಿದೆ. ಹೀಗಾಗಿ 10 ದಿನಗಳ ಕಾಲ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.
ಕೇರಳ, ಆಂಧ್ರ, ತ.ನಾಡಿನ ಸಿಮ್ಕಾರ್ಡ್
ಆರೋಪಿ ಬಳಿ ಸಿಕ್ಕಿರುವ 2 ಸಾವಿರಕ್ಕೂ ಅಧಿಕ ಸಿಮ್‌ಕಾರ್ಡ್‌ಗಳ ಬಗ್ಗೆ ಪ್ರಾಥಮಿಕ ಮಾಹಿತಿ ಸಂಗ್ರಹಿಸಿದಾಗ ಅವುಗಳನ್ನು ಕೇರಳ, ಆಂಧ್ರಪ್ರದೇಶ, ತಮಿಳುನಾಡಿನ ಗ್ರಾಮೀಣ ಪ್ರದೇಶದ ವ್ಯಕ್ತಿಗಳಿಗೆ ಹಣದ ಆಮಿಷವೊಡ್ಡಿ ಅವರ ದಾಖಲೆಗಳನ್ನು ಪಡೆದು ಸಿಮ್‌ಕಾರ್ಡ್‌ಗಳನ್ನು ಖರೀದಿಸಲಾಗಿದೆ. ಜತೆಗೆ ಹೆಸರಘಟ್ಟ, ಬೆಂಗಳೂರು ಗ್ರಾಮಾಂತರ ಭಾಗದ ಕೆಲ ವ್ಯಕ್ತಿಗಳ ಹೆಸರಿನಲ್ಲಿ ಸಿಮ್ ಕಾರ್ಡ್‌ಗಳನ್ನು ಪಡೆಯಲಾಗಿದೆ ಎಂಬುದು ಗೊತ್ತಾಗಿದೆ. ಆರೋಪಿ ಜತೆ ಕೇರಳ ಮೂಲದ ಕೆಲ ಅನುಮಾನಾಸ್ಪದ ವ್ಯಕ್ತಿಗಳು ನಿರಂತರ ಸಂಪರ್ಕದಲ್ಲಿರುವುದು ಪತ್ತೆಯಾಗಿದೆ. ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು.
ಇದನ್ನೂ ಓದಿ:ಕಲ್ಲಡ್ಕ: ಜ್ವರದಿಂದ ಬಳಲುತ್ತಿದ್ದ ಒಂದನೇ ತರಗತಿ ವಿದ್ಯಾರ್ಥಿನಿ ಸಾವು
ಪಾಕ್ ಕರೆ ಸತ್ಯ: ಮತ್ತೊಂದೆಡೆ ಆರೋಪಿಯ ಕರೆಗಳ ಪರಿವರ್ತನಾ ಕೇಂದ್ರಕ್ಕೆ ಪಾಕಿಸ್ತಾನದಿಂದ ಕರೆಗಳು ಬರುತ್ತಿರುವುದು ಖಚಿತವಾಗಿದೆ. ಪ್ರಮುಖವಾಗಿ ಪಾಕ್‌ನ ಗುಪ್ತಚರ ಸಂಸ್ಥೆ ಐಎಸ್‌ಐನ ಅಧಿಕಾರಿಗಳ ಕರೆಗಳು ಬೆಂಗಳೂರು, ಮುಂಬೈ, ದೆಹಲಿಗೆ ಹೋಗುತ್ತಿದ್ದವು ಎಂದು ಹೇಳಲಾಗಿದೆ. ಭಾರತೀಯ ಸೇನೆಯ ಗುಪ್ತಚರ ಮಾಹಿತಿ ಪ್ರಕಾರ, ಭಾರತೀಯ ಸೇನೆಯ ಮಾಹಿತಿ ಪಡೆಯಲು ನಿರ್ದಿಷ್ಟ ವ್ಯಕ್ತಿಗಳನ್ನು ಐಎಸ್‌ಐಏಜೆಂಟ್‌ಗಳು ಸಂಪರ್ಕಿಸುತ್ತಿದ್ದರು ಎನ್ನಲಾಗಿದೆ. ಈ ಕುರಿತು ಮಾಹಿತಿ ಪಡೆಯಬೇಕಿದೆ ಎಂದು ಸಿಸಿಬಿ ಮೂಲಗಳು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.